Home> Karnataka
Advertisement

ಗುಡ್ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ 'ಆರೋಗ್ಯ ಭಾಗ್ಯ ಯೋಜನೆ' ನೀಡಲು ಸರ್ಕಾರದ ನಿರ್ಧಾರ

ಮರುಪಾವತಿ ವೆಚ್ಚದ ನಿಯಮಗಳಲ್ಲಿ ಬದಲಾವಣೆ ತರಬೇಕು ಎಂದು ಕರ್ನಾಟಕ ಸರ್ಕಾರಿ‌ ನೌಕರರ ಸಂಘ ಮನವಿ‌ ಮಾಡಿತ್ತು.

ಗುಡ್ ನ್ಯೂಸ್: ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ 'ಆರೋಗ್ಯ ಭಾಗ್ಯ ಯೋಜನೆ' ನೀಡಲು ಸರ್ಕಾರದ ನಿರ್ಧಾರ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ‌ ನೌಕರರಿಗೂ 'ಆರೋಗ್ಯ ಭಾಗ್ಯ ಯೋಜನೆ' ಸೌಲಭ್ಯ ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ನಿರ್ಧರಿಸಿದೆ.

ರಾಜ್ಯ ಸರ್ಕಾರಿ‌ ನೌಕರರು ಚಿಕಿತ್ಸೆ ಪಡೆದ ವೆಚ್ಚದ ಮರುಪಾವತಿ ವಿಳಂಬವಾಗುತ್ತಿತ್ತು. ಅನುದಾನದ ಕೊರತೆ ಹಿನ್ನಲೆ ವೈದ್ಯಕೀಯ ಚಿಕಿತ್ಸೆ ವೆಚ್ಚದ ಮರುಪಾವತಿ ಪಡೆಯೋದು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಮರುಪಾವತಿ ವೆಚ್ಚದ ನಿಯಮಗಳಲ್ಲಿ ಬದಲಾವಣೆ ತರಬೇಕು ಎಂದು ಕರ್ನಾಟಕ ಸರ್ಕಾರಿ‌ ನೌಕರರ ಸಂಘ ಮನವಿ‌ ಮಾಡಿತ್ತು.

ಪೋಲೀಸ್ ಇಲಾಖೆಗೆ ಈಗಾಗಲೇ ಆರೋಗ್ಯ ಭಾಗ್ಯ ಯೋಜನೆಯ ಪ್ರಯೋಜನೆ ಸಿಗುತ್ತಿದೆ. ಅದನ್ನು ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ವಿಸ್ತರಣೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು.

ಸರ್ಕಾರಿ ನೌಕರರ ಮನವಿಗೆ ಸ್ಪಂದಿಸಿರುವ ಯಡಿಯೂರಪ್ಪ 'ಆರೋಗ್ಯ ಭಾಗ್ಯ ಯೋಜನೆ'ಯನ್ನು ಸರ್ಕಾರಿ ನೌಕರರಿಗೂ ವಿಸ್ತರಿಸಲು ಸರ್ಕಾರ ಮುಂದಾಗಿದೆ. ಆರೋಗ್ಯ ಭಾಗ್ಯ ಯೋಚನೆ ವಿಸ್ತರಣೆಗೆ ವಿವರವಾದ ಪ್ರಸ್ತಾವನೆ ಸಲ್ಲಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಶೀಘ್ರದಲ್ಲಿಯೇ ಜಾರಿಗೆ ತರುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Read More