Home> Karnataka
Advertisement

ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರವಿದೆ : ಸಿಎಂ ಬೊಮ್ಮಾಯಿ ಭರವಸೆ

ಕಂದಾಯ ಸಚಿವರು ಕೊಡಗು ಮತ್ತು ಮಂಗಳೂರಿಗೆ ಹೋಗಿ ಬಂದಿದ್ದಾರೆ. ಇಡೀ ಸರ್ಕಾರವೇ  ಈ ಬಗ್ಗೆ ಕಾರ್ಯನಿರ್ವಹಿಸುತ್ತಿದೆ. ನಾನೂ ಸಹ ಇಂದು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯವಿರುವ ಸೂಚನೆ ಸಲಹೆಗಳನ್ನುನೀಡಲಿದ್ದೇನೆ. ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಾಣ ಮತ್ತು ಆಸ್ತಿ ಹಾನಿಯಾಗಿರುವ ಪ್ರದೇಶಗಳಲ್ಲಿ ಜನರ ಮನ ಓಲೈಸುವ ಕೆಲಸ ಮಾಡುತ್ತೇವೆ. ಸೆಸ್ಮಿಕ್ ವಲಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದರು.

ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರವಿದೆ : ಸಿಎಂ ಬೊಮ್ಮಾಯಿ ಭರವಸೆ

ಮೈಸೂರು:  ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರ ನಿಂತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನೂ ತೊಡಗಿಸಿಕೊಂಡು ಹಾಗೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನೂ ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ.  ಉಡುಪಿಯಲ್ಲಿ ಸಚಿವ ಎಸ್. ಅಂಗಾರ,  ಮಂಗಳೂರಿನಲ್ಲಿ ಸುನೀಲ್ ಕುಮಾರ್‌, ಉತ್ತರ ಕನ್ನಡದಲ್ಲಿ ಕೋಟ ಶ್ರೀನಿವಾಸ ಪೂಜಾರಿ  ಹಾಗೂ ಎಸ್.ಟಿ ಸೋಮಶೇಖರ್ ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ ಎಂದರು. 

ಇದನ್ನೂ ಓದಿ: Viral Video : ಗೆಳೆಯರ ಈ ಕೆಲಸದಿಂದ ನೆತ್ತಿಗೇರಿತು ವರನ ಕೋಪ .! ಮುಂದೆ ..?

ಕಂದಾಯ ಸಚಿವರು ಕೊಡಗು ಮತ್ತು ಮಂಗಳೂರಿಗೆ ಹೋಗಿ ಬಂದಿದ್ದಾರೆ. ಇಡೀ ಸರ್ಕಾರವೇ  ಈ ಬಗ್ಗೆ ಕಾರ್ಯನಿರ್ವಹಿಸುತ್ತಿದೆ. ನಾನೂ ಸಹ ಇಂದು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯವಿರುವ ಸೂಚನೆ ಸಲಹೆಗಳನ್ನುನೀಡಲಿದ್ದೇನೆ. ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಾಣ ಮತ್ತು ಆಸ್ತಿ ಹಾನಿಯಾಗಿರುವ ಪ್ರದೇಶಗಳಲ್ಲಿ ಜನರ ಮನ ಓಲೈಸುವ ಕೆಲಸ ಮಾಡುತ್ತೇವೆ. ಸೆಸ್ಮಿಕ್ ವಲಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದರು.

ಪ್ರಾಥಮಿಕ ಸಮೀಕ್ಷೆ:
ಮಳೆಯಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವು ಕಡೆ ಭೂ ಕುಸಿತವಾಗಿದ್ದು, ಕೊಡಗಿನಲ್ಲಿ ಭೂಕಂಪ, ಕರಾವಳಿ ಭಾಗದಲ್ಲಿ ಕಡಲು ಕೊರೆತವಾಗಿದ್ದು, ಉತ್ತರ ಕರ್ನಾಟಕದಲ್ಲಿ ನದಿ ಪಕ್ಕದಲ್ಲಿರುವ ಮನೆಗಳಿಗೆ ಹಾನಿಯಾಗಿದೆ. ಅಲ್ಲಲ್ಲಿ ಜಲಾಶಯಗಳಿಂದ ನೀರು ಹೊರಬಿಟ್ಟ ಸಂದರ್ಭದಲ್ಲಿ  ಬೆಳೆ ಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆ ಮಾಡಲಾಗುತ್ತಿದೆ. ಪ್ರಥಮ ಹಂತದ ಸಮೀಕ್ಷೆಯಾಗಿದೆ. ಈ ಬಗ್ಗೆ ನಿಖರ ಮಾಹಿತಿ ನೀಡಲಾಗುವುದು ಎಂದರು. 

ಎನ್‌ಡಿಆರ್‌ಎಫ್‌ನಲ್ಲಿ  730 ಕೋಟಿ ರೂ. ಲಭ್ಯ:
ಬೆಳೆ ಹಾನಿ ಅಂದಾಜು ಮಾಡಿದ ನಂತರ ಕೇಂದ್ರದಿಂದ ಪರಿಹಾರ ಕೇಳುವ ಬಗ್ಗೆ ತೀರ್ಮಾನಿಸಲಾಗುವುದು. ಎನ್‌ಡಿಆರ್‌ಎಫ್‌ನಲ್ಲಿ  730 ಕೋಟಿ ರೂ.ಗಳು ಲಭ್ಯವಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ ಎಂದರು. 

ನದಿ ಪಾತ್ರಗಳಲ್ಲಿನ ಗ್ರಾಮಗಳ ಸುರಕ್ಷತೆಗೆ ಕ್ರಮ: 
ಉತ್ತರ ಕರ್ನಾಟಕದಲ್ಲಿ 63 ಊರುಗಳನ್ನು ಸ್ಥಳಾಂತರಿಸಲಾಗಿದೆ. ಕೆಲವು ಕಡೆ ಜನರು ಸ್ಥಳಾಂತರವಾಗಿಲ್ಲ. ವಿಶೇಷವಾಗಿ ನದಿ ಪಾತ್ರಲ್ಲಿರುವ ಗ್ರಾಮಗಳಲ್ಲಿನ ಮನೆಗಳನ್ನು ಸ್ಥಳಾಂತರ ಮಾಡಿ ಸುರಕ್ಷಿತಗೊಳಿಸಲು ತಜ್ಞರ ಅಭಿಪ್ರಾಯ ಕೇಳಲಾಗಿದೆ. ಆ ಪ್ರಕಾರ ವಿಶೇಷವಾದ ಯೋಜನೆಗಳನ್ನು ರೂಪಿಸಲಾಗುವುದು ಎಂದರು. 

ಇದನ್ನೂ ಓದಿ: July 12: ಮಕರ ರಾಶಿಗೆ ಶನಿಯ ಪ್ರವೇಶ, ಶನಿಯ ಕೆಟ್ಟದೃಷ್ಟಿಯಿಂದ ಪಾರಾಗಲು ಈ ಉಪಾಯಗಳನ್ನು ಮಾಡಿ

ನಿಗಮ ಮಂಡಳಿ :ಹೊಸಬರಿಗೆ ಅವಕಾಶ
ನಿಗಮ ಮಂಡಳಿಗಳ ಕೋರ್ ಸಮಿತಿಯಲ್ಲಿ ಒಂದೂವರೆ ವರ್ಷ ಅನುಭವಕ್ಕಿಂತ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ತೀರ್ಮಾನವಾಗಿದೆ. ಬೇರೆಯವರಿಗೂ ಅವಕಾಶ ಒದಗಿಸಲಾಗುತ್ತಿದೆ ಎಂದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Read More