Home> Karnataka
Advertisement

ಪೊಲೀಸರು ದರ್ಪ ಬಿಟ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳುವುದಿಲ್ಲ. ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪೊಲೀಸರು ದರ್ಪ ಬಿಟ್ಟು ಜನಸ್ನೇಹಿಯಾಗಿ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು ಮತ್ತು ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್‍ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನಿಡಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಶುಕ್ರವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿಗಳಿಗೆ ನೀಡಿದ ಸೂಚನೆಗಳ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ವಿವರಿಸಿದರು. ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳುವುದಿಲ್ಲ. ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿಸಿಸಿಬಿ ಕಸ್ಟಡಿಯಲ್ಲಿದ್ದಾಗ ದಿಢೀರನೆ ಮೂರ್ಛೆ ತಪ್ಪಿದ ಚೈತ್ರಾ ಕುಂದಾಪುರ

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್‍ಐಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎನ್ನುವ ಎಚ್ಚರಿಕೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಸಿಸಿಬಿಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಾದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು ಎಂದರು. ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ, ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅನೈತಿಕ ಪೊಲೀಸ್‍ಗಿರಿ ವಿಚಾರದಲ್ಲಿ ಸರ್ಕಾರ zero tolarence ವಹಿಸಲಿದು ಎಂದು ತಿಳಿಸಿದರು.

ಇದನ್ನೂ ಓದಿ: ಸರ್.ಎಂ. ವಿಶ್ವೇಶ್ವರಯ್ಯರಿಂದಲೇ ಬೆಂಗಳೂರಿಗೆ ಕಾವೇರಿ ನೀರು ಬಂದಿದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ಗೃಹ ಸಚಿವ ಡಾ.ಜಿ.ಪರಮೇಶ್ವರ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಗೋಷ್ಠಿಯಲ್ಲಿದ್ದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Read More