Home> Karnataka
Advertisement

ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ: ಸಿಎಂ ಬಿಎಸ್‌ವೈಗೆ ಜೆಡಿಎಸ್ ಚಾಟಿ

ಹತ್ತು ಕೋಟಿ ದೇಣಿಗೆ ನೀಡಿದ ಕಂಪೆನಿಗಳ ಹೆಸರನ್ನು ಗ್ರಾಮಗಳಿಗೆ ಇಡುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರ ತುಘಲಕ್ ನಿರ್ಧಾರದಂತಿದೆ ಎಂದು ಜೆಡಿಎಸ್ ಟೀಕಿಸಿದೆ.

ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ: ಸಿಎಂ ಬಿಎಸ್‌ವೈಗೆ ಜೆಡಿಎಸ್ ಚಾಟಿ

ಬೆಂಗಳೂರು: ಪ್ರವಾಹಪೀಡಿತ ಗ್ರಾಮಗಳ ಪುನಶ್ಚೇತನಕ್ಕಾಗಿ 10 ಕೋಟಿ ರೂ. ದೇಣಿಗೆ ನೀಡುವ ಕಂಪನಿಗಳ ಹೆಸರನ್ನೇ ಗ್ರಾಮಗಳಿಗೆ ನಾಮಕರಣ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅನಿರ್ಧಾರವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, "ಹತ್ತು ಕೋಟಿ ದೇಣಿಗೆ ನೀಡಿದ ಕಂಪೆನಿಗಳ ಹೆಸರನ್ನು ಗ್ರಾಮಗಳಿಗೆ ಇಡುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರ ತುಘಲಕ್ ನಿರ್ಧಾರದಂತಿದೆ. ನಮ್ಮ ರಾಜ್ಯದ ಪ್ರತೀ ಗ್ರಾಮದ ಹೆಸರಿಗೂ ಅದರದ್ದೇ ಆದ ಹಿನ್ನೆಲೆಯಿದೆ. ನೆರೆಯಿಂದ ಎಲ್ಲವನ್ನೂ ಕಳೆದುಕೊಂಡಿರುವವರಿಗೆ ತಮ್ಮ ಗ್ರಾಮದ ಹೆಸರನ್ನೂ ಕಳೆದುಕೊಳ್ಳುವಂತೆ ಮಾಡಬೇಡಿ. ಕರ್ನಾಟಕವನ್ನು ಮಾರಾಟಕ್ಕೆ ಇಡಬೇಡಿ" ಎನ್ನುವ ಮೂಲಕ ಮಾತಿನ ಚಾಟಿ ಬೀಸಿದೆ.

ಬುಧವಾರ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಮಾತನಾಡಿದ್ದ ಯಡಿಯೂರಪ್ಪ ಅವರು, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಇವರಿಗೆ ಮನೆ, ಇನ್ನಿತರ ಸೌಲಬ್ಯ ಕಲ್ಪಿಸುವ ಅಗತ್ಯವಿದೆ. ಈ ಕಾರ್ಯಕ್ಕೆ ಕೈಗಾರಿಕೋದ್ಯಮಿಗಳು ಮುಂದಾಗಿ ದೇಣಿಗೆ ನೀಡಬೇಕು. ಉದ್ಯಮಗಳು 10 ಕೋಟಿ ರೂಪಾಯಿ ದೇಣಿಗೆ ನೀಡಿದೆ, ಆ ಗ್ರಾಮಕ್ಕೆ ಆ ಕಂಪನಿಯ ಹೆಸರನ್ನೇ ಇಡಲಾಗುವುದು ಎಂದು ಹೇಳಿದ್ದರು. ಇದಕ್ಕೀಗ ಜೆಡಿಎಸ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.

Read More