Home> Karnataka
Advertisement

ಪಡಿತರ ಮಾದರಿಯಲ್ಲಿ ನೇಕಾರರ ಸೀರೆಗಳನ್ನು ಮಾರಾಟ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ

Weavers Demand to State Govt: ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರದಲ್ಲಿ ಮಾತನಾಡಿರುವ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರ್ಕಿ ಅವರು, ಜಿಲ್ಲೆಯಲ್ಲಿ ನೇಕಾರರು ಅತ್ಯಧಿಕ ಸಂಖ್ಯೆಯಲ್ಲಿ ಇದ್ದಾರೆ. ಆದರೆ, ನೇಕಾರರು ನೇಯ್ಗೆಯ ಮೂಲಕ ತಮ್ಮ ಆರ್ಥಿಕತೆಯನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ‌ ಎಂದು ಅಳಲು ತೋಡಿಕೊಂಡರು. 

ಪಡಿತರ ಮಾದರಿಯಲ್ಲಿ ನೇಕಾರರ ಸೀರೆಗಳನ್ನು ಮಾರಾಟ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯ

Weavers Demand to State Govt: ಪಡಿತರ ಮಾದರಿಯಲ್ಲಿ ನೇಕಾರರ ಸೀರೆಗಳನ್ನು ರಾಜ್ಯ ಸರ್ಕಾರ ಹಂಚಿಕೆ ಮಾಡಬೇಕೆಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರ್ಕಿ ಅವರು  ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರದಲ್ಲಿ ಮಾತನಾಡಿರುವ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರ್ಕಿ ಅವರು, ಜಿಲ್ಲೆಯಲ್ಲಿ ನೇಕಾರರು ಅತ್ಯಧಿಕ ಸಂಖ್ಯೆಯಲ್ಲಿ ಇದ್ದಾರೆ. ಆದರೆ, ನೇಕಾರರು ನೇಯ್ಗೆಯ ಮೂಲಕ ತಮ್ಮ ಆರ್ಥಿಕತೆಯನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ‌ ಎಂದು ಅಳಲು ತೋಡಿಕೊಂಡರು. 

ಇದನ್ನೂ ಓದಿ- ಗ್ಯಾರಂಟಿ ಯೋಜನೆ ನಿಲ್ಲಿಸೋದಿಲ್ಲ.. ಗ್ಯಾರಂಟಿ ರಾಜಕೀಯ ಉದ್ದೇಶಕ್ಕಲ್ಲ: ಗೃಹ ಸಚಿವ ಡಾ ಜಿ ಪರಮೇಶ್ವರ್

ಒಂದೆಡೆ, ತಮ್ಮ ಕುಲಕಸುಬನ್ನೇ ಜೀವನವಾಗಿಸಿಕೊಂಡಿರುವ ನೇಕಾರರು, ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದಾಗಿ  ಕುಸಿದು ಹೋಗಿದ್ದಾರೆ. ಹೀಗಿರುವಾಗ ಜಿಲ್ಲೆಯ ನೇಕಾರರು ರಾಜ್ಯ ಸರ್ಕಾರದಲ್ಲಿ ಹೊಸದೊಂದು ಬೇಡಿಕೆ ಇಟ್ಟಿದ್ದಾರೆ. ಸಂಕಷ್ಟದಲ್ಲಿ ನಲುಗುತ್ತಿರುವ ನೇಕಾರ ಸಮುದಾಯವನ್ನು ರಾಜ್ಯ ಸರ್ಕಾರವೇ ಮೇಲೆಕ್ಕೆತ್ತಬೇಕು ಎಂದವರು ಆಗ್ರಹಿಸಿದರು. 

ಇದನ್ನೂ ಓದಿ- ಹಗರಣ ಮುಚ್ಚಿಹಾಕುವ ಯತ್ನವೇ? ಸಿಎಂ ರಾಜೀನಾಮೆಯೇ?: ರಾಹುಲ್ ಗಾಂಧಿಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ್

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಜ್ಯದ ಜನರಿಗೆ ಉಚಿತವಾಗಿ ಪಡಿತರ ನೀಡುವ ಮಾದರಿಯಲ್ಲಿಯೇ ನೇಕಾರರು ನೇಯ್ದ ಸೀರೆಯನ್ನು ಪ್ರತಿ ಕುಟುಂಬಕ್ಕೂ ಉಚಿತವಾಗಿ ನೀಡುವ ಯೋಜನೆ ತರಬೇಕೆಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರ್ಕಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Read More