Home> Karnataka
Advertisement

Night Curfew In Karnataka: ಡಿಸೆಂಬರ್ 28 ರಿಂದ 10 ದಿನಗಳ ಕಾಲ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ

Night Curfew In Karnataka: ಡಿ.28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ. 

Night Curfew In Karnataka: ಡಿಸೆಂಬರ್ 28 ರಿಂದ 10 ದಿನಗಳ ಕಾಲ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ

ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ಪ್ರಕರಣ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. 

ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (Dr.K.Sudhakar), ರಾಜ್ಯದಾದ್ಯಂತ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಡಿ.28 ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ರ ವರೆಗೆ ನೈಟ್ ಕರ್ಫ್ಯೂ ಜಾರಿಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಕೋವಿಡ್ -19 ರ ಒಮಿಕ್ರಾನ್ ರೂಪಾಂತರದ ಭೀತಿಯಿಂದ ಕರ್ನಾಟಕವು ಡಿಸೆಂಬರ್ 28 ರಿಂದ 10 ದಿನಗಳವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ (Night Curfew In Karnataka) ವಿಧಿಸುತ್ತದೆ. ರಾಜ್ಯ ಸರ್ಕಾರವು ಎಲ್ಲಾ ಹೊಸ ವರ್ಷದ ಪಾರ್ಟಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಸಭೆಗಳನ್ನು ನಿಷೇಧಿಸಿದೆ.

 

 

ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿಯ ವೇಳೆ ಹೊಸ ವರ್ಷ ಆಚರಿಸುವಂತಿಲ್ಲ. ಸಭೆ ಸಮಾರಂಭಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಮಿತಿಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಎಂ.ಕೆ.ಸುದರ್ಶನ್, ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.  

ಇದನ್ನೂ ಓದಿ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೂರು ದಿನ ನೈಟ್ ಕರ್ಫ್ಯೂ..?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More