Home> Karnataka
Advertisement

ದಕ್ಷಿಣ ಕನ್ನಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಟಲ್ ಗ್ರಾಮದಲ್ಲಿ ಐವರು ವ್ಯಕ್ತಿಗಳು 17 ವರ್ಷದ ಬಾಲಕಿ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರವೆಸಗಿದ ಹಿನ್ನಲೆಯಲ್ಲಿ ಗರ್ಭಿಣಿಯಾಗಿದ್ದಾಳೆ.

ದಕ್ಷಿಣ ಕನ್ನಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಟಲ್ ಗ್ರಾಮದಲ್ಲಿ ಐವರು ವ್ಯಕ್ತಿಗಳು 17 ವರ್ಷದ ಬಾಲಕಿ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರವೆಸಗಿದ ಹಿನ್ನಲೆಯಲ್ಲಿ ಗರ್ಭಿಣಿಯಾಗಿದ್ದಾಳೆ.

ಈಗ ಅತ್ಯಚಾರವಾಗಿರುವ ಆ ಬಾಲಕಿ ಎಸ್‌ಎಸ್‌ಎಲ್‌ಸಿ ಮುಗಿಸಿದ ನಂತರ ಮನೆಯಲ್ಲಿದ್ದರು ಎನ್ನಲಾಗಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಸೇರಿದಂತೆ ಐವರು ವ್ಯಕ್ತಿಗಳು ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗಿದೆ. ಇದರ ಪರಿಣಾಮವಾಗಿ ಆಕೆ ಈಗ ಆರು ತಿಂಗಳ ಗರ್ಭಿಣಿಯಾಗಿದ್ದಾಳೆ ಎಂದು ಹೇಳಲಾಗಿದೆ.

ಅತ್ಯಾಚಾರವೆಸಗಿದ ನಂತರ ಈ ವಿಷಯವನ್ನು ಯಾರಿಗೂ ತಿಳಿಸಬೇಡಿ ಎಂದು ಆ ವ್ಯಕ್ತಿಗಳು ಬಾಲಕಿಗೆ ಬೆದರಿಕೆ ಹಾಕಿದ್ದರು ಎಂದು ತಿಳಿದುಬಂದಿದೆ.ಈಗ ವಿಟ್ಟಲ್ ಪೊಲೀಸ್ ಠಾಣೆಯಲ್ಲಿ ಐಪಿಸಿ 3 (1),  (1), (11) ಎಸ್‌ಸಿ / ಎಸ್‌ಟಿ ಕಾಯ್ದೆ, ಮತ್ತು ಪೊಕ್ಸೊ ಕಾಯ್ದೆಯ ಸೆಕ್ಷನ್ 376, 506 ಮತ್ತು 34 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. 
 

Read More