Home> Karnataka
Advertisement

ಕರ್ನಾಟಕದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಮುಖ್ಯಮಂತ್ರಿ!

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಅವರನ್ನ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದರು.

ಕರ್ನಾಟಕದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಮುಖ್ಯಮಂತ್ರಿ!

ಮೈಸೂರು: ಕರ್ನಾಟಕದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಅಧಿಕಾರಕ್ಕೆ ಬಂದರೆ ಶಾಸಕ ಎನ್.ಮಹೇಶ್ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಘೋಷಣೆ ಮಾಡಿದ್ದಾರೆ.

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವ ಬೆನ್ನಲ್ಲೇ ಸಾಂಸ್ಕೃತಿಕ ನಗರಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬಹುಜನ ಸಮಾಜ ಪಕ್ಷದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಮಾಯಾವತಿ, ಈಗಾಗಲೇ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಬಿಎಸ್ಪಿ ಖಾತೆ ತೆರೆದಿದ್ದು, ಎನ್.ಮಹೇಶ್ ಸಚಿವರೂ ಆಗಿದ್ದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಅವರನ್ನ ಮುಖ್ಯಮಂತ್ರಿ ಮಾಡುತ್ತೇನೆ. ಗೆಲುವು ಇಲ್ಲಿಂದಲೇ ಆರಂಭವಾಗಲಿ ಎಂದರು.

ಇದೇ ಸಂದರ್ಭದಲ್ಲಿ ಉತ್ತರಪ್ರದೇಶದಲ್ಲಿ 80 ಲೋಕಸಭಾ ಕ್ಷೇತ್ರಗಳಿದ್ದು, ಅದರಲ್ಲಿ ಒಂದು ಕ್ಷೇತ್ರವನ್ನೂ ಬಿಜೆಪಿಯಿಂದ ಗೆಲ್ಲಲು ಸಾಧ್ಯವಾಗುವುದಿಲ್ಲ. ಚುನಾವಣಾ ಪೂರ್ವ ಪ್ರಣಾಳಿಕೆಗಳು ಕೇವಲ ಪ್ರಣಾಳಿಕೆಗಳಷ್ಟೇ. ಹಣ ಕೊಟ್ಟ ತಕ್ಷಣ ಬಡತನ ದೂರವಾಗುವುದಿಲ್ಲ. ಕರ್ನಾಟಕದಲ್ಲೂ ಕಡು ಬಡವರು, ಅಸಹಾಯಕರು ಇದ್ದಾರೆ. ಅವರಿಗೆ ಒಳಿತು ಮಾಡುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಹಾಗಾಗಿ ಬಿಎಸ್​ಪಿ ಬಡವರಿಗೆ ಉದ್ಯೋಗ ಕೊಟ್ಟು ಬಡತನ ನಿರ್ಮೂಲನ ಮಾಡುವ ಪಣ ತೊಟ್ಟಿದೆ ಎಂದು ಮಾಯಾವತಿ ಹೇಳಿದರು.

Read More