Home> Karnataka
Advertisement

ಕರಾವಳಿ ಭಾಗದಲ್ಲಿ ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಸಂಪರ್ಕಿಸಲು ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ-1077 ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ: ಕರ್ನಾಟಕದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದೂ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರ, ಅನುದಾನಿತ ಮತ್ತು ಖಾಸಗಿಯಾ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ(ಪದವಿ ಪೂರ್ವ ತರಗತಿವರೆಗೆ) 23/07/2019 ಒಂದು ದಿನದ ಮಟ್ಟಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಈ ಭಾಗಗಳಲ್ಲಿ ಇಂದೂ ಕೂಡ ಮಳೆ ಮುಂದುವರೆದ್ಯುವ ಸಾಧ್ಯತೆಯಿದ್ದು, 25/07/2019 ರ ವರೆಗೆ ಪ್ರತಿದಿನ ತಲಾ 200mm ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ. ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಮುಂಜಾಗ್ರತಾ ಕ್ರಮ ಕೈಗೊಂಡಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ(ಪದವಿ ಪೂರ್ವ ತರಗತಿವರೆಗೆ) ರಜೆ ಘೋಷಿಸಿರುವ ಜಿಲ್ಲಾಧಿಕಾರಿಗಳು, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರದ ತೀರಕ್ಕೆ ಮಕ್ಕಳು ಹೋಗದಂತೆ ಜಾಗೃತೆ ವಹಿಸುವಂತೆ ಪಾಲಕರಿಗೆ ಮನವಿ ಮಾಡಿದ್ದಾರೆ.

ಇದಲ್ಲದೆ ಮೀನುಗಾರರು ಇಂದು ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರದ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸುಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಸಂಪರ್ಕಿಸಲು ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ-1077 ನೀಡಲಾಗಿದೆ.
 

Read More