Home> Karnataka
Advertisement

ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು: ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ನೀತಿ ಆಯೋಗದ ಸಭೆಗೆ ತಮಿಳುನಾಡು, ತೆಲಂಗಾಣ, ಕೇರಳ, ಕರ್ನಾಟಕ, ದೆಹಲಿ, ಹಿಮಾಚಲ ಪ್ರದೇಶ, ಜಾರ್ಖಂಡ್ ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದರು. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಅಭಿವೃದ್ಧಿ ಮತ್ತು ಆ ರಾಜ್ಯಗಳ ಜನರ ಹಿತದೃಷ್ಟಿಯಿಂದ ಒಳ್ಳೆಯದಲ್ಲವೆಂದು ಕುಮಾರಸ್ವಾಮಿ ಹೇಳಿದ್ದಾರೆ.​

ನೀತಿ ಆಯೋಗದ ಸಭೆಗೆ ಸಿಎಂ ಸಿದ್ದರಾಮಯ್ಯ ಗೈರು: ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ನವದೆಹಲಿ: ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದು, ರಾಜ್ಯ ಸರ್ಕಾರವು ಕೇಂದ್ರದೊಂದಿಗೆ ನಿರಂತರವಾಗಿ ಸಂಘರ್ಷ ನಡೆಸುತ್ತಿದೆ. ಇದಕ್ಕೆ ವಿಶ್ವಾಸದ ಕೊರತೆಯೇ ಕಾರಣವೆಂದು ಕಿಡಿಕಾರಿದ್ದಾರೆ.  

ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದ ಎಚ್‌ಡಿಕೆ, ಇಂತಹ ವಿಶ್ವಾಸದ ಕೊರತೆಯಿಂದ ಒಕ್ಕೂಟ ವ್ಯವಸ್ಥೆಗೆ ದಕ್ಕೆ ಉಂಟಾಗಲಿದೆ. ಇದರಿಂದ ನಾಡಿಗೆ ಸಂಕಷ್ಟ ಬರಲಿದೆ. ರಾಜ್ಯಕ್ಕೆ ಒಳ್ಳೆಯದು ಮಾಡುವ ನೈಜ ಉದ್ದೇಶ ಇದ್ದಿದ್ದರೆ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು ಎಂದು ಹೇಳಿದರು.

ಇದನ್ನೂ ಓದಿ: ನಟ ದರ್ಶನ್‌ ಜೊತೆ ರಾಜಿ ಆಗುತ್ತಾ ಚಿತ್ರದುರ್ಗದ ರೇಣುಕಾಸ್ವಾಮಿ ಫ್ಯಾಮಿಲಿ?

ಇಂತಹ ವಿಶ್ವಾಸ ಕೊರತೆಗೆ ಕಾಂಗ್ರೆಸ್ ಪಕ್ಷವೇ ನೇರ ಕಾರಣ ಎನ್ನುವುದರಲ್ಲಿ ಸಂಶಯ ಇಲ್ಲವೆಂದ ಎಚ್‌ಡಿಕೆ, ಪ್ರಧಾನಿ ಮೋದಿಯವರು ನೀತಿ ಆಯೋಗದ ಸಭೆಯನ್ನು ಕರೆದು ʼವಿಕಸಿತ ಭಾರತʼದ ಗುರಿ ಸಾಧಿಸುವ ಬಗ್ಗೆ ಚರ್ಚಿಸಿದರು. ಅದಕ್ಕಾಗಿ ತಮ್ಮ ಮುನ್ನೋಟವನ್ನು ಸಭೆಯಲ್ಲಿ ಪ್ರಸುತ್ತಪಡಿಸಿದರು. ಕರ್ನಾಟಕವೂ ಸೇರಿ ಎಲ್ಲಾ ರಾಜ್ಯಗಳು ಭಾಗವಹಿಸಬೇಕಿತ್ತು ಎನ್ನುವುದು ನನ್ನ ಅಭಿಪ್ರಾಯ ಎಂದು ಕುಮಾರಸ್ವಾಮಿ ಹೇಳಿದರು.

ಸಭೆಗೆ ಎನ್‌ಡಿಎ ಒಕ್ಕೂಟದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಬಂದಿದ್ದರು. ನಿತೀಶ್ ಕುಮಾರ್ ಅವರು ಆರೋಗ್ಯದ ಸಮಸ್ಯೆಯಿಂದ ಬಂದಿರಲಿಲ್ಲ. ತಮಿಳುನಾಡು, ತೆಲಂಗಾಣ, ಕೇರಳ, ಕರ್ನಾಟಕ, ದೆಹಲಿ, ಹಿಮಾಚಲ ಪ್ರದೇಶ, ಜಾರ್ಖಂಡ್ ರಾಜ್ಯಗಳ ಮುಖ್ಯಮಂತ್ರಿಗಳು ಗೈರಾಗಿದ್ದರು. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಅಭಿವೃದ್ಧಿ ಮತ್ತು ಆ ರಾಜ್ಯಗಳ ಜನರ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಇದರಿಂದ ಅವರು ಏನು ಸಾಧನೆ ಮಾಡುತ್ತಾರೆ. ಅನ್ಯಾಯ ಆಗಿದ್ದರೆ ಸಭೆಯಲ್ಲಿ ಬಂದು ಚರ್ಚಿಸಬೇಕಾಗಿತ್ತು. ಬೀದಿಯಲ್ಲಿ ನಿಂತು ಮಾತನಾಡಿದರೆ ಏನು ಸಿಗುತ್ತದೆ? ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: Karnataka Rains: ಕರ್ನಾಟಕಕ್ಕೆ ಜಲ ಕಂಟಕ.. ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ, ಬಿರುಗಾಳಿ ಗುಡುಗು ಮಿಂಚು ಸಹಿತ ವರುಣಾರ್ಭಟದ ಎಚ್ಚರಿಕೆ!

ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ನಿರಂತರವಾಗಿ ಒಂದಲ್ಲ ಒಂದು ಕಾರಣಕ್ಕೆ ಸಂಘರ್ಷ ಮಾಡಿಕೊಳ್ಳುತ್ತಿದೆ. ರಾಜ್ಯ ಸರ್ಕಾರದ ವಿಶ್ವಾಸದ ಕೊರತೆಯಿಂದ ಕೂಡಿದೆ. ಒಕ್ಕೂಟ ವ್ಯವಸ್ಥೆಗೆ ಇದು ಒಳ್ಳೇಯದಲ್ಲ. ಇದರಿಂದ ನಾಡಿಗೆ ಸಂಕಷ್ಟ ಬರಲಿದೆ. ಇದಕ್ಕೆ ಕಾಂಗ್ರೆಸ್‌ ಪಕ್ಷವೇ ನೇರ ಕಾರಣ ಎಂದು ಕುಮಾರಸ್ವಾಮಿ ದೂರಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More