Home> Karnataka
Advertisement

ಪಿಎಸ್‌ಐ ನೇಮಕಾತಿ ಹಗರಣದ ಹೆಚ್ಚಿನ ತನಿಖೆಗೆ ಎಸ್‌ಐಟಿ ರಚನೆ : ಕೃಷ್ಣ ಬೈರೇಗೌಡ

ಪಿಎಸ್‌ಐಗಳ ನೇಮಕಾತಿ ಹಗರಣವನ್ನು ನ್ಯಾ.ಬಿ. ವೀರಪ್ಪ ನೇತೃತ್ವದ ಆಯೋಗಕ್ಕೆ ವಹಿಸಲಾಗಿತ್ತು. ಈ ಆಯೋಗ ವರದಿ ನೀಡಿದ್ದು, ಸರ್ಕಾರದವರು, ಖಾಸಗಿಯವರು ಮತ್ತು ಮಧ್ಯವರ್ತಿಗಳು ಸೇರಿ ಒಟ್ಟು 113 ಮಂದಿ ಭಾಗಿಯಾಗಿದ್ದಾರೆ ಎಂದು ವರದಿ ನೀಡಿದೆ.

ಪಿಎಸ್‌ಐ ನೇಮಕಾತಿ ಹಗರಣದ ಹೆಚ್ಚಿನ ತನಿಖೆಗೆ ಎಸ್‌ಐಟಿ ರಚನೆ : ಕೃಷ್ಣ ಬೈರೇಗೌಡ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಹಗರಣದ ಸಂಬಂಧ ಹೆಚ್ಚಿನ ತನಿಖೆಗಾಗಿ ನ್ಯಾ. ವೀರಪ್ಪ ಆಯೋಗದ ಶಿಫಾರಸ್ಸಿನ ಮೇರೆಗೆ ಎಸ್‌ಐಟಿ ರಚನೆ ಮಾಡಲು ಬುಧವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸತತ ಮೂರು ತಾಸಿಗೂ ಅಧಿಕ ಸುಧೀರ್ಘ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆ ಬಳಿಕ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಭೆಯ ನಿರ್ಣಯಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪಿಎಸ್‌ಐಗಳ ನೇಮಕಾತಿ ಹಗರಣವನ್ನು ನ್ಯಾ.ಬಿ. ವೀರಪ್ಪ ನೇತೃತ್ವದ ಆಯೋಗಕ್ಕೆ ವಹಿಸಲಾಗಿತ್ತು. ಈ ಆಯೋಗ ವರದಿ ನೀಡಿದ್ದು, ಸರ್ಕಾರದವರು, ಖಾಸಗಿಯವರು ಮತ್ತು ಮಧ್ಯವರ್ತಿಗಳು ಸೇರಿ ಒಟ್ಟು 113 ಮಂದಿ ಭಾಗಿಯಾಗಿದ್ದಾರೆ ಎಂದು ವರದಿ ನೀಡಿದೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ ಹೊತ್ತಲ್ಲಿಯೇ ಅಭಿವೃದ್ಧಿ ಜಟಾಪಟಿ!

ಇದರಲ್ಲಿ ಕೆಲವರು ಬಹಿರಂಗವಾಗಿ ಹೇಳಿಕೆ ನೀಡಿದ್ದು, ಅಧಿಕೃತವಾಗಿ ಆಯೋಗದ ಮುಂದೆ ಬಂದು ಹೇಳಿಕೆ ಕೊಡುವಂತೆ ನೋಟಿಸ್ ಕೊಟ್ಟಾಗ ಅವರು ಬಂದಿಲ್ಲ. ಅವರನ್ನು ಕಡ್ಡಾಯವಾಗಿ ಬಂದು ಹೇಳಿಕೆ ಕೊಡುವಂತೆ ಸೂಚಿಸುವ ಆಧಿಕಾರ ಆಯೋಗಕ್ಕೆ ಇಲ್ಲ. ಹೀಗಾಗಿ ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸಬೇಕು ಎಂದು ಶಿಫಾರಸು ಮಾಡಿದ್ದರಿಂದ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಎಸ್‌ಐಟಿಗೆ ವಹಿಸಲು ನಿರ್ಧರಿಸಲಾಯಿತು ಎಂದು ಹೇಳಿದರು.

ಈ ಸಂಬಂಧ ಈಗಾಗಲೇ ಸಿಐಡಿ ಸಹ ಒಟ್ಟು 17 ಕೇಸುಗಳನ್ನು ದಾಖಲಿಸಿಕೊಂಡು ತನ್ನದೇ ರೀತಿಯಲ್ಲಿ ತನಿಖೆ ಮಾಡುತ್ತಿದೆ. ಈಗ ನ್ಯಾ.ಬಿ.ವೀರಪ್ಪ ಅವರ ಸಿಫಾರಸು ಮೇರೆಗೆ ಎಸ್ಐಟಿಗೆ ವಹಿಸಲಾಗುತ್ತಿದೆ. ಆದರೆ, ಇದರಿಂದ ಸಿಐಡಿ ತನಿಖೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More