Home> Karnataka
Advertisement

ಎಲ್ಲರ ಜಾತಕ ನನಗೆ ಗೊತ್ತು, ಆದರೆ ಅದು ನನ್ನ ಬಳಿಯೇ ಇರಲಿ..!

 ಮುಂದಿನ ಚುನಾವಣೆಯಲ್ಲಿ ಮಲ್ಲೇಶ್ವರಂ ಅಥವಾ ಬಸವನಗುಡಿಯಿಂದ ಸ್ಪರ್ಧಿಸುತ್ತಿರಾ?ಎನ್ನುವ ಪ್ರಶ್ನೆಗೆ ಮಾಲ್ಗುಡಿ ಎಂದು ವ್ಯಂಗ್ಯವಾಗಿ ಹೇಳಿದರು. 

ಎಲ್ಲರ ಜಾತಕ ನನಗೆ ಗೊತ್ತು, ಆದರೆ ಅದು ನನ್ನ ಬಳಿಯೇ ಇರಲಿ..!

ಬೆಂಗಳೂರು: ಇತ್ತೀಚೆಗಷ್ಟೇ ಆಮ್‌ ಆದ್ಮಿ ಪಾರ್ಟಿ ಸೇರಿರುವ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಜೀ ಕನ್ನಡ ನ್ಯೂಸ್ ಜತೆ ಮಾತನಾಡಿ ಮುಂದಿನ ಚುನಾವಣೆಯಲ್ಲಿ ಮಲ್ಲೇಶ್ವರಂ ಅಥವಾ ಬಸವನಗುಡಿಯಿಂದ ಸ್ಪರ್ಧಿಸುತ್ತಿರಾ?ಎನ್ನುವ ಪ್ರಶ್ನೆಗೆ ಮಾಲ್ಗುಡಿ ಎಂದು ವ್ಯಂಗ್ಯವಾಗಿ ಹೇಳಿದರು. ಇನ್ನೂ ಮುಂದುವರೆದು ಅವರು ಎಲ್ಲರ ಜಾತಕ ನನಗೆ ಗೊತ್ತು, ಆದರೆ ಅದು ನನ್ನ ಬಳಿಯೇ ಇರಲಿ ಎಂದು ಹೇಳಿದರು.

ಇದನ್ನೂ ಓದಿ: JDS Party: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಬಿಗ್ ಶಾಕ್: ಜೆಡಿಎಸ್ ತೆಕ್ಕೆಗೆ ಕೈ ಶಾಸಕ..!

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್‌ ರಾವ್‌ (Bhaskar Rao), “ಕರ್ನಾಟಕಕ್ಕೆ ನೆಲ, ಜಲ, ಸಂಪನ್ಮೂಲಗಳ ಕೊರತೆಯಿಲ್ಲ. ಇವೆಲ್ಲ ಇದ್ದರೂ ಆಡಳಿತಗಾರರ ನಿರ್ಲಕ್ಷ್ಯದಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆಳುವ ರಾಜಕಾರಣಿಗಳು ಸಾಮಾನ್ಯ ಜನರ ಬಗ್ಗೆ ಎಷ್ಟು ನಿರ್ಲಕ್ಷ್ಯ ವಹಿಸುತ್ತಾರೆ ಎನ್ನುವುದನ್ನು ಕೋವಿಡ್‌ ಸಂದರ್ಭದಲ್ಲಿ ಗಮನಿಸಿದ್ದೇನೆ. ಸರ್ಕಾರದ ಬೊಕ್ಕಸದಿಂದ ಲಕ್ಷ ಕೋಟಿ ರೂಪಾಯಿ ಖರ್ಚಾಗುತ್ತಿದ್ದರೂ, ಜನರಿಗೆ ಮಾತ್ರ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ಎಲ್ಲ ಹಣವು ಭ್ರಷ್ಟ ರಾಜಕಾರಣಿಗಳ ಪಾಲಾಗುತ್ತಿದೆ” ಎಂದು ಹೇಳಿದರು.

“ಬೇರೆ ಪಕ್ಷಗಳಿಗೂ ಆಮ್‌ ಆದ್ಮಿ ಪಾರ್ಟಿಗೂ ಸಾಕಷ್ಟು ವ್ಯತ್ಯಾಸವಿದೆ. ಬೇರೆ ಪಕ್ಷಗಳು ಹಾಗೂ ಅವುಗಳ ನಾಯಕರು ಹಣಬಲದಲ್ಲಿ ಮಾತ್ರ ಶ್ರೀಮಂತರಾಗಿದ್ದಾರೆ. ನೈತಿಕತೆಯಲ್ಲಿ ಅವರೆಲ್ಲ ಬಡವರು. ಆದರೆ ಆಮ್‌ ಆದ್ಮಿ ಪಾರ್ಟಿಯು ವಿಚಾರದಲ್ಲಿ ಶ್ರೀಮಂತವಾಗಿದೆ. ಪ್ರಾಮಾಣಿಕತೆ ಹಾಗೂ ಸ್ವಚ್ಛ ರಾಜಕೀಯಕ್ಕೆ ಸಂಬಂಧಿಸಿದ ವಿಚಾರಗಳನ್ನು ಮಾತನಾಡುವ ನೈತಿಕತೆಯನ್ನು ಎಎಪಿ ಉಳಿಸಿಕೊಂಡಿದೆ”ಎಂದು ಅವರು ಹೇಳಿದರು.

ಇದನ್ನೂ ಓದಿ: ಜೆಡಿಎಸ್ ಕುಟುಂಬ ರಾಜಕಾರಣದ ರೆಂಬೆ-ಕೊಂಬೆ ಎಷ್ಟೊಂದು ಸಮೃದ್ಧ!: ಬಿಜೆಪಿ ವ್ಯಂಗ್ಯ

“ಯಾವ ಸರ್ಕಾರಗಳ ಬಳಿಯೂ ಹಣದ ಕೊರತೆಯಿಲ್ಲ. ಆದರೆ ಪ್ರಾಮಾಣಿಕತೆ ಹಾಗೂ ಇಚ್ಛಾಶಕ್ತಿಯ ಕೊರತೆಯಿದೆ. ದೆಹಲಿಯ ಆಮ್‌ ಆದ್ಮಿ ಪಾರ್ಟಿ (Aam Aadmi Party) ಸರ್ಕಾರವು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ್ದರಿಂದಲೇ, ಅಲ್ಲಿ ಭಾರೀ ಪ್ರಮಾಣದ ಹಣ ಉಳಿತಾಯವಾಯಿತು. ಅದನ್ನು ಜನರ ಕಲ್ಯಾಣಕ್ಕೆ ಅಲ್ಲಿನ ಸರ್ಕಾರ ಬಳಸಿಕೊಂಡಿತು. ವಿದ್ಯುತ್‌, ಗುಣಮಟ್ಟದ ಶಿಕ್ಷಣ, ಕುಡಿಯುವ ನೀರು, ಸಾರಿಗೆ ಮುಂತಾದ ಸೌಲಭ್ಯಗಳನ್ನು ಉಚಿತವಾಗಿ ಕೊಡುವುದರಲ್ಲಿ ದೆಹಲಿ ಸರ್ಕಾರ ಯಶಸ್ವಿಯಾಗಿದೆ”ಎಂದರು.

ಇದನ್ನೂ ಓದಿ: 'ಪಕ್ಷದ ನಿಷ್ಠಾ​ವಂತ​ರನ್ನ ಉಳಿ​ಸಿ​ಕೊ​ಳ್ಳ​ದ​ ಹೆಚ್ ಡಿಕೆ: ಈ ಕಾರಣಕ್ಕೆ ಪಾರ್ಟಿ ಬಿಟ್ಟು ಹೋದ್ರು'

ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿ ಮಾತನಾಡಿ, “ಕರ್ನಾಟಕದಲ್ಲಿ ಯಾವಾಗ ಎಎಪಿಯು ಚುನಾವಣೆಗೆ ಸ್ಪರ್ಧಿಸಬೇಕು ಎಂದು ನಾವೆಲ್ಲ ಬಹಳ ವರ್ಷಗಳ ಹಿಂದೆಯೇ ಕೇಜ್ರಿವಾಲ್‌ರವರನ್ನು ಕೇಳುತ್ತಿದ್ದೆವು.ಈ ತೀರ್ಮಾನವನ್ನು ಹೈಕಮಾಂಡ್‌ ತೆಗೆದುಕೊಳ್ಳಬಾರದು, ಜನರು ತೆಗೆದುಕೊಳ್ಳಬೇಕು ಎಂದು ಕೇಜ್ರಿವಾಲ್‌ ಉತ್ತರಿಸುತ್ತಿದ್ದರು, ಆ ಸಮಯ ಈಗ ಬಂದಿದ್ದು, ಕರ್ನಾಟಕದ ಜನರು ಎಎಪಿಯತ್ತ ಒಲವು ತೋರುತ್ತಿದ್ದಾರೆ. ಹಿರಿಯ ಅಧಿಕಾರಿಗಳು, ಗಣ್ಯರು ಹಾಗೂ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷ ಸೇರಲು ಬಯಸುತ್ತಿದ್ದಾರೆ” ಎಂದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Read More