Home> Karnataka
Advertisement

BPL Card: 'ಮನೆಯಲ್ಲಿ ಬೈಕ್‌, ಟಿ.ವಿ ಇದ್ದರೆ ಬಿಪಿಎಲ್‌ ಕಾರ್ಡ್‌ ರದ್ದು'

ಒಂದು ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದು ಗೊತ್ತಾದರೆ ಅಂಥವರಿಗೆ ದಂಡದ ಜತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಎಚ್ಚರಿಕೆ

BPL Card: 'ಮನೆಯಲ್ಲಿ ಬೈಕ್‌, ಟಿ.ವಿ ಇದ್ದರೆ ಬಿಪಿಎಲ್‌ ಕಾರ್ಡ್‌ ರದ್ದು'

ಬೆಳಗಾವಿ: ಮನೆಯಲ್ಲಿ ಟಿ.ವಿ, ಬೈಕು, ಫ್ರಿಡ್ಜ್‌ ಇದ್ದರೆ ಬಿಪಿಎಲ್‌ ಪಡಿತರ ಚೀಟಿ ರದ್ದುಗೊಳಿಸಲಾಗುವುದು ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ್‌ ಕತ್ತಿ, ಐದು ಎಕರೆಗಿಂತ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್(Motorcycle)‌, ಟೀವಿ, ಫ್ರಿಡ್ಜ್‌ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುವುದು. ಇಂಥವರಿಗೆ ತಮ್ಮ ಬಿಪಿಎಲ್‌ ಕಾರ್ಡ್)‌ ಹಿಂದಿರುಗಿಸಲು ಮಾರ್ಚ್‌‌ ಅಂತ್ಯದ ವರೆಗೆ ಸಮಯ ನೀಡಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ.

BJP: 'ಈಗಲೂ ಸಿದ್ದರಾಮಯ್ಯನವ್ರೇ ನಮ್ಮ ನಾಯಕರು'

ಏಪ್ರಿಲ್‌ ಬಳಿಕ ಸರ್ಕಾರ ಕಾರ್ಡ್‌ದಾರರ ಪರಿಶೀಲನೆ ನಡೆಸಲಿದ್ದು, ಒಂದು ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದು ಗೊತ್ತಾದರೆ ಅಂಥವರಿಗೆ ದಂಡದ ಜತೆ ಶಿಕ್ಷೆ(Police Case)ಯೂ ನೀಡಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Ramesh Jarkiholi: '24 ಗಂಟೆಯಲ್ಲಿ 5 ಕಾಂಗ್ರೆಸ್ ನಾಯಕರಿಂದ ರಾಜೀನಾಮೆ ಕೊಡಿಸಬಲ್ಲೆ'

ಸಚಿವರು, ಸರ್ಕಾರಿ ಅಧಿಕಾರಿಗಳು, ಅರೆ ಸರ್ಕಾರಿ ಅಧಿಕಾರಿಗಳು, 1.20 ಲಕ್ಷ ರುಪಾಯಿ ಆದಾಯ ಇರುವವರು ಬಿಪಿಎಲ್‌ ಕಾರ್ಡ್‌ ಹೊಂದಿರಲು ಸಾಧ್ಯವೇ ಇಲ್ಲ. ಅದರೂ ಕೆಲ ಅಧಿಕಾರಿಗಳು ಬಿಪಿಎಲ್ ಕಾರ್ಡ್(BPL Card)‌ ಹೊಂದಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಹೀಗಾಗಿ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಮಾರ್ಚ್ ಅಂತ್ಯದ ವರೆಗೆ ಸ್ವಯಂ ಪ್ರೇರಿತವಾಗಿ ಬಿಪಿಎಲ್‌ ಕಾರ್ಡ್‌ ಸರ್ಕಾರಕ್ಕೆ ಹಿಂದಿರುಗಿಸಲು ಸೂಚನೆ ನೀಡಲಾಗಿದೆ. ಇದಾದ ಬಳಿಕ ಖುದ್ದು ಸರ್ಕಾರವೇ ಸರ್ವೇ ನಡೆಸಿ ಇಂಥವರ ಪತ್ತೆ ಹಚ್ಚಲಿದೆ ಎಂದು ಹೇಳಿದ್ದಾರೆ.

JDS: 'ಶ್ರಮ ಪಟ್ಟರೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ 120 ಸೀಟು'

ಇದೇ ವೇಳೆ ಏಪ್ರಿಲ್‌ ತಿಂಗಳಿನಿಂದ ಉತ್ತರದ ಜಿಲ್ಲೆಗಳಿಗೆ ಅಕ್ಕಿ ಜತೆ ಜೋಳ ಹಾಗೂ ದಕ್ಷಿಣದ ಜಿಲ್ಲೆಗಳಿಗೆ ಅಕ್ಕಿ(Rice) ಜತೆ ರಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕತ್ತಿ ಹೇಳಿದ್ದಾರೆ. ಅಲ್ಲದೇ ಈ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

Siddaramaiah: 'ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ, ಬಲವಂತವಾಗಿ ಹೇರಿದ್ರೆ ರಕ್ತಪಾತ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More