Home> Karnataka
Advertisement

3454 ಕೋಟಿ ರೂ. ಬರ ಪರಿಹಾರ, ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Eshwara Khandre: ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.

3454 ಕೋಟಿ ರೂ. ಬರ ಪರಿಹಾರ, ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

ಭಾಲ್ಕಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ, ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಕ್ರಿಯೆ ನೀಡಿದ್ದಾರೆ.

ಭಾಲ್ಕಿಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು, ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ರಾಜ್ಯದಲ್ಲಿ ಬರದಿಂದ ಆಗಿರುವ ಬೆಳೆ ನಷ್ಟಕ್ಕೆ ಹಾಗೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಪರಿಹಾರ ಕಲ್ಪಿಸಲು ಎನ್.ಡಿ.ಆರ್.ಎಫ್. ನಿಯಮಾವಳಿಗಳ ರೀತ್ಯ 18,171 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು ಎಂದರು. 

ಇದನ್ನೂ ಓದಿ: ರಾಜ್ಯದ ಜನರ ಹಕ್ಕು ಪಡೆಯಲು ದೆಹಲಿಯಲ್ಲಿ ಪ್ರತಿಭಟನೆ ನಡೆಸಬೇಕಾಯ್ತು, ಸುಪ್ರೀಂಕೋರ್ಟ್ ಬಾಗಿಲು ತಟ್ಟಬೇಕಾಯ್ತು: ಸಿಎಂ ಸಿದ್ದರಾಮಯ್ಯ

ಆದರೆ ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿ, ಅನಗತ್ಯ ವಿಳಂಬ ಮಾಡಿ, ರಾಜ್ಯ ಜನತೆಗೆ ಘೋರ ಅನ್ಯಾಯ ಮಾಡಿತ್ತು ಎಂದರು.ಪರಿಹಾರ ನೀಡಲು ನಿರ್ದೇಶಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಳಿಕ ಆಗಬಹುದಾದ ಮುಖಭಂಗ ತಪ್ಪಿಸಿಕೊಳ್ಳಲು ಒಂದು ವಾರದೊಳಗೆ ಪರಿಹಾರ ನೀಡುವುದಾಗಿ ತಿಳಿಸಿದ್ದ ಕೇಂದ್ರ ಸರ್ಕಾರ ಈಗ 3454 ಕೋಟಿ ರೂ. ಪರಿಹಾರ ಮಾತ್ರ ಘೋಷಿಸಿದೆ ಎಂದರು. 

ರಾಜ್ಯದಲ್ಲಿ ಆಗಿರುವ ನಷ್ಟ ಅಪಾರವಾಗಿದ್ದು, ಕೂಡಲೇ ಉಳಿದ ಹಣವನ್ನು ನ್ಯಾಯ ಸಮ್ಮತವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: "ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿ ನಿಂತ ನಾಯಕ ಪ್ರಹ್ಲಾದ ಜೋಶಿ"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Read More