Home> Karnataka
Advertisement

ಕರ್ನಾಟಕ ವಿಧಾನಸಭೆ ಚುನಾವಣೆ-2023: ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಬಿಡುಗಡೆ

ಈ ಕುರಿತು ಇಂದು ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯದ ಮಾನ್ಯತೆ ಪಡೆದ ಹಾಗೂ ನೊಂದಾಯಿತ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕರ್ನಾಟಕ ವಿಧಾನಸಭೆ ಚುನಾವಣೆ-2023: ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ - 2023 ರ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಇರುವದನ್ನು ಖಚಿತಪಡಿಸಿಕೊಳ್ಳಲು ಈ ಕೆಳಗಿನ ವೆಬ್ ಸೈಟ್ ಅಥವಾ ಆ್ಯಪ್ ಗಳ ಮೂಲಕ ನೋಡಬಹುದಾಗಿದೆ.

www.nvsp.in or Voter Portal or Voter Helpline Mobile App

ಮತದಾರರು ತಮ್ಮ ಮಾಹಿತಿ ತಪ್ಪಿದ್ದಲ್ಲಿ ಮತ್ತೆ ಬದಲಾವಣೆಗೆ ಅರ್ಜಿ ಸಲ್ಲಿಸಬಹುದು

ರಾಜ್ಯದ ಪ್ರಸ್ತುತ ಅಂತಿಮ ಮತದಾರರ ಪಟ್ಟಿ ಬಿಡುಗಡೆ

7 ಲಕ್ಷ ಯುವ ಮತದಾರರು ಹೊಸದಾಗಿ ಸೇರ್ಪಡೆ

ರಾಜ್ಯದ ಮತದಾರರ ಲಿಂಗಾನುಪಾತದಲ್ಲಿ ಮಹಿಳಾ ಪ್ರಾತಿನಿಧ್ಯ ಏರಿಕೆ, 1000 ಪುರಷರಿಗೆ/988 ಮಹಿಳೆಯರು. ಕಳೆದ ಬಾರಿ 983 ಅನುಪಾತವಿತ್ತು

ಈ ಬಾರಿ 5 ಪಾಯಿಂಟ್ ಮಹಿಳಾ ಮತದಾರರ ಅನುಪಾತದಲ್ಲಿ ಏರಿಕೆ

ಪ್ರಸ್ತುತ ಪ್ರಕಟವಾಗಿರುವ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರು - 6,50,532

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಮತದಾರರು - 1,66,521

ಪ್ರಸ್ತುತ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.

ಚಿಕ್ಕಪೇಟೆ, ಶಿವಾಜಿನಗರ, ಮಹಾದೇವಪುರ ಮತದಾರರ ಅಂತಿಮ ಪಟ್ಟಿಯನ್ನು 2023 ರ ಜನವರಿ 15 ರಂದು ಪ್ರಕಟಿಸಲಾಗುವುದು.

ಇಂದೇ ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯಾ ಎಂದು ಚೆಕ್ ಮಾಡಿಕೊಳ್ಳಲು ಮುಖ್ಯ ಚುನಾವಣಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ - 2023 ರ ರಾಜ್ಯದ 221 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಈ ಕುರಿತು ಇಂದು ಮುಖ್ಯ ಚುನಾವಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಜ್ಯದ ಮಾನ್ಯತೆ ಪಡೆದ ಹಾಗೂ ನೊಂದಾಯಿತ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಪ್ರಕಟಿಸಲಾಗಿರುವ ಅಂತಿಮ ಮತದಾರರ ಪಟ್ಟಿ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಸಿಪಿಐ, ಸಿಪಿಐಎಮ್, ಕಾಂಗ್ರೇಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್, ರಾಜೇಂದ್ರ ಚೋಳನ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

https://ceo.karnataka.gov.in/ ವೆಬ್ ಸೈಟ್ ನಲ್ಲಿ ಪಿಡಿಎಫ್ ಮಾದರಿಯಲ್ಲಿ ಮತದಾರರು ತಮ್ಮ ಹೆಸರು ಮುಂತಾದ ವಿವರಗಳು ಪರಿಶೀಲಿಸಬಹುದು.

ಮೃತಪಟ್ಟ, ವಿಳಾಸ ಬದಲಿಸಿರುವ ಹಾಗೂ ಕೈಬಿಟ್ಟಿರುವ ಮತದಾರರ ಮಾಹಿತಿಯನ್ನು ಕಾರಣ ಸಮೇತ ಪ್ರಕಟಿಸಲಾಗಿದೆ.

https://ceo.karnataka.gov.in/FinalRoll_2023/

https://erms.karnataka.gov.in/2022_ADMS_AFTER_DRAFT/

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Read More