Home> Karnataka
Advertisement

KS Eshwarappa: ಸಚಿವ ಈಶ್ವರಪ್ಪರನ್ನು ವಜಾಗೊಳಿಸಿ, ಬಂಧಿಸುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ

ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಇಡೀ ದೇಶದಲ್ಲಿ ಕರ್ನಾಟಕಕ್ಕೆ ಇದೊಂದು ಕಪ್ಪು ಚುಕ್ಕೆ ಎಂದು ಡಿಕೆಶಿ ಹೇಳಿದ್ದಾರೆ.

KS Eshwarappa: ಸಚಿವ ಈಶ್ವರಪ್ಪರನ್ನು ವಜಾಗೊಳಿಸಿ, ಬಂಧಿಸುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ

ಬೆಂಗಳೂರು: ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ಸಂಪುಟದಿಂದ ಕೈಬಿಟ್ಟು ಬಂಧಿಸುವಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ. ಬುಧವಾರ ರಾಜ್ಯಪಾಲರನ್ನು ಭೇಟಿ ಮಾಡಿರುವ ಕಾಂಗ್ರೆಸ್ ನಿಯೋಗವು ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ.

40% ಕಮಿಷನ್‌ಗಾಗಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಅವರನ್ನು ಬಂಧಿಸಿ ಭ್ರಷ್ಟಾಚಾರ ಹಾಗೂ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಇದನ್ನೂ ಓದಿ: Siddaramaiah : 'ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಸಚಿವರು ಭ್ರಷ್ಟರೇ'

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಸಂಸದ ಡಿ.ಕೆ.ಸುರೇಶ್, ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಎಚ್.ಎಂ.ರೇವಣ್ಣ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರ ನಿಯೋಗ ರಾಜಭವನಕ್ಕೆ ಭೇಟಿಕೊಟ್ಟು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಪತ್ರ ಸಲ್ಲಿಸಿತು.

ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಇಡೀ ದೇಶದಲ್ಲಿ ಕರ್ನಾಟಕಕ್ಕೆ ಇದೊಂದು ಕಪ್ಪು ಚುಕ್ಕೆ. ಮೊದಲು ಆರೋಪಿಗಳನ್ನು ಬಂಧಿಸಬೇಕೆಂದು ಇದೇ ವೇಳೆ ಡಿಕೆಶಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: 40% ಕಮಿಷನ್ ನಲ್ಲಿ ಸಿಎಂ ಬೊಮ್ಮಾಯಿ ಪಾಲುದಾರರಾ?- ಬಿ ಕೆ ಹರಿಪ್ರಸಾದ್ ವಾಗ್ದಾಳಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ‘ಇದು ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ವಿಧಾನಸಭೆಯಲ್ಲಿ ಕಮಿಷನ್ ಬಗ್ಗೆ ಚರ್ಚೆಗೆ ಮನವಿ ಮಾಡಿದ್ದೆವು. ಆದರೆ, ನಮಗೆ ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ. ಆಗ ಚರ್ಚೆಗೆ ಅವಕಾಶ ನೀಡಿದ್ದರೆ ಇಂದು ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ. ಗುತ್ತಿಗೆದಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಸಚಿವ ಈಶ್ವರಪ್ಪ ವಿರುದ್ಧ ಆರೋಪಮಾಡಿದ್ದಾನೆ. ಭ್ರಷ್ಟಾಚಾರದ ಬಗ್ಗೆಯೂ ತನಿಖೆಯಾಗಬೇಕು. ಈ ಹೋರಾಟವನ್ನು ಕಾಂಗ್ರೆಸ್ ಇಲ್ಲಿಗೇ ಬಿಡುವುದಿಲ್ಲ. ರಾಜ್ಯದ ಜನರ ಪರವಾಗಿ ನಾವು ಹೋರಾಟ ಮಾಡುತ್ತೇವೆ’ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More