Home> Karnataka
Advertisement

ST Somashekar: ರೈತರಿಗೊಂದು ಸಿಹಿ ಸುದ್ದಿ: ರಾಜ್ಯ ಸರ್ಕಾರದಿಂದ 57 ಸಾವಿರ ರೈತರ ಸಾಲ ಮನ್ನಾ..!

ರೈತರ ಸಾಲ ಮನ್ನಾ ಯೋಜನೆಯಡಿ ಈವರೆಗೆ ಬಾಕಿ ಉಳಿದಿರುವ 57 ಸಾವಿರ ಅರ್ಜಿಗಳ ಸಂಬಂಧ 295 ಕೋಟಿ ರು.ಗಳನ್ನು ಬಿಡುಗಡೆ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ

ST Somashekar: ರೈತರಿಗೊಂದು ಸಿಹಿ ಸುದ್ದಿ: ರಾಜ್ಯ ಸರ್ಕಾರದಿಂದ 57 ಸಾವಿರ ರೈತರ ಸಾಲ ಮನ್ನಾ..!

ಬೆಂಗಳೂರು: ರೈತರ ಸಾಲ ಮನ್ನಾ ಯೋಜನೆಯಡಿ ಈವರೆಗೆ ಬಾಕಿ ಉಳಿದಿರುವ 57 ಸಾವಿರ ಅರ್ಜಿಗಳ ಸಂಬಂಧ 295 ಕೋಟಿ ರು.ಗಳನ್ನು ಬಿಡುಗಡೆ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು.

ಕಾಂಗ್ರೆಸ್‌ನ ಆರ್‌. ಧರ್ಮಸೇನಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾಲ ಮನ್ನಾ(Loan Waive) ಯೋಜನೆಯಡಿ ಬಂದ ಅರ್ಜಿಗಳನ್ನು ಇತ್ಯರ್ಥ ಮಾಡಲಾಗುತ್ತಿದೆ. ಪ್ರಸ್ತುತ 3 ಲಕ್ಷ ರು.ವರೆಗೆ ಇರುವ ಶೂನ್ಯ ಬಡ್ಡಿ ದರದ ಸಾಲದ ಮಿತಿಯನ್ನು ಹೆಚ್ಚಿಸಲು ಪರಿಶೀಲಿಸುವುದಾಗಿ ಭರವಸೆ ನೀಡಿದರು.

Koragajja Karnika ವಿಸ್ಮಯ..! ಕೊರಗಜ್ಜ ನೇಮೋತ್ಸವದಲ್ಲಿ ಮುಸ್ಲಿಂ ಮಹಿಳೆಗೆ ಬಂತು ಆವೇಶ..!

ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಾಲ ಮನ್ನಾ ಸಂಬಂಧ ಬಂದ 73,308 ಅರ್ಜಿಗಳ ಪೈಕಿ 3113 ಅರ್ಜಿಗಳು ಮಾತ್ರ ಬಾಕಿ ಉಳಿದಿವೆ. ಕೆಲವು ರೈತರ ಆದಾಯ ಮಿತಿ ಹೆಚ್ಚಿರುವ ಕಾರಣ ಅರ್ಜಿ ತಿರಸ್ಕರಿಸಲಾಗಿದೆ ಎಂದರು.

Siddaramaiah: 'ಬಿಜೆಪಿ MLA ಗಳ ಜೊತೆ ಸಿದ್ದರಾಮಯ್ಯ ಮಾತುಕತೆ: ಕೆಲವ್ರನ್ನ ಕರೆತರ್ತಿನಿ ಅಂದಿದ್ದಾರೆ'

ಪ್ರತಿಪಕ್ಷದ ನಾಯಕ ಎಸ್‌.ಆರ್‌. ಪಾಟೀಲ್‌ ಮಾತನಾಡಿ, ರಾಜ್ಯಾದ್ಯಂತ ತಾವು ಎಲ್ಲಿಗೆ ಹೋದರೂ ಸಾಲ ಮನ್ನಾ ಆಗಿಲ್ಲ ಎಂಬ ದೂರುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

BS Yediyurappa: ಸಿಎಂ ಕರೆದಿದ್ದ 'ಡಿನ್ನರ್ ಪಾರ್ಟಿಗೆ 28ಕ್ಕೂ ಅಧಿಕ ಬಿಜೆಪಿ ಶಾಸಕರು ಗೈರು'..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More