Home> Karnataka
Advertisement

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Karnataka New education policy : ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ಕೇಂದ್ರ ಹೇರಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 
 

ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು.

ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ಕೇಂದ್ರ ಹೇರಲಾಗದು. ಹೇರಲು ಹೊರಟಿರುವುದು ಒಂದು ಹುನ್ನಾರ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಮಾಡಲಾಗದು. ಆದ್ದರಿಂದ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

ಇದನ್ನೂ ಓದಿ: OMG: SC/ST ವಿದ್ಯಾರ್ಥಿಗಳಿಗೆ ಮುಗ್ಗಲು, ಹುಳ ಬಿದ್ದ ಅಕ್ಕಿಯಲ್ಲೇ ಆಹಾರ ಸಿದ್ಧತೆ!

ಬಿಜೆಪಿ ಆಳ್ವಿಕೆಯ ಇತರ ರಾಜ್ಯಗಳೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹಿಂದೇಟಾಕುತ್ತಿವೆ. ಕೇರಳ, ತಮಿಳು ನಾಡು ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವುದಿಲ್ಲ ಎಂದು ಕೇಂದ್ರಕ್ಕೆ ಸ್ಪಷ್ಟಪಡಿಸಿವೆ ಎಂದು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಕೇಂದ್ರ ಪುರಸ್ಕೃತ ಯೋಜನೆಗಳು ಎಲ್ಲ ರಾಜ್ಯಗಳಿಗೂ ಅನ್ವಯಿಸುವುದರಿಂದ ರಾಜ್ಯಕ್ಕೆ ಅನ್ಯಾಯವಾಗಲಾರದು ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಇದರಿಂದ ಬಡವರು, ಪರಿಶಿಷ್ಟ ಜಾತಿ, ಪಂಗಡದವರು, ಹಿಂದುಳಿದವರು, ಗ್ರಾಮೀಣ ಪ್ರದೇಶದವರಿಗೆ ತೊಂದರೆಯಾಗುತ್ತದೆ. ಉನ್ನತ ಶಿಕ್ಷಣದಲ್ಲಿ ಪ್ರತಿ ವರ್ಷ ಪ್ರಮಾಣ ಪತ್ರ ನೀಡಿದರೂ, ಒಂದು ವರ್ಷ, ಎರಡು ವರ್ಷ ಓದಿದವರಿಗೆ ಎಷ್ಟು ಉದ್ಯೋಗಾವಕಾಶ ದೊರೆಯಲು ಸಾಧ್ಯ? ಉದ್ಯೋಗವಕಾಶ ದೊರೆತು ಹೋದ ಬಡವರ ಮಕ್ಕಳು ಮತ್ತೆ ಓದಲು ಎಷ್ಟು ಅವಕಾಶ ದೊರೆಯುವುದು? ಎಂಬ ಅನುಮಾನ ವ್ಯಕ್ತಪಡಿಸಿದರು.
ಈ ಶಿಕ್ಷಣ ನೀತಿ ಜಾರಿಗೊಳಿಸಲು ಅಗತ್ಯ ಮೂಲಸೌಲಭ್ಯಗಳು ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲ. ಇದರಿಂದ ಅನಗತ್ಯ ಗೊಂದಲಗಳು ಸೃಷ್ಟಿಯಾಗಿದೆ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಹಳೆ ಬಸ್‌ಗೆ ಹೊಸ ಲುಕ್..! ನೂತನ ಬಸ್‌ಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟ ಸಾರಿಗೆ ಸಚಿವರು 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More