Home> Karnataka
Advertisement

ಬಯಲಾಯ್ತು ʼಕಾಂಗ್ರೆಸ್‌ʼ ಮುಖವಾಡ, ಬೀದಿಗೆ ಬಂತು ʼಬ್ರ್ಯಾಂಡ್ ಬೆಂಗಳೂರುʼ ಬಂಡವಾಳ: ಬಿಜೆಪಿ

BJP vs Congress: ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಮಹಾನಗರ ಅಭಿವೃದ್ಧಿಗೆ ನೀಡಬೇಕಾದಷ್ಟು ಆರ್ಥಿಕ ನೆರವು ನೀಡಿಲ್ಲ. ಇದರಿಂದ ಸಿಲಿಕಾನ್ ಸಿಟಿ ತಗ್ಗು ಗುಂಡಿಗಳ ನಗರವಾಗಿ ಮಾರ್ಪಟ್ಟಿದೆ. ಇದರ ಕೀರ್ತಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೂ ಸಲ್ಲಬೇಕು ಎಂದು ಬಿಜೆಪಿ ಟೀಕಿಸಿದೆ.

ಬಯಲಾಯ್ತು ʼಕಾಂಗ್ರೆಸ್‌ʼ ಮುಖವಾಡ, ಬೀದಿಗೆ ಬಂತು ʼಬ್ರ್ಯಾಂಡ್ ಬೆಂಗಳೂರುʼ ಬಂಡವಾಳ: ಬಿಜೆಪಿ

ಬೆಂಗಳೂರು: ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ ಎಂದು ʼಬ್ರ್ಯಾಂಡ್ ಬೆಂಗಳೂರುʼ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 

ಈ ಬಗ್ಗೆ ಮಂಗಳವಾರ ಟ್ವೀಟ್‌ ಮಾಡಿರುವ ಬಿಜೆಪಿ, ʼಬೆಂಗಳೂರು ನಗರ ಯೋಜನೆಯ ಕಲ್ಪನೆಯೇ ಇಲ್ಲದೆ ಹಾಗೂ ದೂರದೃಷ್ಟಿ ಕೊರತೆಯಿಂದ ಬಳಲುತ್ತಿರುವ ಕಾಂಗ್ರೆಸ್ ಸರ್ಕಾರದ ʼಬ್ರ್ಯಾಂಡ್ ಬೆಂಗಳೂರುʼ ಯೋಜನೆ ರೂಪುಗೊಂಡ ಆರು ತಿಂಗಳ ಒಳಗೆ ಹಳ್ಳ ಹಿಡಿದಿದೆʼ ಎಂದು ಟೀಕಿಸಿದೆ.

ಇದನ್ನೂ ಓದಿ: 'ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಅನುದಾನ ಹಾಗೂ ಮೇಲುಸ್ತುವಾರಿ ಕೊರತೆಯಿಂದ ಬಳಲುತ್ತಿರುವ ʼಬ್ರ್ಯಾಂಡ್ ಬೆಂಗಳೂರುʼ ಯೋಜನೆ ಈಗ ನೇಪಥ್ಯಕ್ಕೆ ಸರಿದಿದೆ. ಸಿಎಂ ಸಿದ್ದರಾಮಯ್ಯನವರು ಬಜೆಟ್‌ನಲ್ಲಿ ಮಹಾನಗರ ಅಭಿವೃದ್ಧಿಗೆ ನೀಡಬೇಕಾದಷ್ಟು ಆರ್ಥಿಕ ನೆರವು ನೀಡಿಲ್ಲ. ಇದರಿಂದ ಸಿಲಿಕಾನ್ ಸಿಟಿ ತಗ್ಗು ಗುಂಡಿಗಳ ನಗರವಾಗಿ ಮಾರ್ಪಟ್ಟಿದೆ. ಇದರ ಕೀರ್ತಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೂ ಸಲ್ಲಬೇಕು.

ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುವುದು, ಬಳಿಕ ಮೈಮರೆಯುವುದು ಕಾಂಗ್ರೆಸ್ ಸರ್ಕಾರಕ್ಕೆ ಹೊಸದಲ್ಲ. ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ರೂಪಿಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರೇ, ಮಳೆಯಿಂದಾಗಿ ಬೆಂಗಳೂರಿನ ಹಲವು ನಿವಾಸಿಗಳ ಮನೆ ಬಾಗಿಲಿಗೆ ಚರಂಡಿ ನೀರು ಬಂದಿದೆ. ಮೊದಲು ಬೆಂಗಳೂರಿಗರ ಸಮಸ್ಯೆ ಬಗೆಹರಿಸಿ ಕೃತಾರ್ಥರಾಗಿʼ ಎಂದು ಬಿಜೆಪಿ ಕುಟುಕಿದೆ.  

ಇದನ್ನೂ ಓದಿ: 'ಫೋನ್‌ ಟ್ಯಾಪ್‌ ಮಾಡುವುದು ಅಕ್ರಮ, ಅಂತಹವರನ್ನು ಜೈಲಿಗೆ ಕಳುಹಿಸಬೇಕು'- ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

Read More