Home> Karnataka
Advertisement

ಮೇ 5ಕ್ಕೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿದೆ. 

ಮೇ 5ಕ್ಕೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಮೇ 5 ರಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುವುದೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋ ಲೆ ಹೊರಡಿಸಿದೆ. 

ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು‌ಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಶುಲ್ಕ ಹೆಚ್ಚಿಸುವಂತಿಲ್ಲ: 

ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭ ದಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದು, ಇಚ್ಛಿಸುವ ಪೋಷಕರಿಂದ ಕಂತುಗಳ ಮೂಲಕ ಸ್ವೀಕರಿಸತಕ್ಕದ್ದು ಹಾಗೂ 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿದೆ. 

ಒಂದು ವೇಳೆ ಈ ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ನಿರ್ದಾಕ್ಷಿಣ್ಯವಾದ ಕ್ರಮಕ್ಕೆ ಮುಂದಾಗಲಾಗುವುದೆಂದು ಪದವಿಪೂರ್ವ ಶಿಕ್ಷಣ ನಿರ್ದೇಶಕರು ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
 

Read More