Home> Karnataka
Advertisement

ಧಾರವಾಡದ ಕಟ್ಟಡ ಕುಸಿತ ಪ್ರಕರಣ; ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಅಂತಿಮ ಹಂತದ ಕಾರ್ಯಾಚರಣೆ ವೇಳೆ ಅವಶೇಷಗಳಡಿ ಸಿಲುಕಿದ್ದ ಮತ್ತಿಬ್ಬರ ಮೃತದೇಹವನ್ನು ಹೊರತೆಗೆಯಲಾಗಿದೆ. 

ಧಾರವಾಡದ ಕಟ್ಟಡ ಕುಸಿತ ಪ್ರಕರಣ; ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಧಾರವಾಡ: ಮಾರ್ಚ್ 19, ಮಂಗಳವಾರದಂದು ನಗರದ ಕುಮಾರೇಶ್ವರನಗರದಲ್ಲಿ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 19 ಕ್ಕೆ ಏರಿದೆ. 

ಅಂತಿಮ ಹಂತದ ಕಾರ್ಯಾಚರಣೆ ವೇಳೆ ಅವಶೇಷಗಳಡಿ ಸಿಲುಕಿದ್ದ ಮತ್ತಿಬ್ಬರ ಮೃತದೇಹವನ್ನು ಹೊರತೆಗೆಯಲಾಗಿದೆ. ಮೃತರನ್ನು ವಾಘು ಮೋರೆ(24), ಸಹದೇವ(50) ಎಂದು ಗುರುತಿಸಲಾಗಿದೆ.

ಮಂಗಳವಾರ ಸಂಭವಿಸಿದ ಈ ದುರ್ಘಟನೆಯಲ್ಲಿ 19 ಮಂದಿ ಮರಣ ಹೊಂದಿದ್ದು, 50ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಕಟ್ಟಡ ಕುಸಿತ ಘಟನೆಗೆ ಸಂಬಂಧಿಸಿದಂತೆ ಆರು ಮಂದಿ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಅವರಲ್ಲಿ ಕಟ್ಟಡದ ಎಂಜಿನಿಯರ್ ವಿವೇಕ್ ಪವಾರ್ ಅವರನ್ನು ಗುರುವಾರವೇ ಪೊಲೀಸರು ಬಂಧಿಸಿದ್ದರು. ಉಳಿದ ಆರೋಪಿಗಳಾದ ರವಿ ಸಬರದ್, ಬಸವರಾಜ ನಿಗದಿ, ಗಂಗಣ್ಣ ಶಿಂತ್ರಿ ಮತ್ತು ಮಹಾಬಳೇಶ್ವರ ಪುರದಗುಡಿ ಅವರು ಗುರುವಾರ ತಡರಾತ್ರಿ ಉಪನಗರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. 

ಘಾಜಿಯಾಬಾದ್ ಎನ್‌ಡಿಆರ್‌ಎಫ್ ನ 72, ಬೆಂಗಳೂರು  ಎನ್‌ಡಿಆರ್‌ಎಫ್ 40, ಎಸ್‌ಡಿಆರ್‌ಎಫ್-40, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ 240, ಗಡಿಭದ್ರತಾ ಪಡೆಯಲ್ಲಿ 120, ವಿವಿಧ ಪೊಲೀಸ್ ಮತ್ತು ಆರ್‌ಟಿಓ ಸುಮಾರು 800, ಸ್ವಯಂ ಸೇವಕರು 100 ಕ್ಕೂ ಹೆಚ್ಚು, ಪಿಡಬ್ಲೂಡಿ ಯ 12 ತಜ್ಞ ಇಂಜಿನಿಯರ್‌ಗಳು, ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ 120 ಕ್ಕೂ ಹೆಚ್ಚು ಸಿಬ್ಬಂದಿ, ಕಂದಾಯ-60, ಗೃಹರಕ್ಷಕ ದಳ-80, ಆರೋಗ್ಯ ಇಲಾಖೆಯ 150 ಕ್ಕೂ ಹೆಚ್ಚು, ಅಂಬ್ಯುಲೆನ್ಸ್-30 ರಿಂದ 40, ಜೆಸಿಬಿ 10, ಕ್ರೇನ್–6 ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು.
 

Read More