Home> Karnataka
Advertisement

ಕಾನೂನು ಪದವಿಧರರಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯಾಧಿಕರಣ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕಾನೂನು ಪದವಿಧರರಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ನವದೆಹಲಿ: ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ನ್ಯಾಯಾಧಿಕರಣ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೌಶಲ್ಯಾಭಿವೃದ್ದಿ ಉದ್ಯಮಶೀಲತೆಗಾಗಿ ಉಚಿತ ತರಬೇತಿ..! ತಪ್ಪದೆ ಅರ್ಜಿ ಸಲ್ಲಿಸಿ

2020-21ನೇ ಸಾಲಿನ ಪರಿಶಿಷ್ಟ ವರ್ಗ ಕಾನೂನು ಪದವೀಧರರಿಗೆ ನ್ಯಾಯಾಧಿಕರಣ ತರಬೇತಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯ್ಕೆಯಾಗಲು ಪ್ರಸಕ್ತ ವರ್ಷದಿಂದ ಆನ್‌ಲೈನ್ ಮೂಲಕ ವೆಬ್‌ಸೈಟ್ www.tw.kar.nic.in ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಅರ್ಜಿಯ ಜೊತೆಗೆ ತಮ್ಮ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ತಾಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಅಥವಾ ಯಲಬುರ್ಗಾ ಹಾಗೂ ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕುಷ್ಟಗಿ ಅಥವಾ ಗಂಗಾವತಿ, ಈ ಕಛೇರಿಗಳಿಗೆ ಕಡ್ಡಾಯವಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಹಾಗೂ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ/ ಯಲಬುರ್ಗಾ ಹಾಗೂ ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕುಷ್ಟಗಿ/ ಗಂಗಾವತಿ, ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read More