Home> Karnataka
Advertisement

ಇಡಿ ಸಮನ್ಸ್ ಗೆ ತಡೆಯಾಜ್ಞೆ ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದ ಪ್ರಕರಣ ವಿಚಾರವಾಗಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಸಮನ್ಸ್‌ಗೆ ತಡೆಯಾಜ್ಞೆ ಕೋರಿ ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಐವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. 

ಇಡಿ ಸಮನ್ಸ್ ಗೆ ತಡೆಯಾಜ್ಞೆ ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನವದೆಹಲಿ: ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ್ದ ಪ್ರಕರಣ ವಿಚಾರವಾಗಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಸಮನ್ಸ್‌ಗೆ ತಡೆಯಾಜ್ಞೆ ಕೋರಿ ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಐವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ  ಹೈಕೋರ್ಟ್‌ ವಜಾಗೊಳಿಸಿದೆ. 

ಈಗ ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿದ ಹಿನ್ನಲೆಯಲ್ಲಿ ಅವರು ಜಾರಿ ನಿರ್ದೇಶನಾಲಯದ ವಿಚಾರಣೆಯಲ್ಲಿ ಹಾಜರಾಗುವುದು ಕಡ್ಡಾಯವಾಗಿದೆ. ಇದೇ ವೇಳೆ ಈಗ ಡಿಕೆಶಿ ಸಂಕಷ್ಟದಿಂದ ಪಾರಾಗಲು ಅವರು ಸುಪ್ರಿಂಕೋರ್ಟ್ ಮೊರೆಹೊಗುವು ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಅದಕ್ಕೂ ಮೊದಲೇ ಇಡಿ ಅವರಿಗೆ ನೋಟಿಸ್ ನೀಡುವ ಮೂಲಕ ವಿಚಾರಣೆಗೆ ಕರೆಯುವ ಸಾಧ್ಯತೆ ಅಧಿಕ ಎನ್ನಲಾಗುತ್ತಿದೆ. ಇಡಿ ನೋಟಿಸ್ ನೀಡಿದ್ದಲ್ಲಿ ಅವರು ವಿಚಾರಣೆಗೆ ಹಾಜರಾಗಲೇಬೇಕಾಗುತ್ತದೆ.

ಡಿಕೆ.ಶಿವಕುಮಾರ್ ಅವರ ನಿವಾಸ ಹಾಗೂ ಕಛೇರಿಗಳ ಮೇಲೆ 2017 ಆಗಸ್ಟ್ 2 ರಂದು ಐಟಿ ಅಧಿಕಾರಿಗಳು ದಾಳಿ ನಡೆಸಿ ಸುಮಾರು 8 ಕ್ಕೂ ಅಧಿಕ ಕೋಟಿ ಹಣವನ್ನು ವಶಪಡಿಸಿಕೊಂಡಿದ್ದರು.ಈ ಹಿನ್ನಲೆಯಲ್ಲಿ ಡಿಕೆ.ಶಿವಕುಮಾರ್ ಜೊತೆಗೆ ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧ ಐಟಿ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದದ ಸಮನ್ಸ್ ಗೆ ತಡೆ ನೀಡಬೇಕೆಂದು ಅವರು ಹೈಕೋರ್ಟ್ ಮೆಟ್ಟಿಲೆರಿದ್ದರು. ಈಗ ಅವರ ಅರ್ಜಿಯನ್ನು ವಜಾಗೊಳಿಸಿರುವ ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದೆ ಎನ್ನಲಾಗಿದೆ. 

Read More