Home> Karnataka
Advertisement

ರ‍್ಯಾಪಿಡ್‌ ರಸ್ತೆ- ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ಪರಿಗಣನೆ: ಸಿಎಂ ಬೊಮ್ಮಾಯಿ

ಬಿಬಿಎಂಪಿ ವತಿಯಿಂದ ಸಿ.ವಿ.ರಾಮನ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ನಿರ್ಮಿಸಿರುವ ರ‍್ಯಾಪಿಡ್‌ ರಸ್ತೆಯನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತಮ ರಸ್ತೆಗಳ ಜೊತೆಗೆ ವೆಚ್ಚವೂ ಕಡಿಮೆಯಿರುವುದು ಬಹಳ ಮುಖ್ಯ. ಈ ಕುರಿತು ವರದಿಗಳು ಬಂದ ನಂತರ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದರು. 

ರ‍್ಯಾಪಿಡ್‌ ರಸ್ತೆ- ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ಪರಿಗಣನೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಿ ಕಾಸ್ಟ್ ತಂತ್ರಜ್ಞಾನ ಬಳಸಿ ನಿರ್ಮಾಣವಾಗುವ ರ‍್ಯಾಪಿಡ್‌ ರಸ್ತೆಗಳನ್ನು ಗುಣಮಟ್ಟ ಹಾಗೂ ದರಗಳನ್ನು ಪರಿಶೀಲಿಸಿದ ನಂತರ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಬಿಬಿಎಂಪಿ ವತಿಯಿಂದ ಸಿ.ವಿ.ರಾಮನ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ನಿರ್ಮಿಸಿರುವ ರ‍್ಯಾಪಿಡ್‌ ರಸ್ತೆಯನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉತ್ತಮ ರಸ್ತೆಗಳ ಜೊತೆಗೆ ವೆಚ್ಚವೂ ಕಡಿಮೆಯಿರುವುದು ಬಹಳ ಮುಖ್ಯ. ಈ ಕುರಿತು ವರದಿಗಳು ಬಂದ ನಂತರ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದರು. 

ಬೆಂಗಳೂರಿನ ರಸ್ತೆ ನಿರ್ಮಾಣ ಮಾಡುವ ಸಂದರ್ಭಗಳಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದೆವು. ವೈಟ್ ಟಾಪಿಂಗ್ ಮಾಡುವುದು ಬಹಳ ಸಮಯ ತೆಗೆದುಕೊಳ್ಳುತ್ತದೆ. ಈ ಸಂದರ್ಭದಲ್ಲಿ ಸಂಚಾರ ಮಾರ್ಗಗಳನ್ನು ಬದಲಾಯಿಸಬೇಕಾಗುತ್ತದೆ. ಇದರಿಂದಾಗಿ ಟ್ರಾಫಿಕ್ ಜಾಮ್ ಸಮಸ್ಯೆಯೂ ಹೆಚ್ಚಾಗುತ್ತದೆ. ಒಂದು ಬಾರಿ ವೈಟ್ ಟಾಪಿಂಗ್ ಆದ ನಂತರ ಸಮಸ್ಯೆ ಉಂಟಾದಲ್ಲಿ ಪುನಃ ಅದನ್ನು ಒಡೆದು ತೆಗೆಯುವುದು ದೊಡ್ಡ ಆತಂಕದ ಕೆಲಸ. ಅದಕ್ಕೆಂದೇ ರ‍್ಯಾಪಿಡ್‌ ರಸ್ತೆ ತಂತ್ರಜ್ಞಾನ ಬಂದಿದೆ. ಈ ತಂತ್ರಜ್ಞಾನ ಪ್ರಿ ಕಾಸ್ಟ್ ಸ್ಲ್ಯಾಬ್ ಗಳನ್ನು ತಯಾರಿಸಿ, ಆಂತರಿಕ ಜಾಯಿಂಟ್ ಹಾಕಿ, ಬಲಗೊಳಿಸಿ, ರಸ್ತೆಯನ್ನು ಪ್ರಾಯೋಗಿಕವಾಗಿ 500 ಮೀ. ಪೈಕಿ 375 ಮೀಟರ್ ಉದ್ದದ ರಸ್ತೆ ನಿರ್ಮಾಣವಾಗಿದೆ. ಅದನ್ನು ಪರಿಶೀಲಿಸಲು ಬಂದಿದ್ದು, ಹಲವಾರು ಸೂಚನೆಗಳನ್ನು ನೀಡಿದ್ದೇನೆ. 20 ಟನ್ ಮೇಲಿರುವ ವಾಹನಗಳನ್ನು ಸತತವಾಗಿ ಸಂಚಾರ ಮಾಡಿಸಿ, ವಿಶ್ಲೇಷಣೆ ಮಾಡಬೇಕಿದೆ. ಭಾರಿ ವಾಹನಗಳ ಚಲನೆಯಿಂದ ಆಗುವ ಪರಿಣಾಮಗಳ ಬಗ್ಗೆ ಸಂಪೂರ್ಣ ವರದಿ ಬೇಕೆಂದು ಸೂಚಿಸಿದ್ದೇನೆ. ಇಲ್ಲಿಯ ಜಾಯಿಂಟ್ ಗಳು, ಟೆನ್ಸಾಯಿಲ್ ಶಕ್ತಿ ಏನಿದೆ, ತಾಂತ್ರಿಕ ವಿವರಗಳನ್ನು ಸಲ್ಲಿಸಲು ಸೂಚಿಸಿದ್ದು, ಅಂತಿಮವಾಗಿ ಕಾಮಗಾರಿಯು ಕ್ಷಿಪ್ರವಾಗಿ ಆಗಬೇಕು,  ಗುಣಮಟ್ಟವಿರಬೇಕು ಹಾಗೂ ವೆಚ್ಚವೂ ಸೂಕ್ತವಾಗಿರಬೇಕು ಎಂದು ಸೂಚಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ- ಶೀಘ್ರದಲ್ಲೇ ತುಮಕೂರಿನಲ್ಲಿ 1000 ಎಕರೆಯ ಕೈಗಾರಿಕಾ ಟೌನ್ -ಸಿಎಂ ಬೊಮ್ಮಾಯಿ

ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಂಡಿದ್ದು, ಕಡಿಮೆ ವೆಚ್ಚದಲ್ಲಿ ಆಗುವುದಾದರೆ, ಬೆಂಗಳೂರಿನಲ್ಲಿ ಎಲ್ಲೆಲ್ಲಿ ವೈಟ್ ಟಾಪಿಂಗ್, ಸಂಚಾರ ದಟ್ಟಣೆಯುಳ್ಳ,  ಕ್ಷಿಪ್ರವಾಗಿ ರಸ್ತೆಯಾಗಬೇಕಿರುವ ಸ್ಥಳಗಳಲ್ಲಿ ಇದನ್ನು ಅಳವಡಿಸಬಹುದು. ಇದೇ ಸಂದರ್ಭದಲ್ಲಿ ಈ ರಸ್ತೆಗಳಿಗೆ ವೈಟ್ ಟಾಪಿಂಗ್ ಗಿಂತ ಶೇ. 30 ರಷ್ಟು ಹೆಚ್ಚು ವೆಚ್ಚವಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ವೆಚ್ಚವನ್ನು ಕಡಿತಗೊಳಿಸಬೇಕು. ನಮ್ಮ  ಎಸ್.ಆರ್.ದರಗಳಿಗೆ ಹೊಂದುವಂತಿದ್ದರೆ ಮಾತ್ರ ಇದನ್ನು ಪರಿಗಣಿಸಲಾಗುವುದು ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ ಎಂದರು. 

ಇದನ್ನೂ ಓದಿ- ಫೆಬ್ರವರಿಯಲ್ಲಿ ಏರ್ ಶೋ- ಪ್ರಧಾನಿ ಮೋದಿಯವರಿಂದ ಉದ್ಘಾಟನೆ

ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್,  ಶಾಸಕ  ಎಸ್.ರಘು, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More