Home> Karnataka
Advertisement

#HinduBoyMurder: ಶಿವಮೊಗ್ಗದಲ್ಲಿ ಮುಸಲ್ಮಾನರು ಎಂದೂ ಕೂಡ ಬಾಲ ಬಿಚ್ಚಿರಲಿಲ್ಲ: ಸಚಿವ ಕೆ ಎಸ್ ಈಶ್ವರಪ್ಪ

Bajrang dal activist killed: ಶಿವಮೊಗ್ಗದಲ್ಲಿ ಹಿಂದುಪರ ಸಂಘಟನೆ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ,  ಡಿಕೆಶಿ ಹೇಳಿಕೆಯಿಂದ ಕುಮ್ಮಕ್ಕು ಪಡೆದ ಮುಸ್ಲಿಮ್ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.

#HinduBoyMurder: ಶಿವಮೊಗ್ಗದಲ್ಲಿ ಮುಸಲ್ಮಾನರು ಎಂದೂ ಕೂಡ ಬಾಲ ಬಿಚ್ಚಿರಲಿಲ್ಲ: ಸಚಿವ ಕೆ ಎಸ್ ಈಶ್ವರಪ್ಪ

ಬೆಂಗಳೂರು: Bajrang dal activist killed: ಶಿವಮೊಗ್ಗದ ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಮುಸಲ್ಮಾನರು ಎಂದೂ ಕೂಡ ಬಾಲ ಬಿಚ್ಚಿರಲಿಲ್ಲ. ಮುಸ್ಲಿಂ ಗೂಂಡಾಗಳು (Muslim Goons) ಕೊಲೆ ಮಾಡಿದ್ದಾರೆ ಎಂದರು.

ಶಿವಮೊಗ್ಗದಲ್ಲಿ ಹಿಂದುಪರ ಸಂಘಟನೆ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa),  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಧ್ವಜದ ವಿಚಾರದಲ್ಲಿ ಪ್ರಚೋದನಾ ಹೇಳಿಕೆ ನೀಡಿದ್ದರು. ಡಿಕೆಶಿ ಹೇಳಿಕೆಯಿಂದ ಪ್ರೇರಣೆ ಪಡೆದು ಮುಸ್ಲಿಮ್ ಗೂಂಡಾಗಳು ಕೊಲೆ ಮಾಡಿದ್ದಾರೆ. ಕೇಸರಿ ಶಾಲೆ ಹಚ್ಚಿದ್ದಾರೆ, ರಾಷ್ಟ್ರ ಧ್ವಜ ತೆಗೆದು ಭಗಧ್ವಜ ಹಾರಿಸಿದ್ದಾರೆ ಎಂದು ಹೇಳಿದ್ದರು. ಈ ರೀತಿಯ ಡಿಕೆಶಿ ಹೇಳಿಕೆಯಿಂದ ಕುಮ್ಮಕ್ಕು ಪಡೆದ ಮುಸ್ಲಿಮ್ ಗೂಂಡಾಗಳು (Muslim Goons) ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ- Harsha Murder : ಶಿವಮೊಗ್ಗದಲ್ಲಿ ಹಿಂದುಪರ ಸಂಘಟನೆ ಕಾರ್ಯಕರ್ತನ ಬರ್ಬರ ಕೊಲೆ!

ಇನ್ನು ಹರ್ಷ (ಹತ್ಯೆಯಾದ ಯುವಕ) ನ ಬಗ್ಗೆ ಮಾತನಾಡಿದ ಸಚಿವ ಈಶ್ವರಪ್ಪ (KS Eshwarappa), ತುಂಬಾ ಪ್ರಾಮಾಣಿಕ ಹಾಗೂ ಸಜ್ಜನ ಕಾರ್ಯಕರ್ತ ಇವನನ್ನ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ. ಯುವಕನ ಕಾರ್ಯವನ್ನು ನಾವೇ ಮುಂದೆ ನಿಂತು ಮಾಡುತ್ತೇವೆ. ಈಗಾಗಲೇ ಗೃಹ ಸಚಿವರಿಗೆ ಮಾತಾಡಿದ್ದೇನೆ ಎಂದರು.

ಇದನ್ನೂ ಓದಿ- ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದ ವತಿಯಿಂದ ಮಾರ್ಚ್ ನಲ್ಲಿ ತರಬೇತಿ ಶಿಬಿರ

ಇದೇ ವೇಳೆ ಶಿವಮೊಗ್ಗದಲ್ಲಿ ಈ ರೀತಿಯ ಗೂಂಡಾಗಿರಿ ಮುಂದುವರೆಯಲು ನಾವು ಬಿಡುವುದಿಲ್ಲ. ಅದನ್ನು ದಮನ ಮಾಡುತ್ತೇವೆ ಎಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Read More