Home> Karnataka
Advertisement

ಕಾಂಗ್ರೆಸ್ ಬೆಂಬಲಿಸುವ ಮತಾಂಧ ಶಕ್ತಿಗಳಿಂದಲೇ ಬಿಜೆಪಿ ಕಾರ್ಯಕರ್ತನ ಹತ್ಯೆ: ಬಿಜೆಪಿ ಆರೋಪ

ಬೆಂಗಳೂರಿನ‌‌ ಕೆಜೆ ಹಳ್ಳಿ ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದಾಗ ಯಾವ ಕ್ರಮ‌ ಕೈಗೊಂಡಿದ್ದೆವೋ ಅದೇ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಬೆಂಬಲಿಸುವ ಮತಾಂಧ ಶಕ್ತಿಗಳಿಂದಲೇ ಬಿಜೆಪಿ ಕಾರ್ಯಕರ್ತನ ಹತ್ಯೆ: ಬಿಜೆಪಿ ಆರೋಪ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಹಿಂದಿರುವ ಶಕ್ತಿಗಳನ್ನು ಹೆಡೆಮುರಿ‌ ಕಟ್ಟುತ್ತೇವೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. #ಹಿಂದೂವಿರೋಧಿಕಾಂಗ್ರೆಸ್‌ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್‌ ಬೆಂಬಲಿಸುವ ಮತಾಂಧ ಶಕ್ತಿಗಳೇ ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದೆ.

ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎಲ್ಲವನ್ನೂ ಬಯಲಿಗೆಳೆಯುತ್ತೇವೆ. ಬಿಹಾರದಲ್ಲಿ‌ ಸಿಕ್ಕಿಬಿದ್ದ ಪಿಎಫ್ಐ ಉಗ್ರರ "ಟೂಲ್ ಕಿಟ್" ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿದೆ. ಹತ್ಯೆಗಳ ಮೂಲಕ ಹಿಂದು ಸಮಾಜವನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ಕರಾವಳಿಯನ್ನು ರಕ್ತಸಿಕ್ತಗೊಳಿಸುವ ಕಾಂಗ್ರೆಸ್‌ ಪ್ರೇರಿತ ಪ್ರಯತ್ನವನ್ನು ಖಂಡಿಸುತ್ತೇವೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ, 3 ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ!

‘ದಕ್ಷಿಣ ಕನ್ನಡದಲ್ಲಿ ನೈತಿಕ ಪೊಲೀಸ್ ಗಿರಿ ನಡೆಯುತ್ತಿದೆ ಎಂದು ಅನಗತ್ಯ ವಿವಾದ ಸೃಷ್ಟಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರೇ, ಈ ಹತ್ಯೆಯ ಬಗ್ಗೆ ಏನು ಹೇಳುತ್ತೀರಿ? ಮತಾಂಧತೆಯನ್ನು ಖಂಡಿಸದ ಕಾಂಗ್ರೆಸ್‌ ಪಕ್ಷದ ಧೋರಣೆ ಅನುಮಾನಕ್ಕೆ ಕಾರಣವಾಗಿದೆ’ ಎಂದು ಟೀಕಿಸಿದೆ.

‘ಹಿಂದೂ ಕಾರ್ಯಕರ್ತರ ಹತ್ಯೆಯ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ. ರಾಜ್ಯ ಸರ್ಕಾರ ಅತ್ಯಂತ ಕಟ್ಟುನಿಟ್ಟಿನ ಕ್ರಮ‌ ಕೈಗೊಳ್ಳಲಿದೆ. ಸಿಎಎ ಹೋರಾಟ ಸಂದರ್ಭದಲ್ಲಿ ಕಾನೂನು ಭಂಗ ಮಾಡಿದವರ ವಿರುದ್ಧ ತೆಗೆದುಕೊಂಡ ಉಗ್ರ ಕ್ರಮವನ್ನೇ ತೆಗೆದುಕೊಳ್ಳುತ್ತೇವೆ’ ಎಂದು ಖಡಕ್ ಎಚ್ಚರಿಕೆ ನೀಡಿದೆ.

ಬಿಜೆಪಿ ಸರ್ಕಾರ ಹಾಗೂ‌ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೈ ಕಟ್ಟಿ ಕುಳಿತಿಲ್ಲ. ಬೆಂಗಳೂರಿನ‌‌ ಕೆಜೆ ಹಳ್ಳಿ ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದಾಗ ಯಾವ ಕ್ರಮ‌ ಕೈಗೊಂಡಿದ್ದೆವೋ ಅದೇ ಕ್ರಮ ಕೈಗೊಳ್ಳುತ್ತೇವೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಬಿಜೆಪಿಯದ್ದು ಒಂದು ವರ್ಷದ ಸಾಧನೋತ್ಸವ ಅಲ್ಲ, ಭ್ರಷ್ಟೋತ್ಸವ: ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More