Home> Karnataka
Advertisement

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆಅವಕಾಶ ಕಲ್ಪಿಸಲಾಗಿದೆ.

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಕರ್ನಾಟಕ ಸೆಕ್ಯೂರ್‌ ಎಕ್ಸಾಮಿನೇಷನ್‌ ಸಿಸ್ಟಮ್‌' ಯೋಜನೆಯಡಿ ಸಿಸಿಟಿವಿ ಕಣ್ಗಾವಲಿನಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಪರೀಕ್ಷೆಗಳು ನಡೆಯಲಿವೆ.

ಮಾರ್ಚ್ 1 ರಿಂದ 18ರವರೆಗೆ ಪ್ರತಿದಿನ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರುವ ಪರೀಕ್ಷೆ ನಡೆಯಲಿದೆ. ಈ ಉದ್ದೇಶಕ್ಕಾಗಿ 1013 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಒಟ್ಟಾರೆ 6,73,606 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಸಂದರ್ಭದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಯಾವುದೇ ಆತಂಕ ಬೇಡ ಎಂದು ಅಭಯ ನೀಡಿರುವ ಸರಕಾರ, ಇಂತಹ ಅಕ್ರಮಗಳಲ್ಲಿ ತೊಡಗುವ ವ್ಯಕ್ತಿಗಳ ವಿರುದ್ಧ ಅಗತ್ಯ ಬಿದ್ದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ. 
 

Read More