Home> Karnataka
Advertisement

ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ದುಬಾರಿ ತೆರಿಗೆ ವಿಧಿಸಿರುವುದರ ವಿರುದ್ಧ ಜೆಡಿಎಸ್ ಉಗ್ರ ಪ್ರತಿಭಟನೆ ನಡೆಸಿತು.

 ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ವಿಧಿಸಿದ ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ದುಬಾರಿ ತೆರಿಗೆ ವಿಧಿಸಿರುವುದರ ವಿರುದ್ಧ ಜೆಡಿಎಸ್ ಉಗ್ರ ಪ್ರತಿಭಟನೆ ನಡೆಸಿತು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸರ್ಕಾರದ ವಿರುದ್ಧ ಸೈಕಲ್ ಹಾಗೂ ಟಾಂಗಾ ಗಾಡಿಗಳ ಮೂಲಕ ವಿನೂತನವಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿ ಗೌಡ ಸೇರಿದಂತೆ ಅನೇಕ ನಾಯಕರು ಟಾಂಗಾ ಗಾಡಿ ಹತ್ತಿ, ಸೈಕಲ್ ತುಳಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಮೇಶ್ ಗೌಡರು; ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿಗಳನ್ನು ಜನರ ಮೇಲೆ ಹೇರುತ್ತಿದೆ ಎಂದು ಆಪಾದಿಸಿದರು.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾ

ಐದು ಗ್ಯಾರಂಟಿಗಳಿಗೆ ಹಣ ಹೊಂದಿಸುವುದಕ್ಕೆ ಜನರ ಕಿಸೆಗೆ ಕೈ ಹಾಕಿದೆ ಸರ್ಕಾರ. ಜನರಿಗೆ ಅಗ್ಗದ ಆಮಿಷಗಳನ್ನು ಒಡ್ಡಿ ಜನರಿಂದಲೇ ದೊಡ್ಡ ಪ್ರಮಾಣದಲ್ಲಿ ಹಣ ಸುಲಿಗೆ ಮಾಡುತ್ತಿದೆ. ಪೆಟ್ರೋಲ್-ಡಿಸೇಲ್‌ ಬೆಲೆ ಏರಿಕೆಯಿಂದ ಈಗ ದಿನಬಳಕೆ ವಸ್ತುಗಳ ಬೆಲೆ ಗಗನಮುಖಿ ಆಗಿದೆ. ಬಡವರು, ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ ಎಂದು ಅವರು ದೂರಿದರು.

ಒಂದು ಕಡೆ ಗ್ಯಾರಂಟಿ ಕೊಡುತ್ತಿರುವ ಸರ್ಕಾರ, ಮತ್ತೊಂದು ಕಡೆ ಅದೇ ಜನರ ಮೇಲೆ ತೆರಿಗೆ ವಿಧಿಸುತ್ತಿದೆ. ಇದು ಯಾವ ನ್ಯಾಯ? ಒಂದು ಕೈಯ್ಯಲ್ಲಿ ಕೊಟ್ಟು ಇನ್ನೊಂದು ಕೈಯ್ಯಲ್ಲಿ ಕಿತ್ತುಕೊಳ್ಳುವ ಈ ಸರ್ಕಾರ ಜನ ವಿರೋಧಿ ಆಗಿದೆ ಎಂದು ಇತರೆ ನಾಯಕರು ಕಿಡಿಕಾರಿದರು.ಕಾರ್ಯಕರ್ತರು ಸರ್ಕಾರದ ವಿರುದ್ಧ ನಾಮಫಲಕ, ಘೋಷಣ ಫಲಕಗಳನ್ನು ಹಿಡಿದು ಘೋಷಣೆ ಕೂಗಿದರು. ಅಲ್ಲದೆ; ಕೂಡಲೇ ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಿರುವ ತೆರಿಗೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯ ಮಾಡಿದರು.

ಇದನ್ನೂ ಓದಿ: ರೇಣುಕಾಸ್ವಾಮಿ ಶವ ಸಾಗಿಸಿದ್ದ ಕಾರು ಪೊಲೀಸರ ಸುಪರ್ದಿಯಲ್ಲಿ, ಯಾರ ಹೆಸರಲ್ಲಿದೆ ಕಾರು?

ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ.ರಂಗನಾಥ್, ಬೆಂಗಳೂರು ಮಹಾನಗರ ಕಾರ್ಯಧ್ಯಕ್ಷ ಜೆ.ಟಿ.ರೇವಣ್ಣ, ಬೆಂಗಳೂರು ಮಹಾನಗರದ ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್,  ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್ ಸೇರಿದಂತೆ ಪಕ್ಷದ ಮುಖಂಡ ಎಲ್ಲಾ ಕ್ಷೇತ್ರದ ಅಧ್ಯಕ್ಷರು ಕಾರ್ಯಕರ್ತರು ಭಾಗಿಯಾಗಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More