Home> Karnataka
Advertisement

"ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು"

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ  ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು.ಈ ನಿಟ್ಟಿನಲ್ಲಿ ಔಷಧ ವಿತರಣೆಯ ವಿಕೇಂದ್ರೀಕರಣವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ  ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು.ಈ ನಿಟ್ಟಿನಲ್ಲಿ ಔಷಧ ವಿತರಣೆಯ ವಿಕೇಂದ್ರೀಕರಣವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.ಸರ್ಕಾರಿ ಔಷಧ ಮಳಿಗೆಗಗಳು  ಸ್ಥಳೀಯ ಮಟ್ಟದಲ್ಲಿಯೇ  ಇದ್ದು, ಅಗತ್ಯ ಔಷಧಗಳನ್ನು ಹೊಂದಿರಬೇಕು.ದಾಸ್ತಾನು ಹಾಗೂ ಲೆಕ್ಕಪತ್ರಗಳೆಲ್ಲವೂ ಡಿಜಿಟಲೀಕರಣವಾಗಬೇಕು.  ಅನಗತ್ಯ ಔಷಧಗಳನ್ನು ಕೊಳ್ಳದೇ ಔಷಧಗಳ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳಬೇಕು. ಇತರೆ ರಾಜ್ಯಗಳಲ್ಲಿ ಔಷಧಗಳ ದರ ಪರಿಶೀಲಿಸಿ ನೇರವಾಗಿ ಔಷಧ ಉತ್ಪಾದಕರೊಂದಿಗೆ ಮಾತುಕತೆ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಇದನ್ನೂ ಓದಿ-Rashmika ಗೆ ಟ್ರೋಲ್‌ ಕಾಟ..! ʼಲೆಜೆಂಡ್‌ʼ ಬಾಯಲ್ಲಿ ಕನ್ನಡ ಕವನ..!

ಒಂದು ವರ್ಷದಲ್ಲಿ ತಾಯಿ ಮಕ್ಕಳ ಪೌಷ್ಟಿಕ ಮಟ್ಟ ಸುಧಾರಣೆಗೆ ಕ್ರಮ:

ತಾಯಂದಿರ ಹಾಗೂ ಮಕ್ಕಳ ಆರೋಗ್ಯ ಕಾಪಾಡಲು ಸಮಗ್ರ  ಪೌಷ್ಟಿಕ ಯೋಜನೆಯನ್ನು ರೂಪಸಿಬೇಕು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ  ಈ ಬಗ್ಗೆ ಹೆಚ್ಚಿನ ಗಮನಹರಿಸಿ, ತಾಯಂದಿರ ಮತ್ತು ಮಕ್ಕಳ ಪೌಷ್ಟಿಕ ಮಟ್ಟವನ್ನು ಸುಧಾರಿಸಲು ಅಗತ್ಯವಿರುವ ಅನುದಾನ ಪಡೆದು ಹಾಗೂ ಶ್ರಮವಹಿಸಿ, ಮುಂದಿನ ಒಂದು ವರ್ಷದಲ್ಲಿ ಈ ನಿಟ್ಟಿನಲ್ಲಿ ಮಹತ್ತರ ಬದಲಾವಣೆಯನ್ನು ತರಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.ಅಗತ್ಯವಿರುವ ಜಿಲ್ಲೆಗಳಲ್ಲಿ ಮಾತ್ರ ಹೊಸ  ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು ಜಿಲ್ಲಾ ಮಟ್ಟದಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು  ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲು ಕ್ರಮ ವಹಿಸಲು ತಿಳಿಸಿದರು.

ಇದನ್ನೂ ಓದಿ-ಕೇಂದ್ರ ನೌಕರರಿಗೆ ಕಾದಿದೆ ಅದೃಷ್ಟ : DA ಹೆಚ್ಚಳದ ಜೊತೆ ಸಿಗಲಿದೆ ₹2,32,152 - ಲೆಕ್ಕಾಚಾರ ನೋಡಿ

ವೈದ್ಯಕೀಯ ಶಿಕ್ಷಣ:

ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಒಂದು ಇಂಟರ್ನ್‍ಶಿಪ್ ಕೈಗೊಳ್ಳುವಂತೆ ರಾಷ್ಟ್ರೀಯ ವೈದ್ಯಕೀಯ ಮಂಡಳಿಗೆ  ಪತ್ರ ಬರೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಆಸ್ಪತ್ರೆಯ ಆಡಳಿತಾತ್ಮಕ ಜವಾಬ್ದಾರಿಯಿಂದ ಮುಕ್ತಗೊಳಿಸಿ ಆಸ್ಪತ್ರೆಗಳ ಆಡಳಿತ ನಿರ್ವಹಣೆಗೆ ಕೆ.ಎ.ಎಸ್ ಅಧಿಕಾರಿಗಳನ್ನು ನೇಮಿಸಬೇಕು. ಚಿತ್ರದುರ್ಗದಲ್ಲಿ ಸರ್ಕಾರಿ  ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಸರ್ಕಾರಿ ಆದೇಶ ಹೊರಡಿಸಿ ಮೊದಲನೇ ಮತ್ತು 2 ನೇ ವರ್ಷಕ್ಕೆ ಅಗತ್ಯವಿರುವ ಮೂಲಭೂತಸೌಲಭ್ಯಗಳನ್ನು ನಿರ್ಮಿಸಿ, ಹಂತ ಹಂತವಾಗಿ  ಸೌಲಭ್ಯಗಳನ್ನು ವಿಸ್ತರಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ-Pots Office ಈ ಯೋಜನೆಯಲ್ಲಿ ₹150 ಉಳಿತಾಯ ಮಾಡಿ ₹20 ಲಕ್ಷ ಲಾಭ ಪಡೆಯಿರಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Read More