Home> Karnataka
Advertisement

Rajya Sabha Election: ‘ಕೈ’ ಅಭ್ಯರ್ಥಿ ಬೆಂಬಲಿಸುವಂತೆ ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ

ಬಿಜೆಪಿ ಅಭ್ಯರ್ಥಿ ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಗೆಲ್ಲಿಸುವ ಮೂಲಕ ಜೆಡಿಎಸ್ ಶಾಸಕರು ಜನತೆಯ ಪ್ರತಿಭಟನೆಗೆ ದನಿಯಾಗಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Rajya Sabha Election: ‘ಕೈ’ ಅಭ್ಯರ್ಥಿ ಬೆಂಬಲಿಸುವಂತೆ ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು: ನಾಳೆ ಅಂದರೆ ಶುಕ್ರವಾರ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯಲಿದೆ. ಮತದಾನಕ್ಕೂ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಜೆಡಿಎಸ್ ಶಾಸಕರಿಗೆ ಪತ್ರ ಬರೆದಿದ್ದಾರೆ. ‘ಜಾತ್ಯಾತೀತತೆಯ ಪರವಾಗಿ ಆತ್ಮಸಾಕ್ಷಿಯ ಮತವನ್ನು ನಮ್ಮ ಅಭ್ಯರ್ಥಿಗೆ ನೀಡಿ’ ಅಂತಾ ಅವರು ಮನವಿ ಮಾಡಿದ್ದಾರೆ.

ಈ ಬಗ್ಗೆ ಗುರುವಾರ ಸರಣಿ ಟ್ವೀಟ್ ಸಹ ಮಾಡಿರುವ ಸಿದ್ದರಾಮಯ್ಯ, ‘ಪ್ರಜಾಪ್ರತಿನಿಧಿಗಳೆಲ್ಲರೂ ಪ್ರಭುಗಳಾದ ಪ್ರಜೆಗಳ ಆತ್ಮಸಾಕ್ಷಿಗೆ ದನಿಯಾಗಬೇಕಾಗಿರುವುದು ಕರ್ತವ್ಯವಾಗಿದೆ. ಈ ಆತ್ಮಸಾಕ್ಷಿಯ ಮತವನ್ನು ಜಾತ್ಯತೀತತೆಗೆ ಬದ್ಧವಾಗಿರುವ ನಮ್ಮ ಪಕ್ಷದ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕೆಂದು ಜೆಡಿಎಸ್ ಶಾಸಕರಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: 'ಪ್ರಭುತ್ವ ನಡೆಸುತ್ತಿರುವ ನಿರಂತರ ದಾಳಿಯಿಂದ ದೇಶದ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ'-ಸಿದ್ಧರಾಮಯ್ಯ

‘ಪಠ್ಯಪುಸ್ತಕ ಪರಿಷ್ಕರಣೆಯ ನೆಪದಲ್ಲಿ ನಾವೆಲ್ಲರೂ ಗೌರವಿಸುವ ಮಹಾಪುರುಷರಿಗೆ ಬಿಜೆಪಿ ಮಾಡಿರುವ ಅವಮಾನವನ್ನು ನಾಡಿನ ಜನತೆ ಒಕ್ಕೊರಲಿನಿಂದ ಖಂಡಿಸಿದೆ. ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಅವರನ್ನು ಗೆಲ್ಲಿಸುವ ಮೂಲಕ ಜೆಡಿಎಸ್ ಶಾಸಕರು ಜನತೆಯ ಪ್ರತಿಭಟನೆಗೆ ದನಿಯಾಗಬೇಕು. ಆದರೆ ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಿಪಡಿಸಿರುವ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಮ್ಮ ಪಕ್ಷದ ಶಾಸಕರಿಗೆ ಹೇಗೆ ಪತ್ರ ಬರೆಯುತ್ತೀರಿ ಎಂದು ಪ್ರಶ್ನಿಸಿದ್ದಾರೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿ ಖಾನ್ ಅವರ ಸೋಲು-ಗೆಲುವನ್ನು ರಾಜ್ಯದ ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲ ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕುತೂಹಲದಿಂದ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ಯಾವುದೇ ಒಂದು ಪಕ್ಷದ ಗೆಲುವಾಗದೆ ಜಾತ್ಯತೀತ ಸಿದ್ದಾಂತದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಪಕ್ಷಗಳೆರಡರ ಸೈದ್ದಾಂತಿಕ ಗೆಲುವಾಗುತ್ತದೆ’ ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ಮನವಿ ತಿಳಿಸಿದ್ದಾರೆ.

ಇದನ್ನೂ ಓದಿ: Rajya Sabha Election 2022 : ರಾಜ್ಯಸಭೆ ಚುನಾವಣೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜು : ಜಯದ ಮಾಲೆ ಯಾರಿಗೆ!?

ಸಿದ್ದರಾಮಯ್ಯ ಪತ್ರಕ್ಕೆ ಎಚ್‍ಡಿಕೆ ಆಕ್ರೋಶ!

‘ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಜೆಡಿಎಸ್ ಶಾಸಕರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ‘ಒಂದು ಕಾಲದಲ್ಲಿ ಸಿದ್ದರಾಮಯ್ಯ ಬಿಜೆಪಿಗೆ ಟವೆಲ್ ಹಾಕಿದ್ದರು. ಸಿದ್ದರಾಮಯ್ಯನವರಿಗೆ ನಾಚಿಕೆ ಆಗಬೇಕು. ನಮ್ಮ ಪಕ್ಷದ ಶಾಸಕರಿಗೆ ಹೇಗೆ ಪತ್ರ ಬರೆಯುತ್ತೀರಿ? ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಟೀಕೆ ಮಾಡಿದ್ದೀರಿ. ಆತ್ಮಸಾಕ್ಷಿ ಇದ್ದರೆ ಸತ್ಯ ಹೇಳಿ. ಕಾಂಗ್ರೆಸ್ ಕ್ರಾಸ್ ವೋಟಿಂಗ್ ಮಾಡಿಸಿದರೂ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ’ವೆಂದು ಎಚ್‍ಡಿಕೆ ಆಕ್ರೋಶ ಹೊರಹಾಕಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More