Home> Karnataka
Advertisement

ಚುನಾವಣಾ ಹೊಸ್ತಿಲಿನಲ್ಲಿ ಸಿದ್ದರಾಮಯ್ಯ & ಡಿಕೆಶಿ ನಡುವೆ ಕದನ: ಬಿಜೆಪಿ ವ್ಯಂಗ್ಯ

ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಆಕಾಂಕ್ಷಿಗಳಿಂದ ಡಿಕೆಶಿ ಅರ್ಜಿ ಸ್ವೀಕರಿಸುತ್ತಿದ್ದರೆ, ಇತ್ತ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಘೋಷಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಲೆ ಇಲ್ಲವೇ? ಎಂದು BJP ಪ್ರಶ್ನಿಸಿದೆ.

ಚುನಾವಣಾ ಹೊಸ್ತಿಲಿನಲ್ಲಿ ಸಿದ್ದರಾಮಯ್ಯ & ಡಿಕೆಶಿ ನಡುವೆ ಕದನ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಚುನಾವಣಾ ಹೊಸ್ತಿಲಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ‍ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಕದನ ಮತ್ತೊಂದು ಹಂತ ತಲುಪಿದೆ ಎಂದು ಬಿಜೆಪಿ ವ್ಯಂಗ್ಯವಾಗಿಡೆ.

ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯರಿಗೆ ಹಕ್ಕಿಲ್ಲವೆಂದು ಹೇಳಿರುವ ಡಿಕೆಶಿ ಹೇಳಿಕೆ ವಿಚಾರವಾಗಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ನಡುವಿನ ಕಿತ್ತಾಟವನ್ನು ಲೇವಡಿ ಮಾಡಿದೆ.

#SidduVsDKS ಹ್ಯಾಶ್‍ಟ್ಯಾಗ್ ಬಳಸಿ ಟೀಕಾಪ್ರಹಾರ ನಡೆಸಿರುವ ಬಿಜೆಪಿ, ‘ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಆಕಾಂಕ್ಷಿಗಳಿಂದ ಡಿಕೆಶಿ ಅರ್ಜಿ ಸ್ವೀಕರಿಸುತ್ತಿದ್ದರೆ, ಇತ್ತ ಸಿದ್ದರಾಮಯ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಘೋಷಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಲೆ ಇಲ್ಲವೇ?’ ಎಂದು ಪ್ರಶ್ನಿಸಿದೆ.

fallbacks

ಇದನ್ನೂ ಓದಿ: ನಿಷ್ಕ್ರಿಯತೆ ಮತ್ತು ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಬಿಜೆಪಿ: ಕಾಂಗ್ರೆಸ್ ಆಕ್ರೋಶ

‘ತಮ್ಮ ಬೆಂಬಲಿಗರನ್ನು ಮುಂದಿನ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಸಿದ್ದರಾಮಯ್ಯ ತಮ್ಮ ಬಣವನ್ನು ಗಟ್ಟಿಗೊಳಿಸುತ್ತಿದ್ದಾರೆ. ಟಿಕೆಟ್‌ ಘೋಷಿಸುವ ಹಕ್ಕು ಸಿದ್ದರಾಮಯ್ಯಗಿಲ್ಲ ಎನ್ನುತ್ತಲೇ ಸಿದ್ದರಾಮಯ್ಯ ಅವರಿಗೆ ಡಿಕೆಶಿ ಎದಿರೇಟು ನೀಡಿದ್ದಾರೆ. ಮುಂದಿನ ಚುನಾವಣೆ ಈ ಇಬ್ಬರು ನಾಯಕರ ಬಣಗಳ ನಡುವಿನ ಹೋರಾಟವಾಗಲಿದೆಯೇ?’ ಎಂದು ಬಿಜೆಪಿ ಪ್ರಶ್ನಿಸಿದೆ.

fallbacks

ಭಾನುವಾರ ಕೊಪ್ಪಳದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಡಿಕೆಶಿ ತಿರುಗೇಟು ನೀಡಿದ್ದರು. ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯರಿಗೆ ಇಲ್ಲ, ನನಗೂ ಘೋಷಣೆ ಮಾಡುವ ಹಕ್ಕಿಲ್ಲ. ಎಐಸಿಸಿಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡುವ ಹಕ್ಕಿದೆ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ನಮಗೆ ಮಲ್ಲಿಕಾರ್ಜುನ್ ಖರ್ಗೆಯವರೇ ಹೈ ಕಮಾಂಡ್, ಅವರಿಗೆ ಮಾತ್ರ ಅಭ್ಯರ್ಥಿ ಘೋಷಿಸುವ ಹಕ್ಕಿದೆ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಬಿಬಿಎಂಪಿ, ಬಿಡಿಎ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು : ಸಿಎಂ ಬೊಮ್ಮಾಯಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More