Home> Karnataka
Advertisement

ರಾಜ್ಯದಿಂದ ಹೋದ ಹಣದ ಥೈಲಿಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿವೆ: ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಲೂಟಿ ಹೊಡೆದ ಹಣವನ್ನು ತೆಲಂಗಾಣದಲ್ಲಿ ವೆಚ್ಚ ಮಾಡಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ರಾಜ್ಯದಿಂದ ಹೋದ ಹಣದ ಥೈಲಿಗಳು ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿವೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಲೂಟಿ ಹೊಡೆದ ಹಣವನ್ನು ತೆಲಂಗಾಣದಲ್ಲಿ ವೆಚ್ಚ ಮಾಡಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಚುನಾವಣೆ ಫಲಿತಾಂಶದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದರು.ಪಂಚರಾಜ್ಯಗಳನ್ನೂ ಆವರಿಸಿಕೊಂಡೇ ಬಿಟ್ಟೆವು ಎಂದು ಬೀಗುತ್ತಿದ್ದ ಕಾಂಗ್ರೆಸ್ ಗರ್ವಭಂಗ ಆಗಿದೆ. ತೆಲಂಗಾಣದ ಗೆಲುವು ಅದರ ಸ್ವಶಕ್ತಿಯಿಂದ ಪಡೆದ ಗೆಲುವಲ್ಲ. ದೇಶದ ಎಲ್ಲಾ ಕಡೆ ಕಾಂಗ್ರೆಸ್ ಪ್ರಭಾವ ಕುಗ್ಗಿದೆ ಎಂಬುದಕ್ಕೆ ಈ ಫಲಿತಾಂಶ ಸಾಕ್ಷಿ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ಬಾರದಿರುವ ಅನುದಾನ ಕೇಳುವ ಪೌರುಷ ಬಿಜೆಪಿ ಸಂಸದರಿಗೆ ಇಲ್ಲವೇ? -ರಮೇಶ್ ಬಾಬು 

ಹಲವಾರು ಮತಗಟ್ಟೆ ಸಮೀಕ್ಷೆಗಳು ಜನರ ಮುಂದೆ ಇದ್ದವು. ಎರಡು ರಾಜ್ಯಗಳಲ್ಲಿ ಬಿಜೆಪಿ , ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಂತ ಈ ಸಮೀಕ್ಷೆಗಳು ಭವಿಷ್ಯ ಹೇಳಿದ್ದವು. ಎಲ್ಲಾ ಉಲ್ಟಾ ಆಗಿದೆ. ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬೆಂಬಲದ ರೂಪದಲ್ಲಿ ಜನತೆ ತೀರ್ಮಾನ ಕೈಗೊಂಡಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಆ ಪಕ್ಷದ ಮುಂದೆ ಸಾಕಷ್ಟು ಸವಾಲುಗಳು ಇವೆ. ಅನೇಕ ಆಸೆ, ಆಮಿಷಗಳನ್ನು ಮುಂದೊಡ್ಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.

ಇದನ್ನೂ ಓದಿ: ಬಿಜೆಪಿ, ಮೋದಿಜೀ ಪರ ಸುನಾಮಿ ರೀತಿ ಅಲೆ ಎದ್ದಿದೆ : ಬಿ.ವೈ. ವಿಜಯೇಂದ್ರ

ಕರ್ನಾಟಕದ ನಾಯಕರ ಪ್ರಚಾರದಿಂದ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಕರ್ನಾಟಕದಿಂದ ಅಲ್ಲಿಗೆ ರವಾನೆಯಾದ ಆರ್ಥಿಕ ಥೈಲಿಗಳು, ಚೀಲಗಳು ಈ ಗೆಲುವಿಗೆ ಕಾರಣ. ಇವರ ಸಮಾಜ ಸೇವೆ, ಅಭಿವೃದ್ಧಿಗೆ ಪೂರಕವಾಗಿ ಜನಸೇವೆ ನೋಡಿ ಜನರು ತೆಲಂಗಾಣದಲ್ಲಿ ತೀರ್ಮಾನ ಮಾಡಿದ್ದಲ್ಲ.  ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ನಾನಾ ಕಾರಣಗಳಿವೆ, ಕುತಂತ್ರಗಳು ಕೆಲಸ ಮಾಡಿವೆ. ಲೋಕಸಭೆ ಚುನಾವಣೆ ಬಳಿಕ ಏನೇನಾಗುತ್ತದೆ ಎಂಬುದನ್ನು ನೋಡ್ಬೇಕಲ್ಲ ಎಂದು ಮಾಜಿ ಮುಖ್ಯಮಂತ್ರಿ ಅವರು ಮಾರ್ಮಿಕವಾಗಿ ನುಡಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Read More