Home> Karnataka
Advertisement

ಬಿಜೆಪಿ ನಾಯಕರೇ, ಸರ್ಕಾರ ಸುಭದ್ರವಾಗಿದೆ! ದಿವಾಳಿಯಾಗಿರುವುದು ನಿಮ್ಮ ಬುದ್ಧಿಯೇ ಹೊರತು ನಮ್ಮ ರಾಜ್ಯವಲ್ಲ: ಸಿಎಂ

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ ರೂ.84,528 ಕೋಟಿ, ಅವರು 2021-22ರಲ್ಲಿ ರೂ.67,332 ಕೋಟಿ ಮತ್ತು 2022-23ರ ಅವಧಿಯಲ್ಲಿ ರೂ.72,000 ಕೋಟಿ ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ ರೂ.43,580 ಕೋಟಿ ಬಳಕೆ ಮಾಡಿದ್ದರು. ಈಗ ಆ ಸಾಲವನ್ನು ನಾವು ತೀರಿಸಬೇಕಾಗಿದೆ.

ಬಿಜೆಪಿ ನಾಯಕರೇ,  ಸರ್ಕಾರ ಸುಭದ್ರವಾಗಿದೆ! ದಿವಾಳಿಯಾಗಿರುವುದು ನಿಮ್ಮ ಬುದ್ಧಿಯೇ ಹೊರತು ನಮ್ಮ ರಾಜ್ಯವಲ್ಲ: ಸಿಎಂ

Lok Sabha Election 2024: ಸನ್ಮಾನ್ಯ ಬಿಜೆಪಿ ನಾಯಕರೇ, ನಮ್ಮ ಸರ್ಕಾರ ಸುಭದ್ರವಾಗಿದೆ, ದಿವಾಳಿಯಾಗಿರುವುದು ನಿಮ್ಮ ಬುದ್ದಿಯೇ ಹೊರತು ನಮ್ಮ ರಾಜ್ಯ ಅಲ್ಲ. ದಿನಕ್ಕೊಂದು ಸುಳ್ಳು ಹೇಳುತ್ತಾ, ಆ ಸುಳ್ಳು ಬಯಲಾದಾಗ ಮತ್ತೆ ಅದನ್ನು ಸಮರ್ಥಿಸಲು ಇನ್ನೊಂದಿಷ್ಟು ಸುಳ್ಳುಗಳನ್ನು ಸೃಷ್ಟಿಸುತ್ತಾ ನಿಮ್ಮನ್ನು ನೀವೇ ಬತ್ತಲೆ ಮಾಡಿಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಳೆದ ವರ್ಷದ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ರೂ.10,000 ಕೋಟಿ ಸಾಲ ಮಾಡಿದ್ದ ಕಾರಣಕ್ಕಾಗಿ ರಾಜ್ಯ ದಿವಾಳಿಯಾಗುತ್ತಿದೆ ಎಂದು ಬೊಬ್ಬಿಡುತ್ತಿರುವ ನೀವು, ನಿಮ್ಮ ಸರ್ಕಾರದ ಕಾಲದಲ್ಲಿನ ಸಾಲದ ಲೆಕ್ಕವನ್ನು ಪರಿಶೀಲಿಸುವ ಕಷ್ಟ ತೆಗೆದುಕೊಂಡಿದ್ದರೆ ಈ ರೀತಿ ನಮ್ಮ ಕೈಗೆ ಬಡಿಗೆ ಕೊಟ್ಟು ಹೊಡೆಸಿಕೊಳ್ಳುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. 

ಇದನ್ನೂ ಓದಿ- ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆ ವೇಳೆ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ. ಕೋರ್ಟ್ ನಲ್ಲಿ ನ್ಯಾಯ ಸಿಗತ್ತೆ: ಸಿಎಂ ಸಿದ್ದರಾಮಯ್ಯ

ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ ರೂ.84,528 ಕೋಟಿ, ಅವರು 2021-22ರಲ್ಲಿ ರೂ.67,332 ಕೋಟಿ ಮತ್ತು 2022-23ರ ಅವಧಿಯಲ್ಲಿ ರೂ.72,000 ಕೋಟಿ ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ ರೂ.43,580 ಕೋಟಿ ಬಳಕೆ ಮಾಡಿದ್ದರು. ಈಗ ಆ ಸಾಲವನ್ನು ನಾವು ತೀರಿಸಬೇಕಾಗಿದೆ. ನಮ್ಮ ಸರ್ಕಾರದ ಮೇಲೆ ಆರೋಪ ಮಾಡುವ ಮೊದಲು ಕನಿಷ್ಠ ಬಸವರಾಜ ಬೊಮ್ಮಾಯಿ ಅವರನ್ನಾದರೂ ಕೇಳುವುದು ಬೇಡವೇ? ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. 

ಸ್ವಾತಂತ್ರ್ಯ ಬಂದಾಗಿನಿಂದ 2018ರ ವರೆಗಿನ ರಾಜ್ಯ ಸರ್ಕಾರದ ಒಟ್ಟು ಸಾಲದ ಮೊತ್ತ ರೂ.2.42 ಲಕ್ಷ ಕೋಟಿ ಆಗಿತ್ತು. 2018ರಿಂದ 2023ರ ವರೆಗಿನ ಐದು ವರ್ಷಗಳ ಅವಧಿಯಲ್ಲಿ ಈ ಸಾಲ ರೂ.5.40 ಲಕ್ಷ ಕೋಟಿಗಳಿಗೆ ಏರಿತ್ತು. ಕೇವಲ ಐದು ವರ್ಷಗಳ ಅವದಿಯಲ್ಲಿ ರಾಜ್ಯದ ಸಾಲ 3 ಲಕ್ಷ ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದ್ದು ಯಾವ ಪಕ್ಷದ ಆಡಳಿತದಲ್ಲಿ ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಂಡು ರಾಜ್ಯದ ಜನತೆಗೆ ತಿಳಿಸುವಂತವರಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರನ್ನು ಆಗ್ರಹಿಸಿದ್ದಾರೆ. 

ಇದನ್ನೂ ಓದಿ- ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರೇ, ಈ ಆಡಳಿತ, ಆರ್ಥಿಕತೆ, ಅಭಿವೃದ್ದಿ ವಿಚಾರಗಳೆಲ್ಲ ನಿಮ್ಮ ಚಹದ ಬಟ್ಟಲಲ್ಲ, ಹಿಂದು-ಮುಸ್ಲಿಂ, ಕೋಮುವಾದ, ಪಾಕಿಸ್ತಾನ, ಮುಸ್ಲಿಂ ಲೀಗ್  ಮೊದಲಾದ ವಿಚಾರಗಳನ್ನು ಜನರ ತಲೆಗೆ ತುಂಬಿ ಸೌಹಾರ್ದತೆಯಿಂದ ಬಾಳುತ್ತಿದ್ದ ಜನರನ್ನು ಪರಸ್ಪರ ಸಂಘರ್ಷಕ್ಕಿಳಿಸಿ ರಾಜಕೀಯ ಲಾಭ ಪಡೆಯುವುದಕ್ಕಷ್ಟೇ ನೀವು ಸಮರ್ಥರು. ಯಾರು ಸುಳ್ಳು ರಾಮಯ್ಯ, ಯಾರು ಸತ್ಯ ರಾಮಯ್ಯ ಎನ್ನುವುದನ್ನು ರಾಜ್ಯದ ಜನ ತಿಳಿದುಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಅವರು ನಿಮಗೆ ಉತ್ತರವನ್ನೂ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More