Home> Karnataka
Advertisement

Mysuru: ಚಿರತೆ ದಾಳಿಗೆ ಮೃತಪಟ್ಟ ಯುವತಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಆನೆ ದಾಳಿಯಲ್ಲಿ ಮೃತಪಟ್ಟವರಿಗೆ ನೀಡುವ ಮಾದರಿಯಲ್ಲಿಯೇ 15 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದರು.

Mysuru: ಚಿರತೆ ದಾಳಿಗೆ ಮೃತಪಟ್ಟ ಯುವತಿ ಕುಟುಂಬಕ್ಕೆ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲಾ 15 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಮೊದಲು ಚಿರತೆ ಹಾವಳಿ ಕಾಡುಪಕ್ಕದ ಸುತ್ತಮುತ್ತ ಇತ್ತು. ಈಗ ಬೆಂಗಳೂರು ಅಕ್ಕಪಕ್ಕವೇ ಚಿರತೆ ಹಾವಳಿ ಹೆಚ್ಚಾಗಿದೆ. ಇದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಚಿರತೆ ಹಿಡಿಯಲು ಬಲಿ ಹಾಕಲಾಗಿದೆ' ಎಂದು ಹೇಳಿದ್ದಾರೆ.

ಅರಣ್ಯ ಅಕ್ಕಪಕ್ಕದ ಗ್ರಾಮಗಳಲ್ಲಿ ಚಿರತೆ ದಾಳಿಗಳು ವರದಿಯಾಗುತ್ತಿವೆ. ವಿಶೇಷ ತಂಡವನ್ನು ರಚಿಸಿ ಬದ್ಧತೆಯಿಂದ ಚಿರತೆ ಹಿಡಿಯುವ ಕಾರ್ಯಾಚರಣೆ ನಡೆಸಲು ಸೂಚಿಸಿದ್ದೇನೆ. ಎಲಿಫೆಂಟ್ ಕಾರಿಡಾರ್ ಸುತ್ತಲೂ ಚಿರತೆ ಇದೆ ಎಂದು ತಿಳಿದುಬಂದಿದೆ. ಕಾಡು ಬಿಟ್ಟು ಬಂದು ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭೀತಿ ಹುಟ್ಟಿಸಿರುವ ಚಿರತೆಗಳನ್ನು ಹಿಡಿಯಲು ವಿಶೇಷ ತಂಡ ರಚಿಸಲು ಸೂಚಿಸಲಾಗಿದೆ. 

ಇದನ್ನೂ ಓದಿ: ಕನ್ನಡಿಗರ ಅಭಿವೃದ್ಧಿ, ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ 

ಚಿರತೆ ದಾಳಿಯಿಂದ ಮೃತಪಟ್ಟರ ಕುಟುಂಬಸ್ಥರಿಗೆ ಆನೆ ದಾಳಿಯಲ್ಲಿ ಮೃತಪಟ್ಟವರಿಗೆ ನೀಡುವ ಮಾದರಿಯಲ್ಲಿಯೇ 15 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಮೊನ್ನೆ ಚಿರತೆ ದಾಳಿಯಿಂದ ಮೃತಪಟ್ಟಿದ್ದ ಟಿ.ನರಸೀಪುರ ತಾಲೂಕಿನ ಕೆಬ್ಬೇಹುಂಡಿ ಗ್ರಾಮದ ಯುವತಿ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದರು.

ಒಂದೇ ತಿಂಗಳಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿ!

ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನಲ್ಲಿ ಒಂದೇ ತಿಂಗಳಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ತಾಲೂಕಿನಲ್ಲಿ ಭೀತಿ ಹುಟ್ಟಿಸಿದ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆಯಿಂದ 10 ವಿಶೇಷ ತಂಡಗಳನ್ನು ರಚಿಸಲಾಗಿದೆ. ಮೈಸೂರು ವೃತ್ತ ಸಿಸಿಎಫ್​ ಮಾಲತಿ ಪ್ರಿಯಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಒಂದು ತಂಡದಲ್ಲಿ ಶೂಟರ್​ ಸೇರಿ 7 ಸಿಬ್ಬಂದಿಗಳಿದ್ದಾರೆ. ನರಬಲಿ ಪಡೆದಿರುವ ಚಿರತೆ ಕಂಡಲ್ಲಿ ಶೂಟ್​ ಮಾಡಲು ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಮೈಸೂರು ವೃತ್ತದಲ್ಲಿರುವ ಅರಣ್ಯ ಸಿಬ್ಬಂದಿ ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಆಗಮಿಸಿ ಹೆಜ್ಜೆ ಗುರುತಿನ ಆಧಾರದ ಮೂಲಕ ಚಿರತೆ ವಯಸ್ಸು ಸೇರಿ ಇತರೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ಇದನ್ನೂ ಓದಿ: ಕರ್ತವ್ಯದ ವೇಳೆ ಕುಸಿದು ಬಿದ್ದು ಇನ್ಸ್ ಪೆಕ್ಟರ್ ಸಾವು

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More