Home> Karnataka
Advertisement

ಪ್ರತಿ ಸರ್ಕಾರಿ ಕಾಲೇಜಿನಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸ್ಥಾಪನೆಗೆ ಆದೇಶ

ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡುವ ಬಗ್ಗೆ ಆ ಭಾಗದ ನಾಯಕರನ್ನು ವಿಶ್ವಾಸಕ್ಕೆ ಪಡೆದು ತೀರ್ಮಾನ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
 

ಪ್ರತಿ ಸರ್ಕಾರಿ ಕಾಲೇಜಿನಲ್ಲಿ  ಸಂಗೊಳ್ಳಿ ರಾಯಣ್ಣ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್  ಪ್ರತಿಮೆ ಸ್ಥಾಪನೆಗೆ ಆದೇಶ

ಬೆಂಗಳೂರು : ಸಂಗೊಳ್ಳಿ ರಾಯಣ್ಣ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪ್ರತಿ ಸರ್ಕಾರಿ ಕಾಲೇಜಿನಲ್ಲಿ ಸ್ಥಾಪಿಸಬೇಕೆಂದು ಆದೇಶ  ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ನಮ್ಮ ಮಕ್ಕಳಿಗೆ ಯಾರು ನಿಜವಾಗಿಯೂ ತಮ್ಮ ಪ್ರಾಣವನ್ನು ತ್ಯಾಗ ಮಾಡಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ ಎನ್ನುವುದು ತಿಳಿಯಬೇಕು. ನಮ್ಮ ಮಕ್ಕಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನು ಗುರುತಿಸುವ ಕೆಲಸವಾಗಬೇಕು. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡುವ ಬಗ್ಗೆ ಆ ಭಾಗದ ನಾಯಕರನ್ನು ವಿಶ್ವಾಸಕ್ಕೆ ಪಡೆದು ತೀರ್ಮಾನ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಸಂಗೊಳ್ಳಿ ರಾಯಣ್ಣನ ಸ್ಫೂರ್ತಿ ಎಲ್ಲಿಯವರೆಗೆ ಇರುತ್ತದೋ ಅಲ್ಲಿಯವರೆಗೂ ಭಾರತ ಸುರಕ್ಷಿತವಾಗಿ ಇರಲಿದೆ ಎಂದಿದ್ದಾರೆ. 

ಇದನ್ನೂ ಓದಿ ಕ್ಯಾಪ್ಟನ್ ರಾಕೇಶ್ ಟಿ ಆರ್ ರವರಿಗೆ ಶೌರ್ಯ ಚಕ್ರ ಪ್ರಶಸ್ತಿ

ಮೊದಲನೇ ಸ್ವಾತಂತ್ರ್ಯ ಹೋರಾಟಕ್ಕೂ 40 ವರ್ಷ ಮುನ್ನವೇ ದೇಶದ ಮೊದಲ ಸ್ವಾತಂತ್ರ್ಯ ಹೋರಾಟ ಮಾಡಿದ್ದು ಕಿತ್ತೂರು ರಾಣಿ ಚೆನ್ನಮ್ಮ. ಅವರೆಲ್ಲರೂ ಹೋರಾಟ ಮಾಡಿರದಿದ್ದರೆ, ಇಷ್ಟು ಬೇಗ ಸ್ವಾತಂತ್ರ್ಯ ಲಭಿಸುತ್ತಿರಲಿಲ್ಲ. ಅವರ ಸಾಹಸದ ಕಥೆ ಮಕ್ಕಳಿಗೆ ಹೇಳುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸ್ವತಂತ್ರ ಬಂದ ನಂತರ ಒಗ್ಗಟ್ಟಿನಿಂದ, ಮುಂದುವರೆದರೆ ಮಾತ್ರ ಈ ದೇಶಕ್ಕೆ ಭವಿಷ್ಯವಿದೆ ಎನ್ನುವುಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.  

ಇಂದಿಗೂ ನಮ್ಮ ನಡುವೆ ಜೀವಂತ :
ಸಂಗೊಳ್ಳಿ ರಾಯಣ್ಣ ಇಂದಿಗೂ ನಮ್ಮ ನಡುವೆ ಜೀವಂತವಿದ್ದಾರೆ. ಸಾವಿನ ನಂತರವೂ ನಮ್ಮ ನಡುವೆ ಇದ್ದಾರೆ. ಅವರ ಸಾಹಸ , ಶೌರ್ಯ, ಧೈರ್ಯ, ದೇಶಭಕ್ತಿಗಳ ವಿಚಾರದಲ್ಲಿ ಪ್ರೇರಣಾ ಶಕ್ತಿಯಾಗಿದ್ದಾರೆ. 184 ಕೋಟಿ ರೂ.ಗಳ ವೆಚ್ಚದಲ್ಲಿ ಸಂಗೊಳ್ಳಿ ರಾಯಣ್ಣ ವಸತಿ ಶಾಲೆಯನ್ನು ನಿರ್ಮಿಸಲಾಗುತ್ತಿದೆ. ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ನಮ್ಮ ಮನವಿಯ ಮೇರೆಗೆ  ರಕ್ಷಣಾ ಶಾಲೆಯನ್ನು  ನೀಡಿ ಈಗಾಗಲೇ ಶಾಲೆ ಪ್ರಾರಂಭವಾಗಿದೆ. ಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಆಗಲಿದೆ. ಸಂಗೊಳ್ಳಿ ರಾಯಣ್ಣನ ಹೆಸರಿನ ಶಾಲೆ ಸೇನಾನಿಗಳಿಗೆ ತರಬೇತಿ ನೀಡುವ ಶಾಲೆಯಾಗಿದೆ ಎಂದರು. 

ಇದನ್ನೂ ಓದಿ ರಾಜ್ಯದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಸೀಟು ಮೀಸಲಾತಿ ಪಾಲನೆ ಕಡ್ಡಾಯ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More