Home> Karnataka
Advertisement

ಸಾಲ ಮರುಪಾವತಿಸಿದ ರೈತರಿಗೆ ಬ್ಯಾಂಕಿನಿಂದ ಅರೆಸ್ಟ್ ವಾರೆಂಟ್; ಪ್ರತಿಭಟನೆ

ನೆಗೋಶಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ನ ಅಡಿಯಲ್ಲಿ ಬೆಳಗಾವಿಯ ಸವದತ್ತಿ ರೈತರಿಗೆ ಕೋಲ್ಕತ್ತಾ ಕೋರ್ಟ್ ವಾರೆಂಟ್ ಜಾರಿಗೊಳಿಸಿದ್ದು, ಫೆ.18, 2019 ರ ವೇಳೆಗೆ ಕೋರ್ಟ್ ಎದುರು ಹಾಜರುಪಡಿಸುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದೆ.

ಸಾಲ ಮರುಪಾವತಿಸಿದ ರೈತರಿಗೆ ಬ್ಯಾಂಕಿನಿಂದ ಅರೆಸ್ಟ್ ವಾರೆಂಟ್; ಪ್ರತಿಭಟನೆ

ಬೆಳಗಾವಿ: ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿಸದ ರೈತರಿಗೆ ಆಕ್ಸಿಸ್ ಬ್ಯಾಂಕ್ ಕೋರ್ಟ್ ಮೂಲಕ ಅರೆಸ್ಟ್ ವಾರೆಂಟ್ ಜಾರಿಮಾಡಿರುವುದನ್ನು ವಿರೋಧಿಸಿ ಬೈಲಹೊಂಗಲದ ಆಕ್ಸಿಸ್ ಬ್ಯಾಂಕ್ ಗೆ ಬೀಗ ಜಡಿದು ರೈತರು ಪ್ರತಿಭಟನೆ ನಡೆಸಿದರು. 

ಈಗಾಗಲೇ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿ ಆದೇಶ ಹೊರಡಿಸಿದ್ದರೂ, ನೆಗೋಶಬಲ್ ಇನ್ಸ್ಟ್ರುಮೆಂಟ್ಸ್ ಆಕ್ಟ್ ನ ಅಡಿಯಲ್ಲಿ ಬೆಳಗಾವಿಯ ಸವದತ್ತಿ ರೈತರಿಗೆ ಕೋಲ್ಕತ್ತಾ ಕೋರ್ಟ್ ವಾರೆಂಟ್ ಜಾರಿಗೊಳಿಸಿದ್ದು, ಫೆ.18, 2019 ರ ವೇಳೆಗೆ ಕೋರ್ಟ್ ಎದುರು ಹಾಜರುಪಡಿಸುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ರೈತರ ಹಿತ ಕಾಯುವಂತೆ ನಿರ್ದೇಶಿಸಿದ್ದರು. ಈ ನಿಟ್ಟಿನಲ್ಲಿ ರೈತರ ಮೇಲಿನ ಎಲ್ಲಾ ಕೇಸ್ ವಾಪಸ್ ಪಡೆಯಲು ನಿರ್ಧರಿಸಿರುವುದಾಗಿ ಬೈಲಹೊಂಗಲ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ರಾಜಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Read More