Home> Karnataka
Advertisement

ಸಂತೋಷ್ ಪಾಟೀಲ್ ಸೂಸೈಡ್ ಕೇಸ್ ಮರುತನಿಖೆ..ಈಶ್ವರಪ್ಪಗೆ ಕಾದಿದೀಯಾ ಮತ್ತೆ ಸಂಕಷ್ಟ..!

Santosh Patil Sucide Case : ಬೆಳಗಾವಿ ಮೂಲದ ಕಾಂಟ್ರ್ಯಾಕ್ಟರ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಮತ್ತೆ ಮುನ್ನೇಲೆಗೆ ಬಂದಿದೆ. ಮೃತ ಸಂತೋಷ ಕುಟುಂಬಸ್ಥರು ಪ್ರಕರಣವನ್ನು ಮರು ತನಿಖೆ ಮಾಡುವಂತೆ ಇಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ. ಪ್ರಕರಣ ಬಿ ರಿಪೋರ್ಟ್ ಸಲ್ಲಿಸಿದ್ದು ನಮಗೆ ಅನ್ಯಾಯವಾಗಿದೆ ಪ್ರಕರಣವನ್ನು ಸಿಬಿಐ ಇಲ್ಲವೇ ಸಿಐಡಿಗೆ ಒಪ್ಪಿಸಲು ಒತ್ತಾಯ ಮಾಡಿದ್ದಾರೆ ಆ ಕುರಿತ ಒಂದು ರಿಪೋರ್ಟ್ ಇಲ್ಲಿದೆ. 
 

ಸಂತೋಷ್ ಪಾಟೀಲ್ ಸೂಸೈಡ್ ಕೇಸ್ ಮರುತನಿಖೆ..ಈಶ್ವರಪ್ಪಗೆ ಕಾದಿದೀಯಾ ಮತ್ತೆ ಸಂಕಷ್ಟ..!

Cm Siddaramaiah : ಹೌದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ  ಮತ್ತೆ ಸಂಕಷ್ಟ ಎದುರಾಗುವ ಲಕ್ಷಣ ಕಾಣುತ್ತಿವೆ. ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಮರು ತನಿಖೆ ಮಾಡುವಂತೆ ಕುಟುಂಬಸ್ಥರು ಇಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ. 

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ 2022ರ ಏಪ್ರಿಲ್ 12ರಂದು ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿಗೆ ಮುಖ್ಯ ಕಾರಣ ಈಶ್ವರಪ್ಪನವರು ಎಂದು ಆರೋಪ ಮಾಡಲಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯರತ್ ರಾಜ್ ಇಲಾಖೆ ಸಚಿವರಾಗಿದ್ದ ವೇಳೆ ಈಶ್ವರಪ್ಪನವರು ಇಲಾಖೆಯ ಕಾಮಗಾರಿ ನಡೆಸಿದ ಸಂಬಂಧ ಸರ್ಕಾರದಿಂದ ಬಿಲ್ ಮಂಜೂರು ಮಾಡಲು ಶೇಕಡಾ 40ರಷ್ಟು ಕಮಿಷನ್ ಕೇಳಿದ್ದರು ಎಂದು ಮೃತ ಸಂತೋಷ್ ಪಾಟೀಲ್ ಡೇತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. 

ಈ ಕುರಿತು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್, ರಾಜಕೀಯ ಪ್ರಭಾವಕ್ಕೆ ಒಳಗಾಗಿ ಎಸ್ಐಟಿ ಅಧಿಕಾರಿಗಳು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದರು. ನಂತರ  ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಬಿ-ರಿಪೋರ್ಟ್ ಅಂಗೀಕರಿಸಿದೆ. ಆದ್ರೆ ಮೃತ ಸಂತೋಷ ಕುಟುಂಬಸ್ಥರು ನಮಗೆ ಈ ಪ್ರಕರಣದಲ್ಲಿ ಅನ್ಯಾಯವಾಗಿದೆ ಮರು ತನಿಖೆ ಮಾಡುವಂತೆ ಒತ್ತಾಯಿಸಿ ಕಣ್ಣೀರು ಇಟ್ಟಿದ್ದಾರೆ. 

ಇದನ್ನೂ ಓದಿ-"ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ"

ಇಂದು ಅಥಣಿ ಮತಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ, ಅಡಿಗಲ್ಲು ಮಾಡಲು ಬೆಳಗಾವಿಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯನವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ಸಂತೋಷ ಪಾಟೀಲ್ ಪತ್ನಿ ಜಯಶ್ರೀ, ಪುತ್ರ, ತಾಯಿ ಪಾರ್ವತಿ, ಸಹೋದರ ಪ್ರಶಾಂತ್ ಆತ್ಮಹತ್ಯೆ ಪ್ರಕರಣ ಬಿ ರಿಪೋರ್ಟ್ ಸಲ್ಲಿಕೆಯಿಂದ ಅನ್ಯಾಯ ಆಗಿದೆ.
ಪ್ರಕರಣವನ್ನ ಸಿಬಿಐ ಇಲ್ಲವೇ ಸಿಐಡಿಗೆ ವಹಿಸಬೇಕೆಂದು ಸಿಎಂಗೆ ಮನವಿ ಮಾಡಿಕೊಂಡರು. 

ಮನವಿ ಸ್ವೀಕರಿಸಿದ ನಂತರ ಪ್ರತಿಕ್ರಿಯೆ ನೀಡಿದ ಸಿಎಂ 
ಗುತ್ತಿಗೆದಾರ ಸಂತೋಷ ಪಾಟೀಲ್ ಕುಟುಂಬಸ್ಥರು ನ್ಯಾಯ ಸಿಕ್ಕಿಲ್ಲ‌. ಮರು ತನಿಖೆ ಮಾಡಬೇಕು ಎಂದು ಮನವಿ ಕೊಟ್ಟಿದ್ದಾರೆ. ಕಾನೂನು ಇಲಾಖೆ ಜೊತೆಗೆ ಚರ್ಚೆ ಮಾಡ್ತಿನಿ ಎಂದಿದ್ದಾರೆ. 

ಒಟ್ಟಾರೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಈ ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕರು ನೆಮ್ಮದಿ ಇಲ್ಲದಂತಾಗಿದೆ. ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣವನ್ನು ಸರ್ಕಾರ ಮರು ತನಿಖೆ ಮಾಡುತ್ತಾ ಎನ್ನುವ ಕುತೂಹಲ ಕೆರಳಿಸಿದೆ. ಸರ್ಕಾರದ ನಿರ್ಧಾರ ಏನಾಗಿರುತ್ತೆ ಅನ್ನುವುದನ್ನು ಕಾದು ನೋಡಬೇಕು.

ಇದನ್ನೂ ಓದಿ-ಕಾಂಗ್ರೆಸ್ ಪಕ್ಷದ ಗೆಲುವು ಬಿಜೆಪಿಯ ಭಯಕ್ಕೆ ಕಾರಣ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More