Home> Karnataka
Advertisement

ಕೇಂದ್ರ ಸಂಸ್ಕೃತಿ ಸಮಿತಿಯಲ್ಲಿ ದಕ್ಷಿಣ ಭಾರತೀಯರು ಇಲ್ಲದಿರುವುದಕ್ಕೆ ಎಚ್ಡಿಕೆ ಆಕ್ರೋಶ

ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯವು ಇತಿಹಾಸ, ಸಂಸ್ಕೃತಿ ಕುರಿತಾದ 16 ಸದಸ್ಯರ ಸಮಿತಿಯೊಂದನ್ನು ರಚಿಸಿದೆ.ಈಗ ಈ ಸಮಿತಿಯಲ್ಲಿ ಮಹಿಳೆಯರು ಮತ್ತು  ದಕ್ಷಿಣ ಭಾರತೀಯರ ಪ್ರಾತಿನಿಧಿತ್ವ ಇಲ್ಲದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಂಸ್ಕೃತಿ ಸಮಿತಿಯಲ್ಲಿ ದಕ್ಷಿಣ ಭಾರತೀಯರು ಇಲ್ಲದಿರುವುದಕ್ಕೆ ಎಚ್ಡಿಕೆ ಆಕ್ರೋಶ

ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯವು ಇತಿಹಾಸ, ಸಂಸ್ಕೃತಿ ಕುರಿತಾದ 16 ಸದಸ್ಯರ ಸಮಿತಿಯೊಂದನ್ನು ರಚಿಸಿದೆ.ಈಗ ಈ ಸಮಿತಿಯಲ್ಲಿ ಮಹಿಳೆಯರು ಮತ್ತು  ದಕ್ಷಿಣ ಭಾರತೀಯರ ಪ್ರಾತಿನಿಧಿತ್ವ ಇಲ್ಲದಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತಾಗಿ ಅವರು ತಮ್ಮ ಸರಣಿ ಟ್ವೀಟ್ ಗಳ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ' ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾದುವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ

'ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ,ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ' ಎಂದು ಆಗ್ರಹಿಸಿದ್ದಾರೆ

Read More