Home> Karnataka
Advertisement

Laxman Savadi : ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್! 

ಮೋಟಾರು ವಾಹನಗಳ ಮೇಲಿನ ತೆರಿಗೆಲ್ಲಿ ಶೇ.50ರಷ್ಟು ವಿನಾಯ್ತಿ

Laxman Savadi : ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್! 

ಬೆಂಗಳೂರು : ಲಾಕ್ ಡೌನ್ ಸಂಕಷ್ಟದಲ್ಲಿದ್ದಂತ ರಾಜ್ಯದ ಪ್ರಯಾಣಿಕ ವಾಹನ ಮಾಲೀಕರಿಗೆ, ಸರ್ಕಾರ ಈಗಾಗಲೇ ತೆರಿಗೆ ಕಟ್ಟೋದಕ್ಕೆ ಅವಧಿಯನ್ನು ವಿಸ್ತರಣೆ ಮಾಡಿ ಗುಡ್ ನ್ಯೂಸ್ ನೀಡಿತ್ತು. ಇದೀಗ ಜೂನ್ 2021ರ ತಿಂಗಳಿನ ಮೋಟಾರು ವಾಹನಗಳ ಮೇಲಿನ ತೆರಿಗೆಲ್ಲಿ ಶೇ.50ರಷ್ಟು ವಿನಾಯ್ತಿ ನೀಡಿ, ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ(Laxman Savadi), ಕೋವಿಡ್-19 ರ 2ನೇ ಅಲೆಯ ಹಿನ್ನೆಲೆಯಲ್ಲಿ, ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ.

ಇದನ್ನೂ ಓದಿ : Property Tax : ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ : ಆಸ್ತಿ ತೆರಿಗೆ ಪಾವತಿ ದಿನಾಂಕ ವಿಸ್ತರಣೆ!

ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ(Karnataka Motor Vehicle Tax 1957) 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಜೂನ್ 2021ರ ಮಾಹೆಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇಕಡ 50 ರಷ್ಟಕ್ಕೆ ವಿನಾಯಿತಿ ನೀಡಿ ಆದೇಶಿಸಿದ್ದಾರೆ. ಈ ಮೂಲಕ ಪ್ರಯಾಣಿಕ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ಇದನ್ನೂ ಓದಿ : Vegetable Price Hike : ರಾಜ್ಯದ ಜನತೆಗೆ ಬಿಗ್ ಶಾಕ್ : ತರಕಾರಿಗಳ ಬೆಲೆ ಏರಿಕೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More