Home> Karnataka
Advertisement

CM basavaraj bommai Big Statement: 'ಸೈಲೆಂಟ್ ಸುನೀಲ್ ಸೇರಿ ಯಾವುದೇ ರೌಡಿಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ'

CM Basavaraj Bommai Big Statement: ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್‍ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

CM basavaraj bommai Big Statement: 'ಸೈಲೆಂಟ್ ಸುನೀಲ್ ಸೇರಿ ಯಾವುದೇ ರೌಡಿಶೀಟರ್‌ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ'

CM Basavaraj Bommai Big Statement: ಬೆಂಗಳೂರಿನ ಕುಖ್ಯಾತ ಗ್ಯಾಂಗ್‍ಸ್ಟರ್ ಸೇರಿದಂತೆ ಯಾವುದೇ ರೌಡಿಶೀಟರ್‍ಗಳನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ‘ಕಾಂಗ್ರೆಸ್ ಪಕ್ಷದ ಟ್ವೀಟ್‍ಗೆ ಸಂಬಂಧಿಸಿದಂತೆ  ರೌಡಿ ಶೀಟರ್‍ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್‍ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ’ ಅಂತಾ ಹೇಳಿದ್ದಾರೆ. ‘ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲ್ ಸೇರಿದಂತೆ ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ’ ಅಂತಾ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿಕೆಶಿ ದಿನನಿತ್ಯ ಬೀದಿಕಾಳಗ ಮಾಡ್ತಿದ್ದಾರೆ: ಬಿಜೆಪಿ

ಸೈಲೆಂಟ್ ಸುನಿಲ್‌ಗೆ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ!

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಸೈಲೆಂಟ್ ಸುನಿಲ್‍ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ. ಬೆಂಗಳೂರಿನಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಬಿಜೆಪಿಯ ಪ್ರಮುಖ ನಾಯಕರ ಜೊತೆಗೆ ಸುನಿಲ್ ಸಹ ಕಾಣಿಸಿಕೊಂಡಿದ್ದ. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಿಜೆಪಿ ಮುಖಂಡರಿಂದ ವಿವರಣೆ ಕೇಳಲಾಗುವುದು. ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು' ಎಂದು ಎಚ್ಚರಿಕೆ ನೀಡಿದ್ದರು.

'ಎಲ್ಲಾ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು. ಬಿಜೆಪಿ ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕೆಲಸ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಅಂತಾ ಕಟೀಲ್ ಹೇಳಿದ್ದರು. ಕಟೀಲ್ ಬೆನ್ನಲ್ಲಿಯೇ ರೌಡಿಶೀಟರ್ ಸುನಿಲ್ ಬಿಜೆಪಿ ಸೇರ್ಪಡೆ ವಿಚಾರವಾಗಿ ಸಿಎಂ ಬೊಮ್ಮಾಯಿಯವರು ಸಹ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಖರ್ಗೆ ಹೆಸರಿಗಷ್ಟೇ ಅಧ್ಯಕ್ಷ, ಪೆನ್ನಿನ ಟಾಪ್ ಓಪನ್ ಮಾಡಲೂ ಸೋನಿಯಾ ಅನುಮತಿಗೆ ಕಾಯಬೇಕು: ಬಿಜೆಪಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More