Home> Karnataka
Advertisement

ಬಡ ಮಕ್ಕಳ ಹಾಲಿಗೂ ಕನ್ನ : ʼಕ್ಷೀರಭಾಗ್ಯʼ ಕಾಳಸಂತೆಯಲ್ಲಿ ಮಾರಾಟ..!

ಬಡವರ ಮಕ್ಕಳಿಗೆ ಸೇರಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದ್ದ ದುರಾದೃಷ್ಟಕರ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

 ಬಡ ಮಕ್ಕಳ ಹಾಲಿಗೂ ಕನ್ನ : ʼಕ್ಷೀರಭಾಗ್ಯʼ ಕಾಳಸಂತೆಯಲ್ಲಿ ಮಾರಾಟ..!

ಬೆಳಗಾವಿ : ಬಡವರ ಮಕ್ಕಳಿಗೆ ಸೇರಬೇಕಾದ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದ್ದ ದುರಾದೃಷ್ಟಕರ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಬಡ ಮಕ್ಕಳಿಗೆ ಪೌಷ್ಠಿಕಾಂಶ ಸಿಗಲಿ ಅಂತ ಸರ್ಕಾರ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಅದ್ರೆ ಅದನ್ನೂ ಬಿಡದ ಖದೀಮರು ಕಾಳಸಂತೆಯಲ್ಲಿ ಅಕ್ರಮವಾಗಿ ಹಾಲಿನ ಪೌಡರ್‌ನ್ನು ಮಾರಾಟ ಮಾಡುತ್ತಿದ್ದಾರೆ. ಅಕ್ರಮ ಹಾಲಿನ ಪೌಡರ್‌ ಮಾರಾಟದ ಕರಿತು ಖಚಿತ ಮಾಹಿತಿ ಆಧರಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಹಾಗೂ ಪೋಲಿಸರ ನೇತೃತ್ವದಲ್ಲಿ ಸ್ವೀಟ್‌ ಅಂಗಡಿ ಮೇಲೆ ದಾಳಿ ನಡೆಸಿ 32 ಕೆಜಿ ಹಾಲಿನ ಪೌಡರ್‌ ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ: Pradhan Mantri Fasal Bima Yojana: ಮುಂಗಾರು ಹಂಗಾಮಿನ ಬೆಳೆ ವಿಮೆ ಮಧ್ಯಂತರ ಪರಿಹಾರ ಬಿಡುಗಡೆ

ಬೆಳಗಾವಿ ತಾಲೂಕಿನ ಹಲಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗುರುಸಿದ್ದೇಶ್ವರ ಸ್ವೀಟ್ಸ್ ಅಂಗಡಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳೂ, ಅಕ್ರಮವಾಗಿ ಕೂಡಿಟ್ಟ ಕ್ಷೀರ ಭಾಗ್ಯ ಯೋಜನೆಯ 32 ಕೆಜಿ ಹಾಲಿನ ಪೌಡರ್ ವಶವಪಡಿಸಿಕೊಂಡಿದ್ದಾರೆ. ಬಡವರ ಮಕ್ಕಳಿಗೆ ಪೌಷ್ಟಿಕ ಕೊರತೆ ನಿವಾರಿಸಲು ಸರ್ಕಾರದಿಂದ ಕ್ಷೀರ ಭಾಗ್ಯ ಯೋಜನೆ ಜಾರಿಗೆ ತರಲಾಗಿದೆ. 

ಆದರೆ ಬಡವರ ಮಕ್ಕಳಿಗೆ ಸೇರಬೇಕಾದ ಹಾಲಿನ ಪೌಡರ್ ಕೆಲವು ಸ್ವೀಟ್ ಮಾರ್ಟ್ ಅಂಗಡಿಗಳಲ್ಲಿ ಕವಾ ಹಾಗೂ ಇನ್ನಿತರ ಪೇಡೆಗಳನ್ನ ತಯಾರಿಸಲು ಬಳಕೆ ಮಾಡುತ್ತಿರುವುದು ವಿಪರ್ಯಾಸ. ಹಾಲಿನ ಪೌಡರ್ ಸೀಜ್ ಮಾಡಿ ಅಂಗಡಿ ಮಾಲೀಕರ ವಿರುದ್ದ ದೂರು ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More