Home> Karnataka
Advertisement

ಜನರಿಗೆ ಪರಿಹಾರ ಒದಗಿಸುವ ಅಧಿವೇಶನವಾಗಲಿದೆ: ಸಿಎಂ ಬೊಮ್ಮಾಯಿ ಭರವಸೆ

ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯವನ್ನು ಮುನ್ನಡೆಸುವ ದಿಸೆಯಲ್ಲಿ ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಬೇಕಿದೆ. ಹಲವಾರು ಕಾನೂನುಗಳ ರಚನೆಗಳ ಉದ್ದೇಶದಿಂದ ಕಲಾಪ ನಡೆಸಲಾಗುತ್ತಿದೆ ಎಂದರು.

ಜನರಿಗೆ ಪರಿಹಾರ ಒದಗಿಸುವ ಅಧಿವೇಶನವಾಗಲಿದೆ: ಸಿಎಂ ಬೊಮ್ಮಾಯಿ ಭರವಸೆ

ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚಿಸಿ, ಜನರಿಗೆ ಪರಿಹಾರ ಒದಗಿಸುವ ಅಧಿವೇಶನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ: ಬೆಳಗಾವಿ ಚಳಿಗಾಲದ ಅಧಿವೇಶನ: ಏಕರೂಪ ನಾಗರಿಕ ಸಂಹಿತೆ (UCC) ಮಂಡನೆ?

ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದು ಸುವರ್ಣ ವಿಧಾನಸೌಧಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯವನ್ನು ಮುನ್ನಡೆಸುವ ದಿಸೆಯಲ್ಲಿ ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚೆಯಾಗಬೇಕಿದೆ. ಹಲವಾರು ಕಾನೂನುಗಳ ರಚನೆಗಳ ಉದ್ದೇಶದಿಂದ ಕಲಾಪ ನಡೆಸಲಾಗುತ್ತಿದೆ ಎಂದರು.

ವಿಧಾನಸಭೆಯಲ್ಲಿ ಭಾವಚಿತ್ರಗಳ ಅನಾವರಣವಾಗಲಿದ್ದು, ಕಾಂಗ್ರೆಸ್ ಈ ಬಗ್ಗೆ ಅಪಸ್ವರ ಎತ್ತಿದ್ದಾರೆ. ಎಲ್ಲ ಮಹನೀಯರುಗಳ ಭಾವಚಿತ್ರವನ್ನು ಅಳವಡಿಸುವ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪತ್ರದ ವಿಚಾರ ಗಮನಕ್ಕೆ ಬಂದಿಲ್ಲ ಹಾಗೂ ವಿಧಾನಸಭೆಯಲ್ಲಿ ಭಾವಚಿತ್ರ ಅನಾವರಣಗೊಳಿಸುವುದು ಸ್ಪೀಕರ್ ರವರ ವಿವೇಚನೆಗೆ ಬಿಟ್ಟಿರುವ ವಿಚಾರ. ವಿರೋಧ ಪಕ್ಷದ ನಾಯಕರು ಹಾಗೂ ಸ್ಪೀಕರ್ ರೊಂದಿಗೂ ಈ ವಿಚಾರದ ಬಗ್ಗೆ ಮಾತಾನಾಡಲಾಗುವುದು ಎಂದರು.

ಇದನ್ನೂ ಓದಿ: ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಸಾವರ್ಕರ್ ಕೂಡ ಇದ್ದರು: ವಿಪಕ್ಷ ನಾಯಕ ಸಿದ್ದರಾಮಯ್ಯ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಉತ್ತರಿಸಿ, ಸಮುದಾಯಕ್ಕೆ ಮೀಸಲಾತಿ ನೀಡಲು ಯಾವುದೇ ಗಡುವು ನಿಗದಿಪಡಿಸಿಲ್ಲ. ಹಿಂದುಳಿದ ವರ್ಗಗಳ ಆಯೋಗದಿಂದ ಶೀಘ್ರದಲ್ಲಿ ವರದಿ ಬರುವ ವಿಶ್ವಾಸವಿದೆ ಎಂದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More