Home> Karnataka
Advertisement

ಬಿಜೆಪಿ ಅವರಿಂದ ಅಪಪ್ರಚಾರ, ಮರಳು ದಂಧೆ ಸಾಬೀತು ಪಡಿಸಿದರೇ ನಾಮಪತ್ರವೇ ಸಲ್ಲಿಸಲ್ಲ: ಸುನಿಲ್ ಬೋಸ್

Chamarajnagar loksabha Constituency congress candidate Sunil bose: ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಗೋ ಬ್ಯಾಕ್ ಅಂಥಾ  ಯಾಕೆ  ಹಾಕಿದ್ದಾರೆ, ನಾನು ಹೊರಗಿವನಾ? ಎಂದು ಪ್ರಶ್ನಿಸಿದರು. 

ಬಿಜೆಪಿ ಅವರಿಂದ ಅಪಪ್ರಚಾರ, ಮರಳು ದಂಧೆ ಸಾಬೀತು ಪಡಿಸಿದರೇ ನಾಮಪತ್ರವೇ ಸಲ್ಲಿಸಲ್ಲ: ಸುನಿಲ್ ಬೋಸ್

Go Back Sunil Bose Poster: ಗೋ ಬ್ಯಾಕ್ ಸುನಿಲ್ ಬೋಸ್ ಎಂದು ಪೋಸ್ಟರ್ ಅಂಟಿಸಿರುವುದು ಬಿಜೆಪಿಯವರು, ಅವರೇ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ (Sunil Bose) ಹೇಳಿದರು.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ (Chamarajnagar loksabha Constituency congress candidate Sunil bose), ಗೋ ಬ್ಯಾಕ್ ಅಂಥಾ  ಯಾಕೆ  ಹಾಕಿದ್ದಾರೆ, ನಾನು ಹೊರಗಿವನಾ? ಎಂದು ಪ್ರಶ್ನಿಸಿದರು. 

ಇದನ್ನೂ ಓದಿ- ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ ಉಂಟಾಗಿದೆ; ನಾವು ಎಲ್ಲಿಯೂ ಮೈ ಮರೆಯಬಾರದು ಎಂದ ಎಚ್‌ಡಿ‌ಕೆ

ಇದೇ ಸಂದರ್ಭದಲ್ಲಿ ಮರಳು ಮಾಫಿಯಾ ಕೇಸ್ (Sand Mafia Case) ನ್ಯಾಯಾಲಯದಲ್ಲಿ ವಜಾ ಆಗಿದೆ. ಮರಳು ದಂಧೆ ಆರೋಪದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಒಂದೊಮ್ಮೆ ನನ್ನ ವಿರುದ್ಧ ಮರಳು ದಂಧೆ ಆರೋಪ ಸಾಬೀತು ಮಾಡಿದರೇ ನಾನು ನಾಮಪತ್ರವನ್ನೇ ಸಲ್ಲಿಸುವುದಿಲ್ಲ ಎಂದು ಸುನೀಲ್ ಬೋಸ್ ಬಿಜೆಪಿ ನಾಯಕರಿಗೆ ಸವಾಲು ಹಾಕಿದರು. 

ಗೋ ಬ್ಯಾಕ್ ಬರೆದವರ ವಿರುದ್ಧ ದೂರು ಕೊಡ್ತೀನಿ!
ಇನ್ನೂ ಚುನಾವಣೆ ಸಂದರ್ಭದಲ್ಲಿ ಎದುರಾಳಿಗಳು ಗೋ ಬ್ಯಾಕ್ ಸುನಿಲ್ ಬೋಸ್ ಪೋಸ್ಟರ್ (Go Back Sunil Bose Poster) ಅಂಟಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸುನೀಲ್ ಬೋಸ್, ಈ ಬಗ್ಗೆ  ಮಾಧ್ಯಮವರು ಹೇಳಿದ  ಮೇಲೆ ಗೋ ಬ್ಯಾಕ್ ವಿಚಾರ ಗಮನಕ್ಕೆ ಬಂದಿದೆ. ಬಿಜೆಪಿಯವರು ಈ ಅಪಪ್ರಚಾರ ಮಾಡಿದ್ದಾರೆ ಎಂದು ಕಿಡಿಕಾರಿದರು. ಅಲ್ಲದೆ, ಈ ಬಗ್ಗೆ ಚುನಾವಣಾಧಿಕಾರಿಗಳಿಗೆ ದೂರು ಕೊಡಲಾಗುವುದು ಎಂದವರು ತಿಳಿಸಿದರು. 

ಇದನ್ನೂ ಓದಿ- ಧಾರವಾಡದ ಪ್ರತಿ ಹಳ್ಳಿಗೂ ಒಂದೂವರೆ ವರ್ಷದಲ್ಲಿ ಮಲಪ್ರಭಾ ನೀರು ಕೊಟ್ಟೇ ಕೊಡುವೆ: ಸಚಿವ ಪ್ರಹ್ಲಾದ ಜೋಶಿ ಭರವಸೆ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೋದಿ ಹವಾ ಇಲ್ಲಾ... ಕರ್ನಾಟಕದಲ್ಲಿ ಕಾಂಗ್ರೆಸ್ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸುನೀಲ್ ಬೋಸ್ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More