Home> Karnataka
Advertisement

ಪ್ರಸಕ್ತ ವರ್ಷವನ್ನು ಜೀವನೋಪಾಯ ವರ್ಷ ಎಂದು ರಾಜ್ಯ ಸರ್ಕಾರ ಘೋಷಣೆ

ರಾಜ್ಯ ಸರ್ಕಾರ ಪ್ರಸಕ್ತ ವರ್ಷವನ್ನು ಜೀವನೋಪಾಯ ವರ್ಷ ಎಂದು ಘೋಷಿಸಿದೆ.

ಪ್ರಸಕ್ತ ವರ್ಷವನ್ನು ಜೀವನೋಪಾಯ ವರ್ಷ ಎಂದು ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಪ್ರಸಕ್ತ ವರ್ಷವನ್ನು ಜೀವನೋಪಾಯ ವರ್ಷ ಎಂದು ಘೋಷಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಉನ್ನತ ಶಿಕ್ಷಣ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಗ್ರಾಮೀಣ ಮಹಿಳೆಯರ ಬದುಕಿನಲ್ಲಿ ಅಮೂಲಾಗ್ರ ಬದಲಾವಣೆ ತರುವ ಜೊತೆಗೆ ಆರ್ಥಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುವಂತೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಈಗ ಪೌಷ್ಟಿಕ ತೋಟ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದೆ.ಇದಕ್ಕಾಗಿ ಸುಮಾರು 288 ಕೋಟಿ.ರೂ ವ್ಯಯ ಮಾಡಲಿದೆ ಎನ್ನಲಾಗುತ್ತಿದೆ.ಈಗ ಈ ಯೋಜನೆ ಕುರಿತಾಗಿ ಮಾತನಾಡಿರುವ ಸಿ.ಎನ್.ಅಶ್ವತ್ ನಾರಾಯಣ್ ಅವರು “ಗ್ರಾಮೀಣ ಭಾಗದಲ್ಲಿ ಮಹಿಳೆಯರ ಬದುಕಿನಲ್ಲಿ ಅಮೂಲಾಗ್ರ ಬದಲಾವಣೆಗಾಗಿ ಜೀವನೋಪಾಯ ಅಭಿಯಾನ ಹಲವು ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ.ಅದರಲ್ಲಿ ಕೃಷಿ ಪೌಷ್ಟಿಕ ತೋಟ ಯೋಜನೆ ಮಹತ್ವದ್ದಾಗಿದೆ. ಇಡೀ ದೇಶದಲ್ಲಿಯೇ ನಮ್ಮ ರಾಜ್ಯದಲ್ಲಿ ಹೆಚ್ಚಿನ ತೋಟಗಳನ್ನು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Read More