Home> Karnataka
Advertisement

ಬೆಂಗಳೂರಿಗೆ ಮೋದಿ ಪ್ರವಾಸ : ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಇಲ್ಲಿದೆ

ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆಯ ಪ್ರಧಾನಿ ಮೋದಿ ಕಾರ್ಯಕ್ರಮಗಳ ಸಂಪೂರ್ಣ ವಿವರ ಹೀಗಿದೆ.

ಬೆಂಗಳೂರಿಗೆ ಮೋದಿ ಪ್ರವಾಸ : ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಇಲ್ಲಿದೆ

ಬೆಂಗಳೂರು : ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ದೇವನಹಳ್ಳಿ ಬಳಿಯ ಬೆಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ತಲೆ ಎತ್ತಿರುವ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ಸೇರಿದಂತೆ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಪ್ರಯಾಣ ಹಾಗೂ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಹೀಗಾಗಿ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಅಂತಿಮ ಹಂತದ ಸಿದ್ಧತೆಗಳು ಆಯಾ ಭಾಗಗಳಲ್ಲಿ ಭರದಿಂದ ಸಾಗುತ್ತಿದೆ. 

ನಾಳೆಯ ಪ್ರಧಾನಿ ಮೋದಿ ಕಾರ್ಯಕ್ರಮಗಳ ಸಂಪೂರ್ಣ ವಿವರ ಹೀಗಿದೆ : 

1. ಬೆಳಗ್ಗೆ 10 ಗಂಟೆ  ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮನ.
2. 10.30ಕ್ಕೆ HAL ವಿಮಾನ ನಿಲ್ದಾಣದಿಂದ ವಿಧಾನಸೌಧದವರೆಗೂ ರಸ್ತೆ ಮೂಲಕ ಪ್ರಯಾಣ.
3. 10.32 ರಿಂದ 10.36 ರವರೆಗೆ ಶಾಸಕರ ಭವನದ ಆವರಣದಲ್ಲಿರುವ ಕನಕದಾಸ ಪ್ರತಿಮೆಗೆ ಮಾಲಾರ್ಪಣೆ 
4. 10-36 ರಿಂದ 10-40 ಸಂತ ವಾಲ್ಮೀಕಿ ಪ್ರತಿಮೆಗೆ ಮೋದಿಯಿಂದ ಮಾಲಾರ್ಪಣೆ.
5. 10.42 ರಿಂದ 10.50 ವಿಧಾನಸೌಧದಿಂದ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಪ್ರಯಾಣ ಹಾಗೂ ವಂದೇ ಭಾರತ್ ರೈಲಿಗೆ ಗ್ರೀನ್ ಸಿಗ್ನಲ್.

ಇದನ್ನೂ ಓದಿ : 7th Pay Commission: ದಿನ ಒಂದು ಗಂಟೆ ಹೆಚ್ಚು ಕೆಲಸ ಮಾಡುವಂತೆ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಕರೆ

6. 11.10 ರಿಂದ 11.20 ಏರ್‌ಫೋರ್ಸ್‌ ಟ್ರೈನಿಂಗ್ ಕಮಾಂಡ್‌ ಸೆಂಟರ್‌ ರಸ್ತೆ ಮೂಲಕ ಪ್ರಯಾಣ ಬಳಿಕ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣ
7. ಬೆಳಗ್ಗೆ 11-50 ರಿಂದ 12.10 ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟನೆ 
8. 12.22 ರಿಂದ 12.27 ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಆವರಣದಲ್ಲಿರುವ 108 ಅಡಿ ಎತ್ತರದ ಕೆಂಪೇಗೌಡ ಕಂಚಿನ ಪ್ರತಿಮೆ ಅನಾವರಣ. 
9. 12:35 ರಿಂದ 12:40 ಪ್ರತಿಮೆಗೆ ಪವಿತ್ರ ನೀರು ಪ್ರೋಕ್ಷಣೆ ಹಾಗೂ ಪುಷ್ಪಾರ್ಚನೆ.
10. 12:50ರಿಂದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿ.
11 . ಮಧ್ಯಾಹ್ನ 1.35ರಿಂದ ಸಾರ್ವಜನಿಕರನ್ನು ಉದ್ದೇಶಿಸಿ ಮೋದಿ ಮಾತು.

ಅಂತಾರಾಷ್ಟ್ರೀಯ ವಿಮಾನ ಹಾರಾಟದಲ್ಲಿ ಯಾವುದೇ ಬದಲಾವಣೆ ಇಲ್ಲ:
ಮೋದಿ ಕಾರ್ಯಕ್ರಮದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ತೊಂದರೆ ಆಗುವುದಿಲ್ಲ. ಎಂದಿನಂತೆ ಪ್ರಯಾಣಿಕರಿಗೆ ಸಮಯಕ್ಕೆ ತಕ್ಕಂತೆ ವಿಮಾನಗಳಲ್ಲಿ ಪ್ರಯಾಣ ಬೆಳೆಸಲು ಅವಕಾಶ ಇರುತ್ತದೆ.

ಇದನ್ನೂ ಓದಿ : "ಪಕ್ಷದೊಳಗೆ ಯಾರನ್ನೂ ಬೈಯ್ಯದಂತೆ ಸೂಚನೆ; ಬ್ರಾಹ್ಮಣರನ್ನ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿಸಲು ಮನವಿ

ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ 7 ಫ್ಲಾಟ್ ಫಾರಂ ನಲ್ಲಿ ಪ್ರಯಾಣಿಕರಿಗೆ ಇಲ್ಲ ಅವಕಾಶ: 
ಇನ್ನುಳಿದಂತೆ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದ 7ನೇ ಪ್ಲಾಟ್ ಫಾರಂ ನಲ್ಲಿ ಪ್ರಯಾಣಿಕರಿಗೆ ನ-10 ರಿಂದ 11ರ ಸಂಜೆವರೆಗೂ ಅವಕಾಶ ಇರುವುದಿಲ್ಲ. ನಾಳೆ ವಂದೇಭಾರತ್ ರೈಲಿಗೆ ಚಾಲನೆ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಬಂದು ಹೋಗುವವರೆಗೂ ರೈಲ್ವೇ ಸ್ಟೇಷನ್ ಸುತ್ತಮುತ್ತ ಭಾರೀ ಭದ್ರತೆ ಏರ್ಪಡಿಸಲಾಗಿದೆ. ಈಗಾಗಲೇ ಫ್ಲಾಟ್ ಫಾರಂಗೆ 9 ಬೋಗಿಯುಳ್ಳ ವಂದೇಭಾರತ್ ಎಕ್ಸ್ ಪ್ರೆಸ್ ಆಗಮಿಸಿದೆ. ಪ್ಲಾಟ್ ಫಾರಂ ನಂಬರ್ 7 ರಲ್ಲಿರುವ ವಂದೇಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಧಿಕಾರಿಗಳಿಂದ ವಂದೇಭಾರತ್ ಎಕ್ಸ್ ಪ್ರೆಸ್ ತಪಾಸಣೆ ನಡೆಲಾಗಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More