Home> Karnataka
Advertisement

ವಾಹನಗಳ ಮೇಲೆ ಕಲ್ಲು ತೂರಾಟ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ

ಬೆಳಗಾವಿ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗಂಪುಗಾಗಿ ಸೇರುವುದನ್ನು ನಿಷೇಧಿಸಲಾಗಿದೆ.

ವಾಹನಗಳ ಮೇಲೆ ಕಲ್ಲು ತೂರಾಟ: ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿ

ಬೆಳಗಾವಿ: ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(Sangolli Rayanna) ಪ್ರತಿಮೆ ಭಗ್ನಗೊಳಿಸಿರುವ ಹಿನ್ನೆಲೆ ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶನಿವಾರ(ಡಿ.18) ಬೆಳಗ್ಗೆ 8ರಿಂದ ಭಾನುವಾರ (ಡಿ.19) ಬೆಳಗ್ಗೆ 6ಗಂಟೆವೆಗೆ ನಿಷೇಧಾಜ್ಞೆ(Section 144 in Belagavi) ಜಾರಿಯಲ್ಲಿರಲಿದೆ. ಬೆಳಗಾವಿ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗಂಪುಗಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಈ ಕುರಿತು ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ.  

ಸಿಸಿಟಿವಿ ದೃಶ್ಯವಾಳಿಯಲ್ಲಿ ಕಲ್ಲು ತೂರಾಟ ಸೆರೆ

ಪೊಲೀಸರ ಮೇಲೆ ಮತ್ತು ಪೊಲೀಸ್​ ವಾಹನಗಳು ಸೇರಿದಂತೆ ಬೆಳಗಾವಿ ನಗರದ ಕೆಲವು ವಾಹನಗಳ ಮೇಲೆ ನಿನ್ನೆ ರಾತ್ರಿ(ಡಿ.17) ಕೆಲ ಪುಂಡರು ಕಲ್ಲು ತೂರಾಟ(Stone Pelting) ನಡೆಸಿದ್ದರು. ಈಗ ಪೊಲೀಸ್​ ವಾಹನದ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ​  

ಇದನ್ನೂ ಓದಿ: ಕೈಗಾರಿಕೆಗಳಿಗಾಗಿ ಭೂಮಿ ಕಳೆದುಕೊಂಡಿರುವ ರೈತರ ಮಕ್ಕಳಿಗೆ ಉದ್ಯೋಗ- ಸಚಿವ ಮುರುಗೇಶ್ ನಿರಾಣಿ

ಬೆಳಗಾವಿಯ ಸಂಭಾಜಿ ವೃತ್ತದಲ್ಲಿ ನೂರಾರು ಪ್ರತಿಭಟನಾಕಾರರು ಜಮಾವಣೆಗೊಂಡು ಪ್ರತಿಭಟನೆ(Protest) ನಡೆಸುತ್ತಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸುತ್ತಿದ್ದರು. ಶುಭಂ ಶಳಕೆ, ಮಾಜಿ ಮೇಯರ್ ಸರಿತಾ ಪಾಟೀಲ ಸೇರಿ ಎಂಇಎಸ್ ಪುಂಡರು ಪ್ರತಿಭಟನೆಗೆ ಸಾಥ್ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸ್ ವಾಹನದ ಮೇಲೆ ಹತ್ತಾರು ಯುವಕರು ಕಲ್ಲು ತೂರಾಟ ನಡೆಸಿ ಅಟ್ಟಹಾಸ ಮೆರೆದಿದ್ದಾರೆ. ಈಗ ಪೊಲೀಸ್​ ವಾಹನದ ಮೇಲೆ ಕಲ್ಲು ತೂರಿರುವ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ.

ಈ ಘಟನೆ ಕುರಿತಂತೆ 3 ಪೊಲೀಸ್ ಠಾಣೆ(Belagavi Police)ಗಳಲ್ಲಿ ದೂರು ದಾಖಲಾಗಿದೆ. ರಾತ್ರೋರಾತ್ರಿ ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು ಘಟನೆಗೆ ಸಂಬಂಧಿಸಿದಂತೆ 27ಕ್ಕೂ ಹೆಚ್ಚು ಎಂಇಎಸ್ ಪುಂಡರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.  

ಇದನ್ನೂ ಓದಿ: ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Read More