Home> Karnataka
Advertisement

ಬಿಜೆಪಿ ಶಾಸಕರ ವಿರುದ್ಧ ಇಲ್ಲದ ಸಿಬಿಐ ತನಿಖೆ ನನ್ನ ವಿರುದ್ಧ ಮಾತ್ರ : ಡಿಕೆಶಿ ಆಕ್ರೋಶ

ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು ಎಂದು ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಬಿಜೆಪಿ ಶಾಸಕರ ವಿರುದ್ಧ ಇಲ್ಲದ ಸಿಬಿಐ ತನಿಖೆ ನನ್ನ ವಿರುದ್ಧ ಮಾತ್ರ : ಡಿಕೆಶಿ ಆಕ್ರೋಶ

ಬೆಂಗಳೂರು : ರಾಜಕೀಯ ಉದ್ದೇಶಕ್ಕಾಗಿಯೇ ಯಡಿಯೂರಪ್ಪ ಅವರು ನನ್ನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದೆ. ಬಿಜೆಪಿ ಪಕ್ಷದ ಶಾಸಕರ ವಿರುದ್ಧವೂ ಬೇಕಾದಷ್ಟು ಪ್ರಕರಣಗಳಿವೆ. ಬೇರೆಯವರದ್ದನ್ನು ತನಿಖೆಗೆ ನೀಡದೆ ನನ್ನದನ್ನು ಮಾತ್ರ ನೀಡಿದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.

ಕುಮಾರಕೃಪ ಅತಿಥಿಗೃಹದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಈ ರೀತಿ ಉತ್ತರಿಸಿದರು. ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು.

ಇದನ್ನೂ ಓದಿ: ನಿಮ್ಮ ಬಾಯಲ್ಲಿರುವುದು ನಾಲಿಗೆಯೋ ಅಥವಾ ಕೊಳಕುಮಂಡಲ ಹಾವೋ?! ಎಚ್ಡಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ!

ಸಿಬಿಐ ಅವರು ಶೇ 90 ರಷ್ಟು ತನಿಖೆ ಮುಗಿದಿದೆ ಎಂದು ಹೇಳಿದ್ದಾರೆ. ನನ್ನ ಬಳಿ ಯಾವ ವಿಚಾರಣಾಧಿಕಾರಿಯೂ ಬಂದಿಲ್ಲ. ವಿವರವನ್ನೂ ಪಡೆದಿಲ್ಲ. ನೋಡೋಣ ಏನು ಮಾಡುತ್ತಾರೋ. ನಾನು ನನ್ನ ವಕೀಲರ ಬಳಿ ಚರ್ಚೆ ಮಾಡುತ್ತೇನೆ ಎಂದರು.

ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, ಹಾದಿ- ಬೀದಿಯಲ್ಲಿ ಹೋಗುವವರಿಗೆಲ್ಲಾ ಉತ್ತರ ಕೊಡಲು ಆಗುವುದಿಲ್ಲ. ನ್ಯಾಯಾಲಯ ಏನು ಹೇಳುತ್ತದೆಯೋ ಅದಕ್ಕೆ ಗೌರವ ಕೊಡಬೇಕು. ನೀವು ಅಷ್ಟೇ (ಮಾಧ್ಯಮದವರು) ಮಿಕ್ಕಿದವರ ಮಾತಿಗೆಲ್ಲಾ ಕಿವಿಗೊಡಬಾರದು ಎಂದು ಹೇಳಿದರು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು

ಪೂರ್ಣಿಮಾ ಶ್ರೀನಿವಾಸ್ ಅವರ ಪಕ್ಷ ಸೇರ್ಪಡೆ ಹಾಗೂ ಕಾಡುಗೊಲ್ಲ ಸಮುದಾಯದ ವಿರೋಧ ವಿಚಾರವಾಗಿ ಕೇಳಿದಾಗ, ಪ್ರಬಲವಾಗಿರುವವರನ್ನು ಪ್ರಬಲವಾಗಿ ವಿರೋಧ ಮಾಡುವುದು ರಾಜಕೀಯದಲ್ಲಿ ಸಹಜ. More Strong More Enemy ಎಂಬಂತೆ ರಾಜಕೀಯದಲ್ಲಿ ಪ್ರಬಲರಿಗೆ ವಿರೋಧಿಗಳು ಹೆಚ್ಚು. ಪೂರ್ಣಿಮಾ ಶ್ರೀನಿವಾಸ್ ಅವರು ಶಾಸಕಿಯಾಗಿದ್ದರು, ಅವರದೇ ಆದ ಶಕ್ತಿ ಇದೆ. ಅವರ ತಂದೆ ನಮ್ಮ ಪಕ್ಷದಲ್ಲಿದ್ದು, ಮಂತ್ರಿಯಾಗಿದ್ದರು. ಇಂದು ಬಿಜೆಪಿ ಜೆಡಿಎಸ್ ಮೈತ್ರಿ ಸರಿಯಿಲ್ಲ ಎಂದು ಭಾವಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Read More