ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮತ್ತು ಉದ್ಯೋಗಾವಾಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 78 ಯೋಜನೆಗಳ 5298.69 ಕೋಟಿ ರೂ. ಬಂಡವಾಳ ಹೂಡಿಕೆಗೆ ಅನುಮೋದನೆ ನೀಡಿದೆ. ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ 138ನೇ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ: ಕಪ್ಪು ಬಿಕಿನಿಯಲ್ಲಿ 'ಯೇ ಮೇರಿ ಲೈಫ್ ಹೈ' ಧಾರಾವಾಹಿಯ ಪೂಜಾ ಮೆಹ್ತಾ-ಶಾಮಾ ಸಿಕಂದರ್
ಒಟ್ಟು 78 ಯೋಜನೆಗಳಿಂದ 5298.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, 13917 ಜನರಿಗೆ ಉದ್ಯೋಗಗಳು ಲಭಿಸಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್ ನಿರಾಣಿ ತಿಳಿಸಿದ್ದಾರೆ.
ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂ. ಗೂ ಹೆಚ್ಚಿನ ಬಂಡವಾಳ ಹೂಡಿಕೆಯ 17 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದೆ. ಇದರಿಂದ 3552.66ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 6933 ಜನರಿಗೆ ಉದ್ಯೋಗ ಲಭಿಸಲಿದೆ ಎಂದು ಹೇಳಿದ್ದಾರೆ.
15 ಕೋಟಿ ರೂ. ಯಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 59 ಹೊಸ ಯೋಜನೆಗಳಿಗೆ ಸಮಿತಿ ಹಸಿರು ನಿಶಾನೆ ನೀಡಿದೆ. ಒಟ್ಟು 1542.88 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 6984 ಜನರಿಗೆ ಉದ್ಯೋಗ ಸೃಜನೆಯಾಗಲಿದೆ.
ಹೆಚ್ಚುವರಿ ಬಂಡವಾಳ ಹೂಡಿಕೆಯ ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯು ಅನುಮೋದಿಸಿದ್ದು, 203.15 ಕೋಟಿ ರೂ. ಹೂಡಿಕೆಯಾಗಲಿದೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ ಆರ್. ಗಿರೀಶ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಗಂಗಾಧರಯ್ಯ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತಿರಿದ್ದರು.
ಅನುಮೋದನೆ ನೀಡಿರುವ ಪ್ರಸ್ತಾವನೆಗಳು
ಇದನ್ನೂ ಓದಿ: Mrunal Thakur: ಬಾಡಿಸೂಟ್ ಧರಿಸಿ ಬೀಚ್ ಬಳಿ ಫೋಸ್ ನೀಡಿದ ಮೃಣಾಲ್ ಠಾಕೂರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.