Home> Karnataka
Advertisement

ಅಧಿಕೃತವಾಗಿ ಲೋಕಾಯುಕ್ತ ಕಾರ್ಯಾರಂಭ: ದೂರು ಸ್ವೀಕರಿಸಿ ತನಿಖೆ ನಡೆಸಲು ಆದೇಶ!

ಹೈಕೋರ್ಟ್ ಆದೇಶದಂತೆ ಮೊದಲಿನಂತೆ ಲೋಕಾಯುಕ್ತ ಕೆಲಸ ಮಾಡಲಿದೆ. ಈ ಹಿನ್ನೆಲೆ ಲೋಕಾಯುಕ್ತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ.

ಅಧಿಕೃತವಾಗಿ ಲೋಕಾಯುಕ್ತ ಕಾರ್ಯಾರಂಭ: ದೂರು ಸ್ವೀಕರಿಸಿ ತನಿಖೆ ನಡೆಸಲು ಆದೇಶ!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಅಧಿಕೃತವಾಗಿ ಲೋಕಾಯುಕ್ತ ಕಾರ್ಯಾರಂಭವಾಗಿದ್ದು, ದೂರು ಸ್ವೀಕರಿಸಿ ತನಿಖೆ ನಡೆಸುವಂತೆ ಎಡಿಜಿಪಿ ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರಿಂದ ಬರುವ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಳ್ಳುವಂತೆ  ಲೋಕಾಯುಕ್ತ ಎಡಿಪಿಜಿ ಪ್ರಶಾಂತ್ ಕುಮಾರ್ ಠಾಕೂರ್ ಆದೇಶಿಸಿದ್ದಾರೆ. ಹೈಕೋರ್ಟ್ ಆದೇಶದಂತೆ ಮೊದಲಿನಂತೆ ಲೋಕಾಯುಕ್ತ ಕೆಲಸ ಮಾಡಲಿದೆ. ಈ ಹಿನ್ನೆಲೆ ಲೋಕಾಯುಕ್ತ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ.

ಇದನ್ನೂ ಓದಿ: ಸುಪ್ರೀಂ ಸೂಚನೆ ಹಿನ್ನೆಲೆಯಲ್ಲಿ ಪ್ರಭಾರ ಬಿಡಿಎ ಆಯುಕ್ತರಾಗಿ ಜಿ.ಕುಮಾರ್ ನಾಯಕ್

ಈ ಬಗ್ಗೆ ಆಯಾ ವಿಭಾಗದ ಎಸ್ಪಿ, ಡಿವೈಎಸ್ಪಿ ಮತ್ತು ಇನ್ಸ್‌ಪೆಕ್ಟರ್‍ಗಳಿಗೆ ಎಡಿಜಿಪಿ ಸೂಚಿಸಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಲೋಕಾಯುಕ್ತ ಎಸ್ಪಿ ಕಚೇರಿಗಳಿದ್ದು, ಅದೇ ಕಚೇರಿಗಳೇ ಇದೀಗ ಲೋಕಾಯುಕ್ತ ಪೊಲೀಸ್ ಠಾಣೆಯಾಗಿ ಕಾರ್ಯನಿರ್ವಹಿಸಲಿವೆ. ಬೆಂಗಳೂರಿನಲ್ಲಿ ಲೋಕಾಯುಕ್ತ ಪ್ರಧಾನ ಕಚೇರಿಯಿಂದ ಕಾರ್ಯನಿರ್ವಹಣೆ ನಡೆಯಲಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದೂರು ದಾಖಲಿಸಬೇಕು. ಸಾರ್ವಜನಿಕರಿಂದ ಬಂದ ದೂರನ್ನು ಕಾನೂನಿನಡಿ ತನಿಖೆ ನಡೆಸಬೇಕು ಎಂದು ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಎಸ್ಪಿ, ಡಿವೈಎಸ್ಪಿ ಮತ್ತು ಇನ್ಸ್‍ಪೆಕ್ಟರ್‍ಗಳಿಗೆ ಸೂಚಿಸಿದ್ದಾರೆ. ಹೈಕೋರ್ಟ್‍ನ ಆದೇಶದ ಹಿನ್ನೆಲೆ ಎಡಿಜಿಪಿ ಈ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ:  ಸಂಸದ ಪ್ರತಾಪ್ ಸಿಂಹ ಸುಳ್ಳು ಹೇಳುವ ಯಕಶ್ಚಿತ್ ರಾಜಕಾರಣಿ: ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More