Home> Karnataka
Advertisement

ಉಪಚುನಾವಣೆ ಫಲಿತಾಂಶ: ಮತಎಣಿಕೆಗೆ ಕ್ಷಣಗಣನೆ ಆರಂಭ

ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಗೆ ನವೆಂಬರ್ 3 ರಂದು ಮತದಾನ ನಡೆದಿತ್ತು. 

ಉಪಚುನಾವಣೆ ಫಲಿತಾಂಶ: ಮತಎಣಿಕೆಗೆ ಕ್ಷಣಗಣನೆ ಆರಂಭ

ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಮತ್ತು ಮೂರೂ ಲೋಕಸಭಾ ಕ್ಷೇತ್ರಗಳಿಗೆ ಇತ್ತೀಚಿಗೆ ನಡೆದ ಚುನಾವಣೆಯ ಮತಎಣಿಕೆ ಶನಿವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಹೀಗಾಗಿ ಈ ಐದು ಕ್ಷೇತ್ರಗಳಲ್ಲಿ ವಿಜಯಲಕ್ಷ್ಮಿ ಒಲಿಯಲಿದ್ದಾಳೆ ಎಂಬುದು ಮಧ್ಯಾಹ್ನದೊಳಗೆ ತಿಳಿಯಲಿದೆ.  

ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಗೆ ನವೆಂಬರ್ 3 ರಂದು ಮತದಾನ ನಡೆದಿತ್ತು. ಶಿವಮೊಗ್ಗದಲ್ಲಿ 61.05%, ಬಳ್ಳಾರಿಯಲ್ಲಿ 63.85%, ಮಂಡ್ಯದಲ್ಲಿ 53.95%, ರಾಮನಗರ 73.71%, ಜಮಖಂಡಿ 81.58% ಮತದಾನವಾಗಿತ್ತು.

ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸಿ ಎರಡೂ ಕಡೆಗಳಲ್ಲಿ ಗೆಲುವು ಸಾಧಿಸಿದ್ದರು. ನಂತರ ಚನ್ನಪಟ್ಟಣವನ್ನು ತಮ್ಮ ಬಳಿಯೇ ಉಳಿಸಿಕೊಂಡು ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ಹಾಗೆಯೇ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕಾಂಗ್ರೆಸ್ ಶಾಸಕರಾಗಿದ್ದ ಸಿದ್ದು ನ್ಯಾಮಗೌಡ ಅವರು ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೂ ಉಪಚುನಾವಣೆ ನಡೆದಿತ್ತು. ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕಾಂಗ್ರೆಸ್ ಶಾಸಕರಾಗಿದ್ದ ಸಿದ್ದು ನ್ಯಾಮಗೌಡ ಅವರು ಅಕಾಲಿಕ ಮರಣವನ್ನಪ್ಪಿದ್ದರಿಂದ ತೆರವಾದ ಸ್ಥಾನಕ್ಕೂ ಉಪಚುನಾವಣೆ ನಡೆದಿತ್ತು. 

ಮಂಡ್ಯದಲ್ಲಿ ಜೆಡಿಎಸ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದ ಸಿ.ಎಸ್.ಪುಟ್ಟರಾಜು, ಶಿವಮೊಗ್ಗದಲ್ಲಿ ಬಿಜೆಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದ ಬಿ.ಎಸ್.ಯಡಿಯೂರಪ್ಪ ಮತ್ತು ಬಳ್ಳಾರಿ ಬಿಜೆಪಿ ಸಂಸದ ಶ್ರೀರಾಮುಲು ಅವರು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರಿಂದ ತೆರವಾದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು.

ಇಂದು ಈ ಕ್ಷೇತ್ರಗಳ ಮತಎಣಿಕೆ ಕಾರ್ಯ ನಡೆಯಲಿದ್ದು ಫಲಿತಾಂಶ ಹೊರಬೀಳಲಿದೆ. ಮತಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬಳ್ಳಾರಿಯ ರಾವ್ ಬಹದ್ದೂರ್ ವೈ ಮಹಬಲೇಶ್ವರಪ್ಪ ಇಂಜಿನಿಯರಿಂಗ್ ಕಾಲೇಜು, ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜು, ಮಂಡ್ಯದ ಸರ್ಕಾರಿ ಕಾಲೇಜು, ಜಮಖಂಡಿಯ ಮಿನಿ ವಿಧಾನಸೌಧ ಮತ್ತು ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪಚುನಾವಣೆಯ ಮತಎಣಿಕೆ ಕಾರ್ಯ ನಡೆಯಲಿದೆ. 
 

Read More